Davangere news:
ಪೂರ್ವ ಸಿದ್ಧತಾ ಸಭೆಯನ್ನು ಜ. 16 ಕ್ಕೆ ನಿಗದಿಪಡಿಸಲಾಗಿದ್ದು, ಕಾರ್ಯಕ್ರಮದ ಸ್ಥಳ ಗುರುತಿಸಬೇಕಿದೆ.ದಾವಣಗೆರೆಯಲ್ಲಿ ಯಡಿಯೂರಪ್ಪ ಸಮಾವೇಶ ನಡೆಸಲು ರೇಣುಕಾಚಾರ್ಯ ಅಂಡ್ ಟೀಂ ಸಿದ್ದತೆ ನಡೆಸುತ್ತಿದ್ದಾರೆ. ಆದರೆ ಈ ಸಮಾವೇಶ ನಡೆಯುತ್ತಾ ಎಂಬ ಪ್ರಶ್ನೆ ಎದ್ದಿದೆ.
ಒಂದು ವೇಳೆ ಯಡಿಯೂರಪ್ಪರ ಸಮಾವೇಶ ನಡೆಸಿದರೆ ಇತ್ತ ಯತ್ನಾಳ್ ಆ್ಯಂಡ್ ಟೀಂ ಹಿಂದು ಸಮಾವೇಶ ಮಾಡಲು ನಿರ್ಧರಿಸಿದೆ.ಒಂದು ಕಡೆ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣ ರಾಜಕೀಯ, ಸಮಾವೇಶ ಮಾಡದಂತೆ ಸೂಚನೆ ನೀಡಿದ್ದಾರೆ. ಯಾರು ಏನೇ ಮಾಡಿದರೂ ಪಕ್ಷದ ಚೌಕಟ್ಟಿನಲ್ಲಿ ಮಾಡಬೇಕು ಎಂದಿದ್ದಾರೆ.
ಒಂದು ವೇಳೆ ಯಡಿಯೂರಪ್ಪರ ಸಮಾವೇಶ ನಡೆಸಿದರೆ ಇತ್ತ ಯತ್ನಾಳ್ ಆ್ಯಂಡ್ ಟೀಂ ಹಿಂದು ಸಮಾವೇಶ ಮಾಡಲು ನಿರ್ಧರಿಸಿದೆ.ಈ ಹಿಂದೆ ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮೋತ್ಸವ ಮಾಡಿದ ರೀತಿ ಯಡಿಯೂರಪ್ಪ ಸಮಾವೇಶ ನಡೆಸಲು ಮಾಜಿ ಶಾಸಕ ರೇಣುಕಾಚಾರ್ಯ ತಂಡ ತೀರ್ಮಾನ ಮಾಡಿದ್ದು, ಈ ಸಮಾವೇಶ ನಡೆಯುತ್ತಾ ಎಂಬ ಪ್ರಶ್ನೆ ಎದ್ದಿದೆ.
ಇದೀಗ ಅದೇ ಮಾದರಿಯಲ್ಲಿ ಯಡಿಯೂರಪ್ಪನವರ ಜನ್ಮದಿನೋತ್ಸವ ಆಚರಣೆಗೆ ಅವರ ಅಭಿಮಾನಿಗಳು ಮುಂದಾಗಿದ್ದಾರೆ. ಅಲ್ಲದೇ ಯಡಿಯೂರಪ್ಪ ಬಣದ ಮಾಜಿ ಶಾಸಕರು, ಮಾಜಿ ಸಚಿವರುಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಈ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಸಿದ್ಧರಾಮೋತ್ಸವ ರಾಜ್ಯ ರಾಜಕಾರಣದಲ್ಲಿ ಐತಿಹಾಸಿಕ ಸಮಾವೇಶವಾಗಿತ್ತು.
ಇದುವರೆಗೂ ಯಾವ ಪಕ್ಷದ ಸಮಾವೇಶದಲ್ಲಿ ಸೇರದಷ್ಟು ಜನ ಅಂದು ಸಿದ್ದರಾಮೋತ್ಸವದಲ್ಲಿ ಸೇರಿದ್ದರು. ಯಡಿಯೂರಪ್ಪ ಅಭಿಮಾನಿಗಳ ಬಳಗದ ಹೆಸರಿನಲ್ಲಿ ಈ ಜನ್ಮದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತದೆ.ಸಭೆ ಸೇರಿದ ಹತ್ತು ಜನರ ಒಂದು ಸಮಿತಿ ಮಾಡಲಾಗಿದೆ. ಈ ಸಮಿತಿ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ. ನಮ್ಮಲ್ಲಿ ಭಿನ್ನ ಮತವಿಲ್ಲ, ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುತ್ತೇವೆ.
ಸಭೆಯಲ್ಲಿ ದೆಹಲಿಗೆ ಹೋಗುವ ಬಗ್ಗೆ ಅಭಿಪ್ರಾಯ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ತೀರ್ಮಾನಗಳು ನಡೆಯುತ್ತಿವೆ.ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಫೆ.27 ರಂದು ದಾವಣಗೆರೆಯಲ್ಲಿ ಯಡಿಯೂರಪ್ಪ ಜನ್ಮದಿನ ಆಚರಣೆಗೆ ನಿರ್ಧಾರ ಮಾಡಲಾಗಿದೆ.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನಾಚರಣೆಯ ನೆಪದಲ್ಲಿ ಮಧ್ಯ ಕರ್ನಾಟಕದಲ್ಲಿ ಬೃಹತ್ ಸಮಾವೇಶ ಆಯೋಜಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಬಿ.ವೈ. ವಿಜಯೇಂದ್ರ ಪರ ಬಣ ಸಜ್ಜಾಗಿದೆ. ಬಿಜೆಪಿಯ ಬಣಗಳ ಕಿತ್ತಾಟ ಅನಿರ್ದಿಷ್ಟಾವಧಿಗೆ ಮುಂದುವರಿಯುವ ಸೂಚನೆಯನ್ನು ಇದು ನೀಡಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪದಚ್ಯುತಿಗೆ ಪಟ್ಟುಹಿಡಿದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಹೋರಾಡುತ್ತಿರುವ ಮುಖಂಡರು ಸಾಯಿ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ಸಭೆ ನಡೆಸಿದ್ದಾರೆ.
The fight against Yatnal reached central Karnataka :
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆಯಿಂದ ಆರಂಭವಾಗಿರುವ ಯತ್ನಾಳ್ ವಿರುದ್ಧದ ಹೋರಾಟ ಮಧ್ಯ ಕರ್ನಾಟಕ ತಲುಪಿದೆ. ‘ರಾಜಕೀಯ ಸಭೆ ನಡೆಸಬಾರದು’ ಎಂಬ ಪಕ್ಷದ ಸೂಚನೆಯ ನಡುವೆಯೂ ‘ಯಡಿಯೂರಪ್ಪ ಅಭಿಮಾನಿ ಬಳಗ’ದ ಹೆಸರಿನಲ್ಲಿ ನಗರದಲ್ಲಿ ಶನಿವಾರ ಮತ್ತು ಭಾನುವಾರ ಸಭೆ ನಡೆದಿದೆ. ರಾಜಕೀಯ, ಪಕ್ಷದ ಆಂತರಿಕ ಕಿತ್ತಾಟದ ಕುರಿತು ಚರ್ಚಿಸಲಾಗಿದೆ.
Formation of 10 member committee :
ಫೆ. 27 ರಂದು ಹಮ್ಮಿಕೊಂಡಿರುವ ಬಿ.ಎಸ್. ಯಡಿಯೂರಪ್ಪ ಜನ್ಮದಿನಾಚರಣೆಯ ಕಾರ್ಯಕ್ರಮದ ಸಿದ್ಧತೆಗೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ನೇತೃತ್ವದಲ್ಲಿ 10 ಜನರ ಸಮಿತಿ ರಚಿಸಲಾಗಿದೆ. ಎರಡು ತಿಂಗಳು ಪೂರ್ವ ಸಿದ್ಧತೆ ಮಾಡಿಕೊಂಡು ದಾವಣಗೆರೆಯಲ್ಲಿ ಲಕ್ಷಾಂತರ ಜನರನ್ನು ಸೇರಿಸಲು ತೀರ್ಮಾನಿಸಲಾಗಿದೆ. ಪೂರ್ವ ಸಿದ್ಧತಾ ಸಭೆಯನ್ನು ಜ. 16 ಕ್ಕೆ ನಿಗದಿಪಡಿಸಲಾಗಿದ್ದು, ಕಾರ್ಯಕ್ರಮದ ಸ್ಥಳ ಗುರುತಿಸಬೇಕಿದೆ.