Bangalore/Belagavi News:
1924ರಲ್ಲಿ ಡಿ. 26ರ ಮಧ್ಯಾಹ್ನ 3 ಗಂಟೆಗೆ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ನಡೆದಿತ್ತು. ಅದೇ ಸಮಯದಲ್ಲಿ ನಾಳೆ ಕೂಡ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಜರುಗಲಿದೆ. ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮಕ್ಕೆ ಕುಂದಾನಗರಿಯಲ್ಲಿ ಭರದ ಸಿದ್ಧತೆ ನಡೆದಿದೆ.
Film screening of Congress session:
ಬೆಳಗಾವಿಯ ಗಲ್ಲಿ ಗಲ್ಲಿಗಳಲ್ಲಿ ಮಹಾತ್ಮಗಾಂಧಿ ಹೆಜ್ಜೆ ಗುರುತುಗಳನ್ನು ನೆನಪಿಸುವ ಸ್ವಾತಂತ್ರ್ಯ ಹೋರಾಟದ ಸನ್ನಿವೇಶವನ್ನು ಜನರಿಗೆ ಪರಿಚಯಿಸುವ ಕೆಲಸ ನಡೆಯುತ್ತಿದೆ. ಮತ್ತೊಂದೆಡೆ ವೃತ್ತಗಳು, ಮುಖ್ಯರಸ್ತೆಗಳು, ದ್ವಾರಗಳಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಚಿತ್ರ ಪ್ರದರ್ಶಿಸಲಾಗಿದೆ. ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದೆ. ದೇಶ, ರಾಜ್ಯದ ವಿವಿಧ ಭಾಗಗಳಿಂದ ಅಂದಾಜು 1.50 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ನಗರದ ಸಿಪಿಎಡ್ ಮೈದಾನದಲ್ಲಿ ಡಿ.27ರಂದು ನಡೆಯಲಿರುವ ಸಮಾವೇಶದಲ್ಲಿ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು ಸೇರಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸುವ ಅಂದಾಜು 1.50 ಲಕ್ಷ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ದೂರದ ಊರುಗಳಿಂದ ಬರುವವರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ 5 ಸಾವಿರಕ್ಕೂ ಅಧಿಕ ಜನರಿಗೆ ವಸತಿ ವ್ಯವಸ್ಥೆ ಇರಲಿದೆ.
Special hospitality for dignitaries:
ಡಿ.26ರಂದು ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಭೆಗೆ ಆಗಮಿಸುತ್ತಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ನಾಲ್ಕು ರಾಜ್ಯದ ಮುಖ್ಯಮಂತ್ರಿಗಳು, 150 ಸಂಸದರು ಸೇರಿ ಸುಮಾರು 215 ಗಣ್ಯರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ.
10 thousand policemen for security:
ಡಿ.27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಹತ್ತು ಸಚಿವರಿಗೆ ಉಸ್ತುವಾರಿ ವಹಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಈ ಎಲ್ಲ ನಾಯಕರ ಆಗಮನದ ಹಿನ್ನೆಲೆಯಲ್ಲಿ ಸರ್ಕಾರ ಭದ್ರತೆಗೆ 10 ಸಾವಿರ ಪೊಲೀಸರನ್ನು ನಿಯೋಜಿಸಿದೆ. ಗುರುವಾರ (ಡಿ. 26ರಿಂದ) ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. ನಾಳೆ ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಜರುಗಲಿದೆ.