ಹೇ ಸೀತಾರಾಮ್ ನ್ಯೂಸ್ ಡೆಸ್ಕ್ –ಇಡೀ ವಿಶ್ವ ಒಂದು ಬಾರಿಯಲ್ಲ ಎರಡೆರಡು ಬಾರಿ ಕೊರೊನಾ ಎಂಬ ಹೆಮ್ಮಾರಿಯಿಂದ ತತ್ತರಿಸಿ ಹೋಗಿದ್ದು ಈ ಶತಮಾನದ ಕರಾಳ ಇತಿಹಾಸ. ಇಡೀ ಜಗತ್ತೇ ನಿಷ್ಕ್ರೀಯವಾಗಿ, ಸ್ತಬ್ಧಗೊಂಡಿತ್ತು ಆ ಸಮಯದಲ್ಲಿ ಲಕ್ಷ, ಲಕ್ಷ ಸಂಖ್ಯೆಯಲ್ಲಿ ಜನರು ಸಾವನ್ನಪ್ಪಿದ್ದರು. ಈಗ ಮತ್ತೊಂದು ಭೀಕರ ಹೆಮ್ಮಾರಿ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.ಇದನ್ನೂ ಓದಿ:Priyank Kharge ಮನೆ ನೆಲಸಮಗೊಳಿಸಲು Siddalinga Swamiji ಸವಾಲ್?
ಎಮ್ ಫಾಕ್ಸ್ ಅಥವಾ ಮಂಕಿ ಫಾಕ್ಸ್ ಸೋಂಕು ಈಗ ಆಫ್ರಿಕಾದ ಬಳಿಕ ಪಾಕಿಸ್ತಾನದಲ್ಲಿಯೂ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಪಾಕಿಸ್ತಾನದಲ್ಲಿ ಈಗಾಗಲೇ ಮೂವರಲ್ಲಿ ಮಂಕಿಫಾಕ್ಸ್ ಸೋಂಕು ದೃಢವಾಗಿದೆ. ಯುಎಇ ಯಿಂದ ಪಾಕಿಸ್ತಾನಕ್ಕೆ ಬಂದ ಮೂವರಲ್ಲಿ ಮಂಕಿ ಫಾಕ್ಸ್ ದೃಢಗೊಂಡಿದ್ದು. ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡುವ ಕಾರಣ ಆತಂಕವಂತೂ ಉದ್ಭವಿಸಿದೆ.
ಮೊದಲಿಗೆ ಆಫ್ರಿಕಾದಲ್ಲಿ ಕಂಡು ಬಂದ ಮಂಕಿಫಾಕ್ಸ್ 504 ಜನರನ್ನು ಈಗಾಗಲೇ ಬಲಿ ಪಡೆದಿದೆ.ಆಫ್ರಿಕಾ, ಸ್ವೀಡನ್ ಬಳಿಕ ಈಗ ಪಾಕಿಸ್ತಾನಕ್ಕೆ ಎಂಟ್ರಿ ಕೊಟ್ಟಿರುವ ಮಂಕಿಫಾಕ್ಸ್ ಜಾಗತಿಕವಾಗಿ ಆತಂಕ ಸೃಷ್ಟಿಸಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಈ ಮಂಕಿ ಫಾಕ್ಸ್ನ್ನು ವರ್ಲ್ಡ್ ಹೆಲ್ತ್ ಎಮರ್ಜೆನ್ಸಿ ಎಂದು ಘೋಷಿಸಿದೆ. ಈಗಾಗಲೇ ಈ ಕಾಯಿಲೆ 117ಕ್ಕೂ ಹೆಚ್ಚು ದೇಶಗಳಿಗೆ ಈ ಕಾಯಿಲೆ ಹರಡಿದ್ದು ದೊಡ್ಡ ಚಿಂತೆಗೆ ಕಾರಣವಾಗಿದೆ.
ಏನಿದು ಮಂಕಿ ಫಾಕ್ಸ್?
ಮಂಕಿ ಫಾಕ್ಸ್ ಅಂದ್ರೆ ಅದು ಕೂಡ ಒಂದು ವೈರಲ್ ಇನ್ಫೆಕ್ಷನ್. ಇದು ಸಾಮಾನ್ಯವಾಗಿ ಮನುಷ್ಯರು ಮತ್ತು ಪ್ರಾಣಿಗಳಲ್ಲಿ ಕಾಣ ಸಿಗುತ್ತದೆ. ಇದು ಸ್ಮಾಲ್ ಫಾಕ್ಸ್ನ ಮತ್ತೊಂದು ತಳಿ ಇದ್ದಂತೆ. ಈಗಾಗಲೇ ಸ್ಮಾಲ್ ಫಾಕ್ಸ್ನ್ನು ನಿರ್ಮೂಲನೆ ಮಾಡಲಾಗಿದೆ. ಅದರ ತಳಿಯಾಗಿರುವ ಈ ಮಂಕಿ ಫಾಕ್ಸ್ ಈಗ ಆತಂಕ ಸೃಷ್ಟಿಸಿದೆ. ಮಂಕಿ ಫಾಕ್ಸ್ ಅನ್ನೋದು ಚರ್ಮಕ್ಕೆ ಸಂಬಂಧಿಸಿದ ಸೋಂಕು. ಚರ್ಮದ ಮೇಲೆ ಗುಳ್ಳೆಗಳು ಏಳಲು ಶುರುವಾಗುತ್ತವೆ. ನಂತರ ಇಡೀ ಮೈಗೆ ವ್ಯಾಪಿಸಿಕೊಂಡು ಮೊಡವೆಗಳಲ್ಲಿ ಕೀವು ತುಂಬಿ ಇಲ್ಲದ ಸಮಸ್ಯೆಗಳಿಗೆ ಕಾರಣವಾಗುತ್ತದೆ.
ಇದನ್ನೂ ಓದಿ: Russia VS Ukraine: ಪರಿಸ್ಥಿತಿ ಕೆಡುತ್ತಿದೆ! ಏನು ಹೇಳುತ್ತಿದೆ Russia?
ಇದು ಮೊದಲ ಬಾರಿ 1958ರಲ್ಲಿ ಕಂಡು ಹಿಡಿಯಲಾಗಿತ್ತು. ಕೋತಿಗಳ ಮೇಲೆ ನಡೆದ ಅನೇಕ ಸಂಶೋಧನೆಗಳು ಇಂಥಹದೊಂದು ರೋಗ ಇದೆ ಅನ್ನೋದನ್ನು ತಿಳಿಸಿತ್ತು. 1970ರಲ್ಲಿ ಕಾಂಗೋದಲ್ಲಿ 9 ತಿಂಗಳ ಮಗುವಿನಲ್ಲಿ ಮೊಟ್ಟ ಮೊದಲ ಬಾರಿಗೆ ಈ ಕಾಯಿಲೆ ಕಾಣಿಸಿಕೊಂಡಿತ್ತು.
ಪ್ರಾಣಿಗಳ ಕಡಿತದಿಂದ, ಅವುಗಳ ಉಗುರಿನಿಂದ ಪರಚುವುದರಿಂದ, ಇಲ್ಲವೇ ಸೋಂಕು ಕಾಣಿಸಿಕೊಂಡವರೊಂದಿಗಿನ ಸಂಪರ್ಕದಿಂದ ಈ ಸೋಂಕು ತಗಲುತ್ತದೆ. ಸ್ನಾಯುಗಳಲ್ಲಿ ವಿಪರೀತ ನೋವು. ಮುಖ, ಕೈ, ಕಾಲುಗಳಲ್ಲಿ ಸೇರಿ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳು ಏಳುತ್ತವೆ. ಈ ರೀತಿಯ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಿ. ಮನೆಯಲ್ಲಿ ಕುಟುಂಬದವರೊಂದಿಗೆ ಸಂಪರ್ಕದಿಂದ ದೂರವಿರಿ.