spot_img
spot_img

ಗಡ್ಡ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ಸೂಚನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹಾಸನ: ಹೊಳೇ ನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ಬೋಳಿಸುವಂತೆ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ತಾಕೀತು ಮಾಡಿದ್ದು, ಇದಕ್ಕೆ ಒಪ್ಪದ ಮುಸ್ಲಿಂ ವಿದ್ಯಾರ್ಥಿಗಳು ಸಿಎಂ ಸಿದ್ದರಾಂಯ್ಯಗೆ ಪತ್ರ ಬರೆದಿದ್ದಾರೆ.

ಗಡ್ಡ ತೆಗೆಯುವಂತೆ ಆಡಳಿತ ಮಂಡಳಿ ತಮಗೆ ಸೂಚನೆ ನೀಡಿದೆ ಎಂದು ಜಮ್ಮುಕಾಶ್ಮೀರದ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಟ್ವೀಟ್​ ಮೂಲಕ ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಪಿಎಂಎಸ್‌ಎಸ್ ಯೋಜನೆಯಡಿ ನರ್ಸಿಂಗ್​ ಓದಲು ಜಮ್ಮು-ಕಾಶ್ಮೀರದಿಂದ 13ಕ್ಕೂ ಹೆಚ್ಚು ಮುಸ್ಲಿಂ ಯುವಕರು ಹೊಳೆನರಸೀಪುರಕ್ಕೆ ಬಂದಿದ್ದಾರೆ. ವಿದ್ಯಾರ್ಥಿಗಳು ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜೀನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಗಡ್ಡ ತೆಗೆದು ಕಾಲೇಜು ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ.

ವಿದ್ಯಾರ್ಥಿಗಳು ಗಡ್ಡ ತೆಗೆಯಲು ನಿರಾಕರಿಸಿದ್ದು, ನಮ್ಮ ಸಂಪ್ರದಾಯದಂತೆ ಗಡ್ಡ ಬಿಡುವುದು ನಮ್ಮ ಹಕ್ಕು. ಗಡ್ಡ ತೆಗೆಯುವಂತೆ ಸೂಚನೆ ನೀಡಿದ್ದು, ನಮ್ಮ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಮಧ್ಯಪ್ರವೇಶಿಸಿ ಸಮಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳು ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಹಾಗೂ ಅಲ್ಲಿನ ಪ್ರಮುಖ ನಾಯಕರಿಗೆ ಮನವಿ ಮಾಡಿದ್ದಾರೆ.

ಹೊಳೆನರಸೀಪುರದಲ್ಲಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅವರು ನ್ಯೂಸ್ 18ಗೆ ಪ್ರತಿಕ್ರಿಯಿಸಿದ್ದು, ನರ್ಸಿಂಗ್ ಕೋರ್ಸ್ ಆಗಿರುವುದರಿಂದ ಕ್ಲಿನಕಲ್ ಲ್ಯಾಬ್‌ನಲ್ಲಿ ಗಡ್ಡ ಬಿಟ್ಟುಕೊಂಡು ಭಾಗವಹಿಸಿದರೆ ಸಮಸ್ಯೆಯಾಗುತ್ತದೆ.

ಆದ್ದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಹೇಳಿದ್ದೇವೆ. ಕೇವಲ‌ ಮುಸ್ಲಿಂ ಯುವಕರಿಗೆ ಮಾತ್ರ ಗಡ್ಡ ತೆಗೆಯುವಂತೆ ಹೇಳಿಲ್ಲ. ಮೇಲಾಧಿಕಾರಿಗಳು ಯಾವ ರೀತಿ ಆದೇಶಿಸುತ್ತಾರೆ ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...