spot_img
spot_img

ನೀರು ಶುದ್ಧೀಕರಣ ಘಟಕ ಯೋಜನೆ ನಿರ್ಮಾಣ : ಸಚಿವ ಬೈರತಿ ಸುರೇಶ್

spot_img
spot_img

Share post:

ಬೆಂಗಳೂರು/ಬೆಳಗಾವಿ : ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಒದಗಿಸಲು ಗಾಜನೂರು ಸಮೀಪ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್​ಒಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್​ಒಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದರು.
ಶಿವಮೊಗ್ಗ ನಗರದಲ್ಲಿ ಶೇ.74ರಷ್ಟು ಒಳಚರಂಡಿ ವ್ಯವಸ್ಥೆ ಇದೆ. 115 ಕೋಟಿ ವೆಚ್ಚದಲ್ಲಿ 3ನೇ ಹಂತದ ಸಮಗ್ರ ಒಳಚರಂಡಿ ಯೋಜನೆಯಡಿ, ಏರಿಟೆಡ್ ಲಗೂನ್ ತಂತ್ರಜ್ಞಾನ ಆಧರಿಸಿ 35.58 ಎಂಎಲ್​ಡಿ ತ್ಯಾಜ್ಯ ನೀರು ಶುದ್ದೀಕರಣ ಘಟಕ, 3 ವೆಟ್‌ವೆಲ್, 262 ಕಿ.ಮೀ ಉದ್ದದ ಗ್ರಾಮಸಾರ ಕೊಳವೆ ಮಾರ್ಗವನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂಎಲ್​ಡಿ, 1996ರಲ್ಲಿ 13.38 ಎಂಎಲ್​ಡಿ ಹಾಗೂ 2009ರಲ್ಲಿ 57 ಎಂಎಲ್​ಡಿ ಸೇರಿ ಒಟ್ಟು 84 ಎಂಎಲ್​ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 1976 ಮತ್ತು 1996ರಲ್ಲಿ ನಿರ್ಮಿಸಿರುವ ಶುದ್ಧೀಕರಣ ಘಟಕಗಳು ಶಿಥಿಲಾವಸ್ಥೆಯಲ್ಲಿವೆ ಎಂದರು.
ಇವುಗಳ ಬದಲು ಹೊಸದಾಗಿ ಶುದ್ಧೀಕರಣ ಘಟಕ ನಿರ್ಮಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ಗಾಜನೂರು ಅರಣ್ಯ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗಿದೆ. ಈ ಸ್ಥಳದಿಂದ ಗುರುತ್ವಾಕರ್ಷಣೆ ಮೂಲಕ ಶಿವಮೊಗ್ಗ ನೀರು ಸರಬರಾಜು ಮಾಡಬಹುದು. ಈ ಸಂಬಂಧ ಸರ್ವೆ ಕಾರ್ಯ ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ತಿಳಿಸಿದರು.
ಅಮೃತ್ ಯೋಜನೆಯಡಿ 58 ಕೋಟಿ ರೂ ಹಾಗೂ 7 ಕೋಟಿ ರೂ ಹೆಚ್ಚುವರಿ ಅನುದಾನದಡಿ ಮಹಾನಗರ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಗೃಹ ಸಂಪರ್ಕಿತ ಒಳಚರಂಡಿ ಕೊಳವೆ ಮಾರ್ಗ, ಹಳೆ ಕೊಳವೆ ಮಾರ್ಗಗಳ ಪುನರುಜ್ಜೀವನ, 4 ವೆಟ್‌ವಲ್, 6 ಪಂಪಿಂಗ್ ಮೆಷಿನರಿ, ಡಿ.ಜಿ. ರೂಮ್, ಡಿ.ಜೆ.ಸೆಟ್ ಮತ್ತು ಟ್ರಾನ್ಸ್‌ಫಾರ್ಮರ್ ಸಬ್​ಸ್ಟೇಷನ್, 11 ಕೆ.ವಿ. ಎಕ್ಸ್​ಪ್ರೆಸ್ ಫೀಡರ್ ವಿದ್ಯುತ್ ಲೈನ್, 5.13 ಎಂಎಲ್​ಡಿ ಸಾಮರ್ಥ್ಯದ ತ್ಯಾಜ್ಯ ನೀರಿನ ಶುದ್ದೀಕರಣ ಘಟಕ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸರ್ಕಾರ ರಾಜ್ಯ ಹಣಕಾಸು ನಿಗಮ ಬೃಹತ್ ಬೆಂಗಳೂರು ಸೇರಿ ಇತರೆ 10 ಮಹಾನಗರ ಪಾಲಿಕೆಗಳಿಗೆ ಒಟ್ಟು 2 ಸಾವಿರ ಕೋಟಿ ರೂ. ಅನುದಾನ ನೀಡಿದೆ. ಇದರಲ್ಲಿ ಶಿವಮೊಗ್ಗ ನಗರಕ್ಕೆ 140 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...