spot_img
spot_img

DIABETIC AND BP PATIENTS DIET:ಬಿಪಿ & ಶುಗರ್ ಪೇಷಂಟ್ಗಳು ಪಪ್ಪಾಯಿ ಸೇವಿಸಬಹುದೇ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

 

Health Benefits of Papaya for Diabetes and High BP News:

ಈ ಹಣ್ಣು ವಿಟಮಿನ್ ಎ, ಸಿ, ಇ, ಫೋಲೇಟ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ತಾಮ್ರ ಹಾಗೂ ಉತ್ಕರ್ಷಣ ನಿರೋಧಕಗಳು ಹೇರಳವಾಗಿದೆ. ಇದು ನಮ್ಮ ದೇಹಕ್ಕೆ ಹಲವು ಪ್ರಯೋಜನಗಳು ಒದಗಿಸಲು ಸಹಾಯ ಮಾಡುತ್ತದೆ.

DIABETIC ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಪಪ್ಪಾಯಿ ಸೇವಿಸಬಹುದೇ? ಈ ಕುರಿತಂತೆ ಅನೇಕ ಜನರಿಗಿರುವ ಅನುಮಾನಗಳ ಬಗ್ಗೆ ಆರೋಗ್ಯ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ತಿಳಿದುಕೊಳ್ಳೋಣ.ಯಾವುದೇ ಋತುಮಾನವಿರಲಿ ಪಪ್ಪಾಯಿ ಹಣ್ಣು ಲಭ್ಯವಿರುತ್ತದೆ. ಸಿಹಿ ರುಚಿಯನ್ನು ಹೊಂದಿರುವ ಹಳದಿ ಬಣ್ಣವಿರುವ ಪಪ್ಪಾಯಿ ಹಲವು ಪೌಷ್ಟಿಕಾಂಶಗಳನ್ನು ಹೊಂದಿದೆ.

Improves digestion:ಇದರಲ್ಲಿರುವ ಪಪೈನ್ ಎಂಬ ಕಿಣ್ವವು ಜೀರ್ಣಕಾರಿ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ತಜ್ಞರು ತಿಳಿಸುತ್ತಾರೆ.ಪ್ರತಿದಿನ ಪಪ್ಪಾಯಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

Supplements for Heart Health: ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಹೃದಯ ಕಾಯಿಲೆಯ ಅಪಾಯ ಕಡಿಮೆ ಮಾಡುತ್ತದೆ. ಇದರಲ್ಲಿರುವ ಫೈಬರ್ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುವಲ್ಲಿ ಉತ್ತಮವಾಗಿ ಕೆಲಸ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.ಪಪ್ಪಾಯಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಲೈಕೋಪೀನ್ ಹಾಗೂ ವಿಟಮಿನ್ ಸಿ ಅಧಿಕವಾಗಿದೆ.

Prevents Cancer:ಈ ಹಣ್ಣಿನಲ್ಲಿರುವ ಲೈಕೋಪೀನ್ ಎಂಬ ಶಕ್ತಿಶಾಲಿ ಉತ್ಕರ್ಷಣ ನಿರೋಧಕವು ಕೆಲವು ರೀತಿಯ ಕ್ಯಾನ್ಸರ್ ತಡೆಯುತ್ತದೆ ಎನ್ನುವುದನ್ನು ಅಧ್ಯಯನಗಳು ಬಹಿರಂಗಪಡಿಸಿವೆ ಎಂದು ತಜ್ಞರು ತಿಳಿಸುತ್ತಾರೆ.

Boosts Immunity:ಪಪ್ಪಾಯಿ ಸೇವನೆಯಿಂದ ದೇಹಕ್ಕೆ ಜೀವಸತ್ವಗಳು, ಖನಿಜಗಳು ಹಾಗೂ ಉತ್ಕರ್ಷಣ ನಿರೋಧಕಗಳು ಹೇರಳವಾಗಿ ದೊರೆಯುತ್ತವೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Detox naturally:ಪಪ್ಪಾಯಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ಸುಲಭವಾಗಿ ತೆಗೆದುಹಾಕುವಲ್ಲಿ ಬಹಳ ಚೆನ್ನಾಗಿ ಕಾರ್ಯನಿರ್ವಹಿಸುತ್ತದೆ.ಪಪ್ಪಾಯಿಯಲ್ಲಿ ಫೈಬರ್ ಹಾಗೂ ನೀರಿನ ಅಂಶ ಹೆಚ್ಚಿದೆ. ಇದು ನೈಸರ್ಗಿಕ ನಿರ್ವಿಶೀಕರಣಕಾರಕವಾಗಿ ಕಾರ್ಯನಿರ್ವಹಿಸುತ್ತದೆ.

Can people with diabetes & hypertension consume papaya?:ಪಪ್ಪಾಯಿಯಲ್ಲಿರುವ ಫ್ಲೇವನಾಯ್ಡ್‌ಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ.DIABETICದಿಂದ ಬಳಲುತ್ತಿರುವವರು ಪಪ್ಪಾಯಿ ಸೇವಿಸಬಹುದು.

ಆದ್ರೆ, ಇವರು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಪಪ್ಪಾಯಿಯು ಮಧ್ಯಮ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಪಪ್ಪಾಯ ಸೇವನೆ ಮಾಡುವುದರಿಂದ ಹೆಚ್ಚಿನ ಗ್ಲೈಸೆಮಿಕ್ ಹಣ್ಣುಗಳಿಗೆ ಹೋಲಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬೇಗನೆ ಹೆಚ್ಚಾಗುವುದಿಲ್ಲ.

ಜರ್ನಲ್ ಆಫ್ ಫಂಕ್ಷನಲ್ ಫುಡ್ಸ್‌ನಲ್ಲಿ ಪ್ರಕಟವಾದ 2019ರ ಅಧ್ಯಯನವು ಪಪ್ಪಾಯಿ ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸುತ್ತದೆ ಹಾಗೂ ಉರಿಯೂತ ಕಡಿಮೆ ಮಾಡುತ್ತದೆ ಎಂಬುದು ತಿಳಿದಿದೆ. DIABETICಗಳಿಗೆ ಮಾತ್ರವಲ್ಲದೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೂ ಪಪ್ಪಾಯಿ ಹಣ್ಣು ಪ್ರಯೋಜನಕಾರಿಯಾಗಿದೆ.

ಏಕೆಂದರೆ ಪಪ್ಪಾಯಿಯಲ್ಲಿ ಪೊಟ್ಯಾಸಿಯಮ್ ಹೇರಳವಾಗಿದೆ. ಇದು ದೇಹದಿಂದ ಹೆಚ್ಚುವರಿ ಸೋಡಿಯಂ ತೆಗೆದುಹಾಕುವಲ್ಲಿ ಹಾಗೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಮುಖ್ಯವಾದ ಪಾತ್ರ ವಹಿಸುತ್ತದೆ.

ಆದ್ರೆ, ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬಾರದು ಎಂದು ತಜ್ಞರು ಸಲಹೆ ನೀಡುತ್ತಾರೆ.ಇದನ್ನು ಹಿತಮಿತವಾಗಿ ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. DIABETIC ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಜನರು ಪಪ್ಪಾಯಿ ಸೇವಿಸುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಉತ್ತಮ ಎಂದು ತಜ್ಞರು ವಿವರಿಸುತ್ತಾರೆ.

Special Note to Readers:ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣಿತ ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳುವುದು ಉತ್ತಮ.ಈ ಲೇಖನದಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ, ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ.

 

ಇದನ್ನು ಓದಿರಿ :GAZA CEASEFIRE : ಹಮಾಸ್ನಿಂದ ಶನಿವಾರ ಮತ್ತೆ 3 ಒತ್ತೆಯಾಳುಗಳ ಬಿಡುಗಡೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...