ಬೆಂಗಳೂರು: ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ ಚಾರ್ಜ್ಶೀಟ್ ಸಲ್ಲಿಕೆಯ ಪುಟಗಳ ಸಂಖ್ಯೆ ತಿಳಿದು ತಳಮಳಗೊಂಡಿದ್ದಾರೆ. ಅಷ್ಟೊಂದು ಸಾಕ್ಷಿಗಳಾ ಎಂದು ಪ್ರಶ್ನೆ ಮಾಡಿದ್ದಾರೆ ಎಂಬ ಮಾಧ್ಯಮಗಳಿಗೆ ಲಭ್ಯವಾಗಿದೆ.
ಇದನ್ನೂ ಓದಿ : ಪಟ್ಟಣಗೆರೆ ಶೆಡ್‌ನಲ್ಲಿ ನಿಜಕ್ಕೂ ನಡೆದಿದ್ದೇನು? A1-A17 ಪಾತ್ರ ಏನೇನು? ಇಲ್ಲಿದೆ ಕಂಪ್ಲಿಟ್ ಸ್ಟೋರಿ
ರೇಣುಕಾಸ್ವಾಮಿ ಪ್ರಕರಣದಲ್ಲಿ ತಮ್ಮ ಪಾತ್ರದ ಬಗ್ಗೆ ಪೊಲೀಸರು ಏನೆಲ್ಲ ಪಾಯಿಂಟ್‌ಗಳನ್ನು ಉಲ್ಲೇಖಿಸಿದ್ದಾರೆ. A2 ಇರೋದನ್ನ A1 ಮಾಡಿದ್ರಾ ಅನ್ನೋ ಬಗ್ಗೆಯೂ ಕೇಳಿದ್ದಾರೆ ಎನ್ನಲಾಗಿದೆ. ಅಂದ ಹಾಗೇ ಪೊಲೀಸರು ಒಟ್ಟು 3,991 ಪುಟಗಳ ದೋಷಾರೋಪ ಪಟ್ಟಿಯನ್ನ ನ್ಯಾಯಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. 231 ಮಂದಿಯನ್ನು ಸಾಕ್ಷಿದಾರರನ್ನಾಗಿ ಮಾಡಿದ್ದಾರೆ. ಇದೇ ಕಾರಣಕ್ಕೆ ಅಷ್ಟೊಂದು ಸಾಕ್ಷಿಗಳಾ ಎಂದು ಕೇಳಿದ್ದಾರಂತೆ.
ಇದನ್ನೂ ಓದಿ : ರಾಕ್ಷಸನ ರೀತಿಯಲ್ಲಿ ವರ್ತನೆ; ರೇಣುಕಾಸ್ವಾಮಿ ಕೈಮುಗಿದು ಬೇಡಿಕೊಂಡರೂ ಬಿಡಲಿಲ್ಲವಂತೆ ದರ್ಶನ್
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಕೊಲೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸೇರಿ ಸುಮಾರು 17 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ಕುರಿತು ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು 24ನೇ A C M M ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೇಸ್ನಲ್ಲಿ ಏನಾಗ್ತಿದೆ ಗೊತ್ತಾ? ಸಂಚಲನ ಮೂಡಿಸಿದ ಜಾರಕಿಹೊಳಿ ಹೈಕಮಾಂಡ್ ಗುಪ್ತ ಭೇಟಿ
ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಭಾಗಿಯಾಗಿದ್ದ 17 ಮಂದಯನ್ನದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳು ಸಂಗ್ರಹಿಸಿದ್ದಾರೆ. ಇದೀಗ 17 ಆರೋಪಿತರ ವಿರುದ್ಧ 24ನೇ A C M M ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಇನ್ನು ಚಾರ್ಜ್‌ಶೀಟ್ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ಒಳಗೊಂಡಿರುವ ಚಾರ್ಜ್ಶೀಟನ್ನು ಪೊಲೀಸರು ಸಲ್ಲಿಸಿದ್ದಾರೆ. ದರ್ಶನ್ ಮತ್ತು ತಂಡಯಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತನಿಖೆಯನ್ನು ಬೆಂಗಳೂರು ಪೊಲೀಸ್ ಆಯುಕ್ತರು ಬಿ.ದಯಾನಂದ, ಅಪರ ಪೊಲೀಸ್ ಆಯುಕ್ತರು ಪಶ್ಚಿಮ ವಲಯ ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಗಿರೀಶ್.ಎಸ್. ಐ.ಪಿ.ಎಸ್ (S I P S )ರವರ ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದನ್‌ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ( C R P C ) ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.