ಬೆಂಗಳೂರು : ದೆಹಲಿ, ಕೊಲ್ಕತ್ತಾ, ಮುಂಬೈ ಸೇರಿದಂತೆ ದೇಶದ ವಿವಿಧೆಡೆಗೆ ವಿಮಾನಗಳು ತೆರಳಬೇಕಿದ್ದ ಬೆಂಗಳೂರಿನಲ್ಲಿ ಇಂದು ಎಲ್ಲೆಡೆ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಟೇಕಾಫ್, ಲ್ಯಾಂಡಿಂಗ್ನಲ್ಲಿ ವ್ಯತ್ಯಯವಾಗಿದೆ.
ಮಳೆ ಆರ್ಭಟಕ್ಕೆ ಬೆಂಗಳೂರಿನಲ್ಲೇ ಫಾಲ್ಸ್‌ಗಳು ಸೃಷ್ಟಿಯಾಗಿದ್ದವು. ದೇವನಹಳ್ಳಿ ಸುತ್ತಮುತ್ತ ಸುರಿದ ಧಾರಾಕಾರ ಮಳೆಗೆ ಅರ್ಧ ಗಂಟೆಗೂ ಹೆಚ್ಚು 30ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ನಗರದಲ್ಲಿ ಇಂದು ಎಲ್ಲೆಡೆ ಧಾರಾಕಾರ ಮಳೆ ಆಗಿದೆ. ಮಳೆ ಬರ್ತಿದ್ದಂತೆ ರಸ್ತೆಗಳು ಜಲಾವೃತಗೊಂಡಿವೆ.
ಈ ಮಧ್ಯೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಟೇಕ್ ಆಪ್ನಲ್ಲಿ ವಿಳಂಬ ಉಂಟಾಗಿದೆ.
ಮಳೆ ಸುರಿಯುತ್ತಿರುವುದರಿಂದ ಟೇಕಾಫ್, ಲ್ಯಾಂಡಿಂಗ್ನಲ್ಲಿ ವ್ಯತ್ಯಯವಾಗಿದೆ. ಸಂಜೆಯಿಂದ ದೇವನಹಳ್ಳಿ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.
ತಾಂತ್ರಿಕ ಕಾರಣದಿಂದ ವಾರಣಾಸಿ-ಬೆಂಗಳೂರು ವಿಮಾನ ರದ್ದಾಗಿದೆ. ಪರಿಣಾಮ ಉತ್ತರ ಪ್ರದೇಶದ ವಾರಣಾಸಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರಕ್ಕೆ ಸಿಲುಕಿಕೊಂಡಿರುವಂತಹ ಘಟನೆ ನಡೆದಿದೆ.
ಸಂಜೆ 6.05ಕ್ಕೆ ವಾರಣಾಸಿಯಿಂದ ಹೊರಡಬೇಕಿದ್ದ ವಿಮಾನ ಕೊನೆ ಕ್ಷಣದಲ್ಲಿ ತಾಂತ್ರಿಕ ಕಾರಣದಿಂದ ಪ್ರಯಾಣ ರದ್ದು ಮಾಡಲಾಗಿದೆ. ವಾರಣಾಸಿಯಲ್ಲಿ ಮೈಸೂರಿನ 20ಕ್ಕೂ ಹೆಚ್ಚು ಪ್ರಯಾಣಿಕರು ಅತಂತ್ರರಾಗಿದ್ದಾರೆ. ವಾರಣಾಸಿಯಲ್ಲಿ ನಾಳೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಏರ್ಪೋರ್ಟ್ನಲ್ಲಿರಲು ಸಿಬ್ಬಂದಿ ಅವಕಾಶ ನೀಡುತ್ತಿಲ್ಲ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now