spot_img
spot_img

DCM D K SHIVAKUMAR : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News :

ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.ಆತ್ಮಹತ್ಯೆ ಪತ್ರದಲ್ಲಿ ಅವರ ಹೆಸರು ಯಾರೂ ಬರೆದಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ.ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ. ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ ಎಂದರು.

Vijayendra, Yeddyurappa photo released:

ನಮ್ಮ ಮನೆಗೆ ಬಂದವರು, ಮದುವೆ ಕಾರ್ಯಕ್ರಮಕ್ಕೆ ಹೋದಾಗ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಎಂಬುವರು ನಿಮ್ಮ ಜತೆ, ಸಿಎಂ, ಪ್ರಿಯಾಂಕ್ ಖರ್ಗೆ ಅವರ ಜತೆ ಇರುವ ಫೋಟೋಗಳನ್ನು ವಿಜಯೇಂದ್ರ ಅವರು ಬಿಡುಗಡೆ ಮಾಡಿರುವ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ನನ್ನ ಜೊತೆ ವಿಜಯೇಂದ್ರ, ಯಡಿಯೂರಪ್ಪ ಅವರು ಇರುವ ಫೋಟೋಗಳಿವೆ.

ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್, ರೌಡಿಗಳು ಸೇರಿದಂತೆ ಯಾರೆಲ್ಲರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ನಾನು ಬಿಡುಗಡೆ ಮಾಡಲೇ? ಎಂದು ಡಿಕೆಶಿ ಪ್ರಶ್ನಿಸಿದರು.ಅವರಿಗೆ ಬೇಕು ಎಂದರೆ ಬಿಡುಗಡೆ ಮಾಡುತ್ತೇನೆ. ಆರೋಪಿಗಳು ಹಾಗೂ ನಮ್ಮ ಜತೆ ಮಾತುಕತೆ, ವ್ಯವಹಾರ ನಡೆದಿರುವುದಕ್ಕೆ ದಾಖಲೆ ಇದ್ದರೆ ಆರೋಪ ಮಾಡಲಿ. ನಾವು ಉತ್ತಮವಾಗಿ ಸರ್ಕಾರ ನಡೆಸುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಾರೆ.

ಮಾತಾಡಲಿ ಬಿಡಿ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ. ಕೆ ರವಿ ಸಾವು, ಸೌಜನ್ಯ ಸಾವು, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಸುಮಾರು 12 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿದ್ದೆವು. ಬಿಜೆಪಿಯವರು ನನ್ನ ಪ್ರಕರಣದ ಜತೆ ಬಿಜೆಪಿ ಸಚಿವರ ಪ್ರಕರಣಗಳನ್ನು ಸಿಬಿಐಗೆ ನೀಡಬೇಕಿತ್ತು.  ಯಾಕೆ ನೀಡಲಿಲ್ಲ?. ಇದು ಸಿಬಿಐಗೆ ನೀಡಬೇಕಾದ ಪ್ರಕರಣವಲ್ಲ. ನಮ್ಮ ತನಿಖಾ ಸಂಸ್ಥೆಗಳು ಈ ಪ್ರಕರಣಗಳ ತನಿಖೆ ಮಾಡಲು ಸಮರ್ಥವಾಗಿವೆ. ಅಧಿಕಾರಿಗಳು ಸಮರ್ಥರಾಗಿದ್ದಾರೆ.

ಸಿಬಿಐ ತನಿಖೆ ವೈಖರಿ ನಮಗೂ ಗೊತ್ತಿದೆ ಎಂದು ತಿಳಿಸಿದರು. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಮುತ್ತಿಗೆ ಹಾಕುವ ವಿಚಾರವಾಗಿ ಪ್ರತಿಕ್ರಿಯಿಸಿ, ಮುತ್ತಿಗೆ ಹಾಕಲಿ. ನನ್ನ ಸಹೋದರ ಸುರೇಶ್, ರಾಜರಾಜೇಶ್ವರಿ ನಗರದ ಕೆಲವು ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಅವೆಲ್ಲವನ್ನು ಸೇರಿಸಿ ಸಿಬಿಐಗೆ ವಹಿಸೋಣ. ಬಿಜೆಪಿ ಸರ್ಕಾರ ಇದ್ದಾಗ ನನ್ನ ಪ್ರಕರಣವನ್ನು ಮಾತ್ರ ಸಿಬಿಐಗೆ ನೀಡಿದ್ದರು. ಎಸ್​. ಎಂ ಕೃಷ್ಣ ಅವರ ಸರ್ಕಾರದ ನಂತರ ಐಟಿ-ಬಿಟಿ ಕ್ಷೇತ್ರದಲ್ಲಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ.

ಹೀಗಾಗಿ ಅವರನ್ನು ಕೆಳಗಿಳಿಸುವ ಸಂಚು ಮಾಡುತ್ತಿದ್ದಾರೆ ಎಂದು ಡಿಸಿಎಂ ಸಮರ್ಥಿಸಿಕೊಂಡರು. ಅವರು ಯಾವ ತಪ್ಪು ಮಾಡಿದ್ದಾರೆ ಎಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಗೆ ವಿರೋಧ ಪಕ್ಷಗಳು ಈ ರೀತಿ ನಡೆದುಕೊಳ್ಳುತ್ತಿವೆ. ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ.

ಐಟಿ-ಬಿಟಿ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಬಿಜೆಪಿಯವರು ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ಕೇಳಿದಾಗ, ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ.

Action in case of violation of law:

ನಮಗೆ ಬೆಂಗಳೂರಿನ ಘನತೆ ಬಹಳ ಮುಖ್ಯ. ಯಾರೇ ಕಾನೂನು ಉಲ್ಲಂಘನೆ ಮಾಡಿದರೂ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.ರಾಜ್ಯದ ಜನತೆಗೆ ಹೊಸವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರ ಪಾಲಿಗೂ ಉತ್ತಮವಾಗಿರಲಿ. ಹೊಸವರ್ಷಾಚರಣೆ ಹಿನ್ನೆಲೆ ನಗರದಲ್ಲಿ ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ದುರ್ವರ್ತನೆ, ಅಹಿತಕರ ಘಟನೆಗೆ ಅವಕಾಶ ಇಲ್ಲ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

UNION BUDGET 2025 : ಈ ಬಾರಿಯ ಕೇಂದ್ರ ಬಜೆಟ್ಲ್ಲಿ ಸಿಗುತ್ತಾ ಶಿವಮೊಗ್ಗ to ಚನ್ನಗಿರಿ ರೈಲು ಯೋಜನೆಗೆ ಗ್ರೀನ್ ಸಿಗ್ನಲ್?

Davangere News: ಬಹುದಿನದ ಯೋಜನೆಗಾಗಿ ಚನ್ನಗಿರಿ ಜನ ಕಾಯುತ್ತಿದ್ದು, ಬರುವ 2025ನೇ ಸಾಲಿನ UNIONಬಜೆಟ್​​ನಲ್ಲಿ ನೂತನ ರೈಲು ಮಾರ್ಗಕ್ಕೆ UNIONಸರ್ಕಾರ ಗ್ರೀನ್ ಸಿಗ್ನಲ್ ಕೊಡಬಹುದು ಎಂಬ...

MICRO FINANCE TORTURE:ಬೀದಿ ಪಾಲಾದ ಕುಟುಂಬ; ಡಿಸಿ ಹೇಳಿದ್ದಿಷ್ಟು .

Belgaum News: ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿರುವ ಮೈಕ್ರೋ FINANCE ಸಿಬ್ಬಂದಿ, ಕುಟುಂಬವೊಂದರ ಮನೆ ಜಪ್ತಿ ಮಾಡಿದೆ.ಕಳೆದ 5 ವರ್ಷಗಳ...

SAMSUNG GALAXY S25 SERIES : ಭಾರತೀಯ ಮಾರುಕಟ್ಟೆಗೆ ಕಾಲಿಟ್ಟ ಸ್ಯಾಮ್ಸಂಗ್ ಹೊಸ ಸ್ಮಾರ್ಟ್ಫೋನ್ಗಳು

Hyderabad News: ಬಹುನಿರೀಕ್ಷಿತ SAMSUNG GALAXY S25ಸರಣಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳು ಇಲ್ಲಿವೆ.ದಕ್ಷಿಣ ಕೊರಿಯಾದ ಟೆಕ್ ದೈತ್ಯ...

WANKHEDE STADIUM 50TH ANNIVERSARY:14,505 ಲೆದರ್ ಬಾಲ್ಗಳಿಂದ ‘ವಾಕ್ಯ’ ರಚಿಸಿ ಗಿನ್ನೆಸ್ ದಾಖಲೆ.

Mumbai News: ಎಂಸಿಎ ಈ ದಾಖಲೆಯನ್ನು ಆ ಪಂದ್ಯದಲ್ಲಿ ಶತಕ ಗಳಿಸಿದ ದಿವಂಗತ ಏಕನಾಥ್ ಸೋಲ್ಕರ್ ಮತ್ತು ಕ್ರೀಡೆಗೆ ಅಸಾಧಾರಣ ಕೊಡುಗೆಗಳನ್ನು ನೀಡಿದ ಮುಂಬೈನ ಇತರ...