spot_img
spot_img

CONGRESS PARTY NEW HQ:ಕಾಂಗ್ರೆಸ್ನ ನೂತನ ಪ್ರಧಾನ ಕಚೇರಿ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಿರಿಯ CONGRESSನಾಯಕರು ಮತ್ತು ದೇಶಾದ್ಯಂತದ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೂತನ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿ ‘ಇಂದಿರಾ ಭವನ’ವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಉದ್ಘಾಟಿಸಿದರು.

Congress Headquarters at New Address:ಹೊಸ ಪ್ರಧಾನ ಕಚೇರಿಯು ಪ್ರಜಾಪ್ರಭುತ್ವ, ರಾಷ್ಟ್ರೀಯತೆ, ಜಾತ್ಯತೀತತೆ, ಅಂತರ್ಗತ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ತತ್ವಗಳ ಆಧಾರದಲ್ಲಿ ನಿರ್ಮಾಣವಾಗಿರುವ ಸ್ಮಾರಕವಾಗಿದೆ ಎಂದು ಕಾಂಗ್ರೆಸ್ ಪಕ್ಷ ಬಣ್ಣಿಸಿದೆ.ಕೋಟ್ಲಾ ರಸ್ತೆಯ 9ಎ ವಿಳಾಸದಲ್ಲಿ ಪಕ್ಷದ ಹೊಸ ಪ್ರಧಾನ ಕಚೇರಿ ನಿರ್ಮಾಣವಾಗಿದೆ. ಕಳೆದ 47 ವರ್ಷಗಳಿಂದ ಅಕ್ಬರ್ ರಸ್ತೆಯ ಕಚೇರಿಯಿಂದ ಕಾರ್ಯನಿರ್ವಹಿಸುತ್ತಿರುವ ಗ್ರ್ಯಾಂಡ್ ಓಲ್ಡ್ ಪಕ್ಷದ ಇತಿಹಾಸದಲ್ಲಿ ಇದೊಂದು ಪ್ರಮುಖ ಮೈಲಿಗಲ್ಲಾಗಿದೆ.

A new building with a grand history of 140 years: ಹೊಸ ಶಕ್ತಿ, ಸಂಕಲ್ಪ ಮತ್ತು ವಿಶ್ವಾಸದೊಂದಿಗೆ, ಭಾರತದ ಉಜ್ವಲ ಭವಿಷ್ಯವನ್ನು ರೂಪಿಸಲು, ಜನರ ಒಳಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ನ್ಯಾಯದ ಧ್ವಜವನ್ನು ಹಾರಿಸಲು CONGRESS ಸಿದ್ಧವಾಗಿದೆ” ಎಂದು ಕಾಂಗ್ರೆಸ್ ಪಕ್ಷ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ. ಈ ಕಟ್ಟಡವು ಸೇವೆ, ಸಾಮರಸ್ಯ, ಸಮರ್ಪಣೆ ಮತ್ತು ದೇಶಭಕ್ತಿಯ ಸಂಕೇತವಾಗಿದೆ ಎಂದು ಪಕ್ಷ ಹೇಳಿದೆ.”ಕಾಂಗ್ರೆಸ್​ನ 140 ವರ್ಷಗಳ ಭವ್ಯ ಇತಿಹಾಸವನ್ನು ಸಾರುವ ಇಲ್ಲಿನ ಗೋಡೆಗಳು ಸತ್ಯ, ಅಹಿಂಸೆ, ತ್ಯಾಗ, ಹೋರಾಟ ಮತ್ತು ದೇಶಭಕ್ತಿಯ ಕಥೆಯನ್ನು ಹೇಳುತ್ತವೆ.

A symbol of truth, non-violence, sacrifice and struggle- Mallikarjun Kharge:ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ನ 140 ವರ್ಷಗಳ ಭವ್ಯ ಇತಿಹಾಸವನ್ನು ಸಂಕೇತಿಸುವ ಇಲ್ಲಿನ ಗೋಡೆಗಳು ಸತ್ಯ, ಅಹಿಂಸೆ, ತ್ಯಾಗ, ಹೋರಾಟ ಮತ್ತು ದೇಶಭಕ್ತಿಯ ಮಹಾನ್ ಕಥೆಯನ್ನು ಹೇಳುತ್ತವೆ.” ಎಂದರು.ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, CONGRESS ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಭವನ’ವು ಪ್ರಜಾಪ್ರಭುತ್ವ, ರಾಷ್ಟ್ರೀಯತೆ, ಜಾತ್ಯತೀತತೆ, ಅಂತರ್ಗತ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಅಡಿಪಾಯದ ಮೇಲೆ ನಿರ್ಮಾಣವಾಗಿದೆ.

We are inaugurating the building on a very important occasion – Rahul Gandhi: ಈ ಕಟ್ಟಡವು ಸಾಮಾನ್ಯ ಕಟ್ಟಡವಲ್ಲ. ಇದು ನಮ್ಮ ದೇಶದ ಮಣ್ಣಿನಿಂದ ಹೊರಹೊಮ್ಮಿದೆ, ಇದು ಲಕ್ಷಾಂತರ ಜನರ ಕಠಿಣ ಪರಿಶ್ರಮ ಮತ್ತು ತ್ಯಾಗವನ್ನು ಪ್ರತಿನಿಧಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಫಲ ನಮ್ಮ ಸಂವಿಧಾನ. ಆದರೆ ಮೋಹನ್ ಭಾಗವತ್ ನಮ್ಮ ಸಂವಿಧಾನವನ್ನೇ ಸಾಂಕೇತಿಕವಾಗಿ ಟೀಕಿಸಿದ್ದಾರೆ. ಸಂವಿಧಾನವು ನಮ್ಮ ಸ್ವಾತಂತ್ರ್ಯವನ್ನು ಸಂಕೇತಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ,CONGRESS ಪಕ್ಷವು ಯಾವಾಗಲೂ ಒಂದು ನಿರ್ದಿಷ್ಟ ಮೌಲ್ಯಗಳ ಪರವಾಗಿ ನಿಂತಿದೆ, ಅದು ಈ ಕಟ್ಟಡದಲ್ಲಿ ಪ್ರತಿಬಿಂಬಿತವಾಗಿದೆ.” ಎಂದರು. ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾವು ನಮ್ಮ ಹೊಸ ಪ್ರಧಾನ ಕಚೇರಿಯನ್ನು ಬಹಳ ಮಹತ್ವದ ಸಮಯದಲ್ಲಿ ಉದ್ಘಾಟಿಸುತ್ತಿದ್ದೇವೆ. ಭಾರತಕ್ಕೆ 1947 ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಗಲಿಲ್ಲ, ಬದಲಾಗಿ ರಾಮ ಮಂದಿರ ನಿರ್ಮಾಣದ ನಂತರ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ನಿನ್ನೆ ಆರ್​ಎಸ್​​ಎಸ್​ ಮುಖ್ಯಸ್ಥರು ಹೇಳಿರುವುದು ಸಾಂಕೇತಿಕವಾಗಿದೆ.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಗೌರವಾರ್ಥ ಇಂದಿರಾ ಭವನ್ ಎಂದು ಹೆಸರಿಸಲಾದ ಪ್ರಧಾನ ಕಚೇರಿ 15 ವರ್ಷಗಳಿಂದ ನಿರ್ಮಾಣ ಹಂತದಲ್ಲಿತ್ತು.ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು, ಖಾಯಂ ಮತ್ತು ವಿಶೇಷ ಆಹ್ವಾನಿತರು, ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್​ಪಿ) ನಾಯಕರು, ಉಭಯ ಸದನಗಳ ಸಂಸದರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ಪಿಸಿಸಿ ಅಧ್ಯಕ್ಷರು, ಮಾಜಿ ಸಿಎಲ್​ಪಿ ನಾಯಕರು ಮತ್ತು ಮಾಜಿ ಕೇಂದ್ರ ಸಚಿವರು ಸೇರಿದಂತೆ ಕನಿಷ್ಠ 400 ಪ್ರಮುಖ ಕಾಂಗ್ರೆಸ್ ಮುಖಂಡರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...