ಬೆಂಗಳೂರು: ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಇನ್ನೂ ಹಲವು ಕಡೆ ಮಳೆಯಾಗಿದೆ.
ಅನೇಕಲ್ 15 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ 14 ಸೆಂ.ಮೀ, ಕೋಲಾರ 9 ಸೆಂಮೀ , ಗುಬ್ಬಿ ತುಮಕೂರಲ್ಲಿ 8 ಸೆಂಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ.
ಉತ್ತರ ಒಳನಾಡಿನಲ್ಲಿಯೂ ಹಲವು ಕಡೆ ಮಳೆಯಾಗಲಿದೆ. ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 17 ರಂದು ಮುಂಜಾನೆ ಚೆನ್ನೈನ ಹತ್ತಿರ ದಾಟುವ ಸಾಧ್ಯತೆ ಇದೆ. ಇದರ ಪ್ರಭಾವವಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16 ರಿಂದ ಅಕ್ಟೋಬರ್ 20 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಸ್ಥಿತಿಯು, ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಆಗಿದ್ದು, ಚೆನ್ನೈ ನಿಂದ 320 ಕಿಮೀ ದೂರದಲ್ಲಿ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ ಕೆಲವು ಕಡೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಉಡುಪಿ, ಚಾಮರಾಜನಗರ, ಶಿವಮೊಗ್ಗ, ಬಳ್ಳಾರಿ ಕಲಬುರ್ಗಿ, ಯಾದಗಿರಿ, ರಾಯಚೂರು, ದಾವಣಗೆರೆ, ಚಿತ್ರದುರ್ಗಕ್ಕೆ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಒಂದು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿಗೆ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಕೊಡಲಾಗಿದೆ.