spot_img
spot_img

DEMAND FOR HAL HELICOPTERS : HAL ನಿರ್ಮಿತ ಲಘು ಯುದ್ಧ ಹೆಲಿಕಾಪ್ಟರ್ಗೆ ಹೆಚ್ಚಿದ ಬೇಡಿಕೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಹಿಂದೂಸ್ತಾನ್​​ ಏರೋನಾಟಿಕಲ್​ ಲಿಮಿಟೆಡ್​ಗೆ ಲಘು ಹಾಗೂ ಹಗುರ DEMAND FOR HAL HELICOPTERS ಹೆಚ್ಚಿದೆ ಎಂದು ಸಂಸ್ಥೆಯ ಸಿಎಂಡಿ ತಿಳಿಸಿದ್ದಾರೆ. “ಪ್ರಸ್ತುತ ಆರ್ಥಿಕ ವರ್ಷದ 9 ತಿಂಗಳಲ್ಲಿ 55 ಸಾವಿರ ಕೋಟಿ ಮೊತ್ತದ ಹೆಲಿಕಾಪ್ಟರ್​ಗಳನ್ನು ತಯಾರಿಸಿಕೊಡಲು ಆರ್ಡರ್ ಬಂದಿವೆ. ಮುಂದಿನ ಐದಾರು ತಿಂಗಳಲ್ಲಿ 1.2 ಲಕ್ಷ ಕೋಟಿಗೆ ದಾಟಲಿದ್ದು, ಒಟ್ಟಾರೆ 2.5 ಲಕ್ಷ ಕೋಟಿ ರೂಪಾಯಿ ವಹಿವಾಟು ಆಗಲಿದೆ” ಎಂದು ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿಎಂಡಿ ಮಾಹಿತಿ ನೀಡಿದ್ದಾರೆ.

DEMAND FOR HAL HELICOPTERS ಲಘು ಹಾಗೂ ಹಗುರ ಹೆಲಿಕಾಪ್ಟರ್​ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಹಿಂದೂಸ್ತಾನ್​​ ಏರೋನಾಟಿಕಲ್​ ಲಿಮಿಟೆಡ್​ಗೆ (ಹೆಚ್​​​ಎಎಲ್​​) ದೇಶ ಹಾಗೂ ವಿದೇಶಗಳಿಂದ ಹೆಲಿಕಾಪ್ಟರ್​ಗಳ ಉತ್ಪಾದನೆಗೆ ಬೇಡಿಕೆ ಬರುತ್ತಿದೆ. ಇದರ ಹಣಕಾಸು ವಹಿವಾಟು ಮುಂದಿನ ಆರು ತಿಂಗಳಲ್ಲಿ ಸುಮಾರು 2.5 ಲಕ್ಷ ಕೋಟಿಗೆ ಹೆಚ್ಚಳವಾಗಲಿದೆ ಎಂದು ಸಂಸ್ಥೆಯ ಸಿಎಂಡಿ ಡಾ.ಡಿ.ಕೆ.ಸುನಿಲ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಸದ್ಯ ತೇಜಸ್​​ ಹಾಗೂ ಪ್ರಚಂಡ್​​ ಲಘು ಯುದ್ಧ ಹೆಲಿಕಾಫ್ಟರ್​ಗಳ (ಎಲ್​ಸಿಎ) ತಯಾರಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. ಅತ್ಯಾಧುನಿಕ ಹಾಗೂ ಸುಧಾರಿತ 97 ತೇಜಸ್​​ ಹಾಗೂ 156 ಎಲ್​​ಸಿಎ ಹೆಲಿಕಾಪ್ಟರ್​ಗಳನ್ನು ಉತ್ಪಾದಿಸಲಾಗುತ್ತಿದ್ದು, ಐದಾರು ತಿಂಗಳಲ್ಲಿ ನಿರ್ಮಾಣ ಕಾರ್ಯ ಮುಗಿಯಲಿದೆ. ಬೇಡಿಕೆಗಳಿಗೆ ತಕ್ಕಂತೆ ತ್ವರಿತಗತಿಯಲ್ಲಿ ಹೆಲಿಕಾಪ್ಟರ್​ಗಳನ್ನು ಬೆಂಗಳೂರು, ಮಹಾರಾಷ್ಟ್ರದ ನಾಸಿಕ್​​ ಸೇರಿದಂತೆ ಮೂರು ಕಡೆಯ ನಿರ್ಮಾಣ ಘಟಕಗಳಲ್ಲಿ ನಿರ್ಮಿಸಲಾಗುತ್ತಿದೆ”.

ಈ ಮೂರು ಘಟಕಗಳಲ್ಲಿ 2026ರ ವೇಳೆಗೆ 26 ಏರ್​ಕ್ರಾಫ್ಟ್​ ತಯಾರಿಸುವ ಗುರಿಯಿದೆ. DEMAND FOR HAL HELICOPTERS ಉತ್ಪಾದನೆ ವೇಗ ಹೆಚ್ಚಿಸಲು ಟಾಟಾ ಹಾಗೂ ಎಲ್​ ಅಂಡ್​ ಟಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಭಾರತೀಯ ಸೇನೆಗೆ ಮಾತ್ರವಲ್ಲದೇ, ವಿದೇಶಗಳಿಂದಲೂ ಬೇಡಿಕೆ ಬರುತ್ತಿದೆ.

ಮಲೇಶಿಯಾ, ಫಿಲಿಪ್ಪಿನ್ಸ್​​ ಹಾಗೂ ಉತ್ತರ ಅಮೇರಿಕ ಸೇರಿದಂತೆ ವಿವಿಧ ಕಡೆಗಳಿಂದ ಹೆಲಿಕಾಪ್ಟರ್ ಉತ್ಪಾದಿಸಲು ಹೆಚ್ ಎಎಲ್ ಮುಂದಾಗಿದೆ. ಸುಧಾರಿತ ಹಾಗೂ ಆತ್ಯಾಧುನಿಕ ತಂತ್ರಜ್ಞಾನ ಅಳವಡಿಸಲು ಆದ್ಯತೆ ನೀಡುತ್ತಿದ್ದು, ಇದರ ಭಾಗವಾಗಿ ಸಂಶೋಧನೆ ಹಾಗೂ ಅಭಿವೃದ್ಧಿಗೆ 2,500 ಕೋಟಿ ವ್ಯಯಿಸಲಾಗುತ್ತಿದೆ.

ಸದ್ಯ ತೇಜಸ್ ಲಘು ಹೆಲಿಕಾಪ್ಟರ್​ಗಳ ಬೇಡಿಕೆ ಹೆಚ್ಚಾಗಿದ್ದು, ಉತ್ಪಾದನೆ ಹೆಚ್ಚಿಸಲಾಗಿದೆಎಂದೂ ಮಾಹಿತಿ ನೀಡಿದ್ದಾರೆ.

ಇದನ್ನು ಓದಿರಿ : Odisha: Orissa High Court on Tuesday issued notices

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...