ಹೈದರಾಬಾದ್: ಭಾರತದ ಆರ್ಥಿಕ ಬೆಳವಣಿಗೆ ಎರಡು ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿ – ಅಂಶಗಳ ಪ್ರಕಾರ, ಈ ವರ್ಷದ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆ ದರವು ಶೇ. 5.4 ಕ್ಕೆ ಕುಸಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ಆರ್ಥಿಕ ಬೆಳವಣಿಗೆ ಎರಡು ವರ್ಷಗಳೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿ- ಅಂಶಗಳ ಪ್ರಕಾರ, ಕಳೆದ ವರ್ಷದ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರವು ಶೇಕಡಾ 8.1 ರಷ್ಟಿದ್ದರೆ, ಈ ವರ್ಷದ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆ ದರವು ಶೇ. 5.4 ಕ್ಕೆ ಕುಸಿದಿದೆ.
ಈ ವರ್ಷದ ಜುಲೈ – ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಚೀನಾದ ಜಿಡಿಪಿ ಬೆಳವಣಿಗೆಯು ಶೇಕಡಾ 4.6 ರಷ್ಟಿತ್ತು. ಇದೇ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.5.4 ರಷ್ಟಿತ್ತು. ಹಾಗಾಗಿ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿವೇ ಎಂದು ತಿಳಿಸಿದ್ದಾರೆ.
2022-23ರ ಹಣಕಾಸು ವರ್ಷದ(ಅಕ್ಟೋಬರ್-ಡಿಸೆಂಬರ್ 2022) ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ 4.3 ರಷ್ಟಿತ್ತು. ಕೃಷಿ ಕ್ಷೇತ್ರದ ಬೆಳವಣಿಗೆ ರಾಷ್ಟ್ರೀಯ ಅಂಕಿ – ಅಂಶ ಕಚೇರಿ (NSO) ಮಾಹಿತಿಯ ಪ್ರಕಾರ, 2023-24ರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕೃಷಿ ವಲಯದ GVA (ಒಟ್ಟು ಮೌಲ್ಯವರ್ಧಿತ) ಶೇ. 3.5 ಇತ್ತು. ಇದು ಕಳೆದ ವರ್ಷಕ್ಕೆ ಹೋಲಿಸಿದರೆ (ಜಿವಿಎ ಶೇ. 1.7) ಅತಿ ಹೆಚ್ಚು ಎಂಬುದು ಗಮನಾರ್ಹ.
2024ರ ಎರಡನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಕುಂಠಿತವಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದೆ. ಪ್ರಧಾನಿ ಮೋದಿ ಮತ್ತು ಅವರ ಚಿಯರ್ ಲೀಡರ್‌ಗಳು ದೇಶದ ಅಭಿವೃದ್ಧಿಯ ಬಗ್ಗೆ ಅನಗತ್ಯ ಪ್ರಚಾರ ಮಾಡುತ್ತಿದ್ದಾರೆ. ಆದರೆ ಇತ್ತೀಚಿನ ಅಂಕಿ – ಅಂಶಗಳು ವಾಸ್ತವದಿಂದ ಎಷ್ಟು ದೂರದಲ್ಲಿವೆ ಎಂಬುದನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದೆ.
ಭಾರತದ ಉತ್ಪಾದನಾ ವಲಯದ ಜಿವಿಎ ಕಳೆದ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 14.3 ರಷ್ಟಿತ್ತು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 2.2ಕ್ಕೆ ಕುಸಿದಿದೆ. 2024-25 ರ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆಯು ಶೇ.6 ರಷ್ಟಿತ್ತು. ಕಳೆದ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಶೇ.8.2ರಷ್ಟಿತ್ತು. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ, ಜಿಡಿಪಿ ಬೆಳವಣಿಗೆ ದರವು ಯಾವುದೇ ಬದಲಾವಣೆಯಿಲ್ಲದೆ ಶೇ.6.7 ರಷ್ಟಿಂದ ಮುಂದುವರಿಯುತ್ತಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿನ ಆರ್ಥಿಕ ಬೆಳವಣಿಗೆಗೆ ಹೋಲಿಸಿದರೆ, ಪ್ರಸ್ತುತ ಮೋದಿ ಸರ್ಕಾರದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಅತ್ಯಂತ ಕಳಪೆಯಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟೀಕಿಸಿದ್ದಾರೆ.