Darshan News:
ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್ವುಡ್ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಅವರ ಅಪಾರ ಅಭಿಮಾನಿಗಳು ತುಂಬು ಹೃದಯದಿಂದ ಶುಭಾಶಯ ಕೋರಿ, ‘ಒಳ್ಳೆಯದಾಗಲಿ’ ಎಂದು ಹಾರೈಸಿದರು.
ಅಪಾರ ಅಭಿಮಾನಿಗಳ ಬಳಗ ಹೊಂದಿರುವ DARSHAN, ಬೆಂಬಲಿಗರು ತೋರಿಸುತ್ತಿರುವ ಪ್ರೀತಿಗೆ ಭಾವುಕರಾಗಿದ್ದಾರೆ. ಬರ್ತಡೇ ಸಂಭ್ರಮ ಮುಗಿದು ಎರಡು ದಿನಗಳ ಬಳಿಕ, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಅಭಿಮಾನಿಗಳ ಪ್ರೀತಿ, ಸಹಕಾರ ಸ್ಮರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರೀತಿಯ ಸೆಲೆಬ್ರಿಟಿಸ್ಗಳೇ .. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿ ದೀಪವಾಗಲಿ.ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ.
ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತಹ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ ಎಂದು ಹೇಳಿದರು.
Hope for the fans:
ಆ ಮೂಲಕ DARSHAN ಅಭಿಮಾನಿಗಳಿಗೆ ಭೇಟಿಯಾಗುವ ಭರವಸೆಯನ್ನು ನೀಡಿದ್ದಾರೆ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ಬೇಗ ಭೇಟಿಯಾಗುತ್ತೇನೆ ಅನ್ನೋ ಮೂಲಕ ದರ್ಶನ್, ಅಭಿಮಾನಿಗಳ ಕುತೂಹಲವನ್ನು ಹೆಚ್ಚು ಮಾಡಿದ್ದಾರೆ.
ದರ್ಶನ್ ಅವರು ಪ್ರತಿ ಬಾರಿ ತಮ್ಮ ಹುಟ್ಟುಹಬ್ಬದ ದಿನವನ್ನು ಅಭಿಮಾನಿಗಳಿಗೋಸ್ಕರ ಮೀಸಲಿಡುತ್ತಿದ್ದರು. ಆ ದಿನ ಅಭಿಮಾನಿಗಳ ಜೊತೆ ಕಳೆದು ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಅನಿವಾರ್ಯ ಕಾರಣಗಳಿಂದ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಿಕೊಂಡಿಲ್ಲ.
ಇದನ್ನು ಓದಿರಿ : SP Members Protest In UP Assembly Premises Ahead Of Budget Session