2024-25 ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನಾಂಗದವರ ಆರ್ಥಿಕ ಅಭಿವೃದ್ಧಿ ಸಂಬಂಧ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸ್ಲಲಿಸಲು ಇಚ್ಛಿಸುವ ಪರಿಶಿಷ್ಟ ಪಂಗಡದ ಅರ್ಹ ಫಲಾಪೇಕ್ಷಿಗಳು ಅರ್ಜಿಯನ್ನು ವೆಬ್ಸೈಟ್ ವಿಳಾಸ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದು.
ಯೋಜನೆಗಳ ಹೆಚ್ಚಿನ ಮಾಹಿತಿಯನ್ನು ಈ ಕಚೇರಿಯಿಂದ ಅಥವಾ ನಿಗಮದ ವೆಬ್ಸೈಟ್ https://kmvstdel.karnataka.gov.in ಮೂಲಕ ಪಡೆದುಕೊಳ್ಳುವುದು.
ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸೇವಾಸಿಂಧು ವೆಬ್ಸೈಟ್ ವಿಳಾಸ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್, 23 ಕೊನೆಯ ದಿನವಾಗಿದೆ. ಆನ್ಲೈನ್ ಅಪ್ಲೋಡ್ ಮಾಡಿ ಅರ್ಜಿಯನ್ನು ನವೆಂಬರ್, 23 ರೊಳಗೆ ಅರ್ಜಿ ಸಲ್ಲಿಸಿ, ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೊಡಗು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.