ಹುಬ್ಬಳ್ಳಿ: ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೆ ನಮ್ಮ ವಿರುದ್ದ ಯಾವುದೇ ದಾಖಲೆ ಇಲ್ಲದೇ ವಿನಾಕಾರಣ ಆರೋಪ ಮಾಡಿದ್ದರು.
ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಲೈಸೆನ್ಸ್ ನೀಡಲು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎನ್ನುವುದನ್ನು ಅವರೇ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.
ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಅಭಿವೃದ್ಧಿಯನ್ನು ಜನ ಅನುಭವಿಸಿದ್ದಾರೆ. ಕಾಂಗ್ರೆಸ್ ನವರ ಆಲೋಚನೆಗಳಿಗೂ ಶಿಗ್ಗಾವಿ ಜನರ ಆಲೋಚನೆಗಳಿಗೂ ಬಹಳ ವ್ಯತ್ಯಾಸ ಇದೆ.
ಶಿಗ್ಗಾವಿಯಲ್ಲಿ ತಾಲೂಕು ಮಟ್ಟದಲ್ಲಿ 200 ಬೆಡ್ ಆಸ್ಪತ್ರೆ, ಟೆಕ್ಸ್ ಟೈಲ್ ಪಾರ್ಕ್ , ಸವಣೂರಿನಲ್ಲಿ ಆಯುರ್ವೆದಿಕ್ ಕಾಲೇಜ್ , ಐಟಿಐ ಕಾಲೆಜ್, ಪ್ರವಾಹ ಸಂದರ್ಭದಲ್ಲಿ 12000 ಕ್ಕಿಂತ ಹೆಚ್ಚು ಮನೆ ನಿರ್ಮಾಣ, ಬೆಂಗಳೂರಿಗಿಂತ ಒಳ್ಳೆಯ ರಸ್ತೆ ಶಿಗ್ಗಾವಿಯಲ್ಲಿವೆ.
ಅಲ್ಪ ಸಂಖ್ಯಾತರ ದರ್ಗಾ, ಮಸೀದಿ ಅಭಿವೃದ್ಧಿ ಗೆ 10 ಕೋಟಿ ರೂ. ಕೊಟ್ಟಿದ್ದೆ, ಇವರು ಬಂದು ಅದನ್ನು ವಾಪಸ್ ಪಡೆದುಕೊಂಡಿದ್ದಾರೆ.
ಮುಡಾ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ವಿರುದ್ದ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂಬ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಮುಡಾ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದ್ದಾರೆ.