spot_img
spot_img

ದೇಶದ ಸರಾಸರಿ GSDP ಏರುಗತಿ: ಕರ್ನಾಟಕದ ಪ್ರಗತಿ

spot_img
spot_img

Share post:

ಬೆಂಗಳೂರು: 2023-24ನೇ ಸಾಲಿನಲ್ಲಿ ಕರ್ನಾಟಕದ ಜಿಎಸ್ ಡಿಪಿ ಶೇ.10.2 ರಷ್ಟು ಹಣಕಾಸು ವರ್ಷದಲ್ಲಿ ಪ್ರಗತಿ ದಾಖಲಿಸಿದೆ ಎಂದು ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ.
ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು.
ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಭಾರತದ ಐಟಿ ವಲಯ 2022ರ ಹಣಕಾಸು ಸಾಲಿನಲ್ಲಿ ಶೇ.15.5 ರಷ್ಟು ಪ್ರಗತಿ ಕಂಡದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ.
ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ.
ಕರ್ನಾಟಕದ Gross State Value Added (ಜಿಎಸ್‌ವಿಎ) ಅಂದರೆ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್‌ ವಲಯದ ಪಾಲು ಶೇ.28ರಷ್ಟಿದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ.
ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿರಿಸಿ ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14ರಷ್ಟು ಅಂದಾಜಿಸಿದೆ.
2024ರ ಸೆಪ್ಟಂಬರ್‌ ಅವಧಿಯಲ್ಲಿ ಕರ್ನಾಟಕ ವರ್ಷದಿಂದ ವರ್ಷಕ್ಕೆ ಜಿಎಸ್‌ಟಿ ಸಂಗ್ರಹದಲ್ಲಿ ಶೇ.10ರಷ್ಟು ಹಾಗೂ ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಶೇ.24ರಷ್ಟು ಹೆಚ್ಚಳ ದಾಖಲಿಸಿದ್ದು, ಉತ್ತಮ ಆರ್ಥಿಕತೆಯನ್ನು ತೋರಿಸುತ್ತಿದೆ ಎಂದು ಸರ್ಕಾರ ಹೇಳಿದೆ.
ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ.
ಐಟಿ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೊಂದಿರುವುದು ದೇಶದ ಡಿಜಿಟಲ್‌ ಮತ್ತು ಆರ್ಥಿಕ ರಂಗದಲ್ಲಿ ಪ್ರಮುಖ ಪಾತ್ರ ವಹಿಸಲು ಕಾರಣವಾಗಿದೆ ಎಂದು ಸರ್ಕಾರ ತಿಳಿಸಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...