spot_img
spot_img

Cold wave : ರಾಜ್ಯದಲ್ಲಿ ಮೂರು ದಿನ ಭಾರೀ ಚಳಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Meteorological Department news :

ಮುಖ್ಯವಾಗಿ ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ತೀವ್ರ ಶೀತ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಈ ಬಾರಿ ವಾಡಿಕೆ ಪ್ರಮಾಣದ ಹಿಂಗಾರು, ಮುಂಗಾರು rain ಹಾಗೂ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯು ಚಂಡಮಾರುತದಿಂದಾಗಿ ರಾಜ್ಯದ ಒಳನಾಡಿನಲ್ಲಿ ಶುಷ್ಕ ವಾತಾವರಣ ನಿರ್ಮಾಣವಾಗಿದೆ.

Red Alert :

ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಇಂದಿನಿಂದ ಮೂರು ದಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಅದೇ ಭಾಗದ ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಕಡಿಮೆ ತಾಪಮಾನವಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಕಂಡುಬರಲಿದೆ. ಇನ್ನು ಈ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಡೆ ಮೂರು ದಿನಗಳ ಕಾಲ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಯಲ್ಲಿ 6 ರಿಂದ 7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಇದು ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಕಡಿಮೆ ತಾಪಮಾನವಾಗಿದೆ. ಇನ್ನು ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ಶೀತ ಅಲೆಯ ಇರಲಿದ್ದು, ಅಲ್ಲಿ ತಾಪಮಾನ ಸುಮಾರು 10 ಡಿಗ್ರಿ ಸೆಲ್ಸಿಯಸ್ ಇರಲಿದೆ.

Bangalore Weather:

ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ವಾಯು ಚಂಡಮಾರುತದ ಪರಿಚಲನೆಯು ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ವರೆಗೆ ವಿಸ್ತರಿಸಿದೆ. ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ – ವಾಯುವ್ಯ ಮಾರ್ಗವಾಗಿ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ನಿರ್ಮಲ ಆಕಾಶ ಕಾಣಸಿಗಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಡಿಗ್ರಿ ಮತ್ತು 15 ಡಿಗ್ರಿ ದಾಖಲಾಗುವ ಸಂಭವವಿದೆ ಎಂದು ಮಾಹಿತಿ ನೀಡಲಾಗಿದೆ.

ಈ ಬಾರಿಯ ಮಳೆ ಮತ್ತು ಚಂಡಮಾರುತಗಳ ಪರಿಣಾಮ ಇಂದಿನಿಂದ ರಾಜ್ಯದ ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ ಉಂಟಾಗಲಿದ್ದು, ಮೂರು ದಿನಗಳ ಕಾಲ ತಾಪಮಾನದಲ್ಲಿ ಸಾಕಷ್ಟು ಇಳಿಕೆ ಕಂಡುಬರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದ ಮೇಲಿನ ವಾಯು ಚಂಡಮಾರುತದ ಪರಿಚಲನೆ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದ್ಲಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಹಿಂಗಾರು ಮಳೆ ಸದ್ಯ ದುರ್ಬಲವಾಗಿದೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Centenary of the session : ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ

Bangalore News: ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...

New year 2025 : ಬೆಂಗಳೂರು ಮಹಾನಗರದಲ್ಲಿ ಹೊಸವರ್ಷಕ್ಕೆ ಸಿದ್ಧತೆ

Bangalore News: ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅವಘಡ ಸಂಭವಿಸದಂತೆ ತಡೆಯಲು ಯೋಜನೆ ರೂಪಿಸುತ್ತಿದೆ. ಈಗಾಗಲೇ ಜಂಟಿ ಸಭೆ ನಡೆಸಿರುವ ಪಾಲಿಕೆ...

GST ON USED EV CAR SALE BY BUSINESS : ಬಳಸಿದ ಎಲೆಕ್ಟ್ರಾನಿಕ್ ವಾಹನಗಳ(EV) ಮಾರಾಟದ ಮೇಲೆ ಶೇ.18ರಷ್ಟು ಜಿಎಸ್ಟಿ

Jaisalmer (Rajasthan) News: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಶನಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ, ಬಳಸಿದ ಎಲೆಕ್ಟ್ರಾನಿಕ್‌ ವಾಹನಗಳ ಮಾರಾಟದ...

SHOBHA YATRA – ಜೈನ ಸಮುದಾಯದ ಅದ್ಧೂರಿ ಶೋಭಾಯಾತ್ರೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಂದ ಚಾಲನೆ

Tumkur News: ತುಮಕೂರಿನಲ್ಲಿ ಜೈನ ಸಮುದಾಯದ ಅದ್ಧೂರಿ ಶೋಭಾಯಾತ್ರೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು.ನಗರದ ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಅಭಿನವ ಶ್ರೀಗಳನ್ನು...