New Delhi News:
ಫೆಬ್ರವರಿ 5ರಂದು DELHI POLLING DATE ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಇಂದು ತಿಳಿಸಿದೆ. ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಚುನಾವಣಾ ಆಯೋಗದ ಆಯುಕ್ತರು, ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜನವರಿ 10ರಂದು ಅಧಿಸೂಚನೆ ಹೊರಬೀಳಲಿದೆ.
ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 17 ಆಗಿದೆ. ನಾಮಪತ್ರ ಪರಿಶೀಲನೆ ಜನವರಿ 18ರಂದು ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನ ಜನವರಿ 20 ಆಗಿದೆ.70 ಕ್ಷೇತ್ರಗಳ ದೆಹಲಿ ವಿಧಾನಸಭೆಯ ಅವಧಿ ಇದೇ ಫೆ.23ಕ್ಕೆ ಅಂತ್ಯವಾಗಲಿದ್ದು, ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ.
ಮತದಾರರ ಪಟ್ಟಿಗೆ ಅಳಿಸುವಿಕೆ ಅಥವಾ ಸೇರ್ಪಡೆಯಲ್ಲಿ ಕಟ್ಟುನಿಟ್ಟಾದ ಪ್ರಕ್ರಿಯೆ ಅನುಸರಿಸಲಾಗಿದೆ. ಯಾವುದೇ ತಿರುಚುವಿಕೆಗೆ ಅವಕಾಶವಿಲ್ಲ ಎಂದು ಆಯುಕ್ತತು ತಿಳಿಸಿದರು. ದೆಹಲಿ ಚುನಾವಣೆಗೆ ಮತ ಚಲಾವಣೆಗೆ 1.55 ಕೋಟಿ ಅರ್ಹ ಮತದಾರರಿದ್ದು, ಇದರಲ್ಲಿ 71.74 ಲಕ್ಷ ಮಹಿಳಾ ಮತದಾರರಿದ್ದಾರೆ. ದಿಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ.
ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಇದೇ ಜನವರಿ 10ರಿಂದ ನಾಮಪತ್ರ ಸಲ್ಲಿಕೆ ಶುರುವಾಗಲಿದೆ. ಇನ್ನು, ಇದೇ ಮೊದಲ ಬಾರಿಗೆ ಹೊಸದಾಗಿ 2 ಲಕ್ಷ ಯುವ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಏಕ ಹಂತದಲ್ಲಿ ನಡೆಯುವ ಮತದಾನಕ್ಕಾಗಿ 13,000 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಇದನ್ನು ಓದಿರಿ : H D KUMARASWAMY : ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ