spot_img
spot_img

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

spot_img
spot_img

Share post:

New Delhi News :

ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದಿಸಿದೆ.ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ”ಪ್ರತಿ ಕ್ವಿಂಟಲ್‌ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ (ಮಿಲ್ಲಿಂಗ್‌) ಕೊಬ್ಬರಿಗೆ 422 ರೂ. ದರ ಹೆಚ್ಚಿಸಲಾಗಿದೆ. ಕ್ವಿಂಟಲ್‌ ಉಂಡೆ ಕೊಬ್ಬರಿಗೆ 12,100 ಸಾವಿರ ರೂ. ಹಾಗೂ ಹೋಳಾದ ಕೊಬ್ಬರಿಗೆ 11,582 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ,” ಎಂದು ವಿವರಿಸಿದರು.”ಕೃಷಿ ವೆಚ್ಚ ಮತ್ತು ಬೆಲೆ ಆಯೋಗದ (ಸಿಎಸಿಪಿ) ಶಿಫಾರಸು ಅನ್ವಯ ಈ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಇದಕ್ಕಾಗಿ 855 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಉತ್ಪಾದನಾ ವೆಚ್ಚಕ್ಕಿಂತಲೂ ಶೇ 50ರಷ್ಟು ಹೆಚ್ಚು ಎಂಎಸ್ಪಿ ನಿಗದಿಪಡಿಸಲಾಗಿದೆ,” ಎಂದು ತಿಳಿಸಿದರು.

ಎಂಎಸ್ಪಿ ಹೆಚ್ಚಳವು ರೈತರ ಆದಾಯ ಹೆಚ್ಚಳಕ್ಕೆ ನೆರವಾಗಲಿದೆ. ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೇಡಿಕೆಗೆ ಅನುಗುಣವಾಗಿ ಕೊಬ್ಬರಿ ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಳಕ್ಕೆ ಸಹಕಾರಿಯಾಗಲಿದೆ ಸರ್ಕಾರ ಹೇಳಿದೆ. ದೇಶದಲ್ಲಿ ಕೊಬ್ಬರಿ ಋತು ಜನವರಿಯಿಂದ ಆರಂಭವಾಗಲಿದ್ದು, ಏಪ್ರಿಲ್‌ ತನಕ ಇರುತ್ತದೆ.ಇಡೀ ದೇಶದ ಕೊಬ್ಬರಿ ಉತ್ಪಾದನೆ ಪೈಕಿ ಕರ್ನಾಟಕದ ಪಾಲು ಶೇ. 32.7ರಷ್ಟಿದೆ. ತಮಿಳುನಾಡು ಶೇ. 25.7, ಕೇರಳ ಶೇ. 25.4 ಹಾಗೂ ಆಂಧ್ರಪ್ರದೇಶವು ಶೇ 7.7ರಷ್ಟು ಪಾಲು ಹೊಂದಿವೆ.2014ರಲ್ಲಿ ಮಿಲ್ಲಿಂಗ್ ಕೊಬ್ಬರಿ ಹಾಗೂ ಇಡಿ ಕೊಬ್ಬರಿ ಎಂಎಸ್‌ಪಿ ಕ್ವಿಂಟಾಲ್‌ಗೆ ಕ್ರಮವಾಗಿ 5,250 ರೂ ಮತ್ತು 5500 ರೂ ಇತ್ತು. ಆದರೆ ಹಿಂದಿನ ಹತ್ತು ವರ್ಷಗಳಿಗೆ ಹೋಲಿಸಿದರೆ 2025ನೇ ಅವಧಿಗೆ ಇದು ಶೇ 121 ಹಾಗೂ ಶೇ 120ರಷ್ಟು ಏರಿಕೆಯಾಗಿದೆ ಎಂದು ಸರಕಾರ ತಿಳಿಸಿದೆ.

Central decision to open AI labs in cities :

ದೇಶದ 2 ಮತ್ತು 3ನೇ ಶ್ರೇಣಿ ನಗರಗಳಲ್ಲಿ ದತ್ತಾಂಶ ಮತ್ತು ಕೃತಕ ಬುದ್ಧಿಮತ್ತೆ (ಎಐ) ಲ್ಯಾಬ್‌ ತೆರೆಯಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಪ್ರಸ್ತಾವಗಳನ್ನು ಆಹ್ವಾನಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್‌ ಮತ್ತು ಐ.ಟಿ ಖಾತೆಯ ಸಹಾಯಕ ಸಚಿವ ಜಿತಿನ್‌ ಪ್ರಸಾದ್‌ ರಾಜ್ಯಸಭೆಗೆ ತಿಳಿಸಿದ್ದಾರೆ.‘‘ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಅನುಮೋದಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿಓದುತ್ತಿರುವ 400 ಬಿ.ಟೆಕ್‌ ಮತ್ತು 500 ಎಂ.ಟೆಕ್‌ ವಿದ್ಯಾರ್ಥಿಗಳಿಗೆ ಇಂಡಿಯಾ ಎ.ಐ ಫೆಲೋಶಿಪ್‌ ನೀಡಲಾಗುತ್ತಿದೆ,’’ ಎಂದು ವಿವರಿಸಿದ್ದಾರೆ.‘‘ಇಂಡಿಯಾ ಎಐ ಮಿಷನ್‌ ಮೂಲಕ ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸಹಭಾಗಿತ್ವದಡಿ 27 ಲ್ಯಾಬ್‌ಗಳನ್ನು ತೆರೆಯಲಾಗುವುದು. ಇದಕ್ಕಾಗಿ ನಗರಗಳ ವ್ಯಾಪ್ತಿಯಲ್ಲಿರುವ ಪ್ರಮುಖ ಕೈಗಾರಿಕಾ ತರಬೇತಿ ಕೇಂದ್ರ ಹಾಗೂ ಪಾಲಿಟೆಕ್ನಿಕ್‌ಗಳ ಪಟ್ಟಿ ಸಲ್ಲಿಸುವಂತೆ ಕೋರಲಾಗಿದೆ,’’ಎಂದು ಹೇಳಿದ್ದಾರೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...