ಮಂಗಳೂರು: ಹೆಣ್ಣು ಮಕ್ಕಳ ರಕ್ಷಣೆ / ಭದ್ರತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ಬೇಡಿಕೆ ಇಟ್ಟು ಮಂಗಳೂರಿನಿಂದ ದೆಹಲಿ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಒಂದು ಹೆಣ್ಣು ಓದಿನ ವಿಚಾರವಾಗಿಯೋ, ಅಥವಾ ಕೆಲಸದ ವಿಚಾರವಾಗಿಯೋ, ಅಥವಾ ಒಂದು ವ್ಯಾಪಾರದ ವಿಚಾರವಾಗಿಯೋ, ಅಥವಾ ಇನ್ಯಾವುದೋ ವಿಚಾರವಾಗಿಯೋ ಮನೆಯಿಂದ ಹೊರಗಡೆ ಹೋದರೆ ಆಕೆ ಕ್ಷೇಮವಾಗಿ ಮತ್ತೆ ಮನೆಗೆ ಬರುತ್ತಾಳೆ ಎಂಬ ನಂಬಿಕೆ ಹಾಗೂ ಭರವಸೆ ಆ ಕುಟುಂಬಗಳಿಗೆ ಇಲ್ಲ.
ಈ ನಮ್ಮ ಭಾರತ ದೇಶದಲ್ಲಿ ಒಬ್ಬ ಪುರುಷ ಎಷ್ಟು ಸ್ವತಂತ್ರವಾಗಿ ಜೀವನ ಮಾಡುತ್ತಾನೋ ಹಾಗೆ ಮಹಿಳೆಯು ಕೂಡ ಘನತೆ ಮತ್ತು ಗೌರವದಿಂದ ಹಾಗೂ ಪ್ರತಿಷ್ಠೆಯಿಂದ ಸಮಾಜದಲ್ಲಿ ಬದುಕುವಂತ ವ್ಯವಸ್ಥೆಯನ್ನು ನಿರ್ಮಾಣ ಮಾಡಿ ಕೊಡುವುದು ಸರ್ಕಾರದ ಜವಾಬ್ದಾರಿ.
ಪ್ರತಿ ವರ್ಷ 35 ಸಾವಿರಕ್ಕೂ ಅಧಿಕ ಹೆಣ್ಣುಮಕ್ಕಳು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಇದೇ ರೀತಿ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಅತ್ಯಾಚಾರಗಳು ಮುಂದುವರೆದರೆ ಕೊನೆಗೆ ನಾವು ಹೆಣ್ಣು ಮಕ್ಕಳನ್ನು ಮ್ಯೂಸಿಯಂನಲ್ಲಿ ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ದೇಶದ ಪ್ರಧಾನ ಮಂತ್ರಿಗಳನ್ನು ದೆಹಲಿಯಲ್ಲಿ ಅವರನ್ನು ಕಚೇರಿಯಲ್ಲಿ ಭೇಟಿಯಾಗಿ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ರಕ್ಷಣೆಗಾಗಿ ಈ “ಬೇಟಿ ಬಚಾವೋ” ಎಂಬ ಯೋಜನೆಯನ್ನು ಹೆಚ್ಚು ಬಲಿಷ್ಠ ಗೊಳಿಸಿ ದೇಶದ ಯಾವುದೇ ಒಂದು ಹೆಣ್ಣು ಅತ್ಯಾಚಾರಕ್ಕೆ ಒಳಗಾಗದೆ ಸಮಾಜದಲ್ಲಿ ಘನತೆ, ಗೌರವ ಮತ್ತು ಪ್ರತಿಷ್ಠೆಯಿಂದ ಬದುಕುವಂತೆ ಹಾಗೂ ಹೆಣ್ಣನ್ನು ಹೆತ್ತ ತಂದೆ ತಾಯಿಯು ಕೂಡ ನೆಮ್ಮದಿಯಿಂದ ಹಾಗೂ ಇಡೀ ದೇಶವೇ ಒಂದು ಹೆಣ್ಣನ್ನು ಗೌರವದಿಂದ ಕಾಣುವಂತೇ ಈ ಯೋಜನೆಯನ್ನು ರೂಪಿಸಬೇಕೆಂದು ದೇಶಕ್ಕೆ ತಾಯಿ ಸ್ಥಾನದಲ್ಲಿರುವಂತಹ ಪ್ರಧಾನಮಂತ್ರಿಗಳನ್ನು ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಪ್ರವೀಣ್ ಮಂಗಳೂರು, ಮೂಸ ಷರೀಫ್ ನಾಯಕತ್ವದಲ್ಲಿ, ನೌಫಲ್ ಅಬ್ಬಾಸ್,ಆರಿಫ್, ಶುಕೂರ್, ಬಾಲಕೃಷ್ಣ, ಹಂಝ ಯಾತ್ರೆಯಲ್ಲಿ ದೆಹಲಿ ತನಕ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.