ರೈತ ಸಮುದಾಯವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 2027ರೊಳಗೆ 11 ಕೋಟಿ ರೈತರಿಗೆ ಆಧಾರ ಕಾರ್ಡ್ ನಂತೆ ಇರುವ ಡಿಜಿಟಲ್ ಐಡಿ ಕಾರ್ಡ್ ಅನ್ನು ಹೊರಡಿಸುವ ಗುರಿ ಹೊಂದಿರುತ್ತದೆ.
ರೈತರಿಗೆ ಪ್ರಮುಖ ಸೇವೆಗಳು ಮತ್ತು ಯೋಜನೆಗಳನ್ನು ತಲುಪಿಸುವ ರೈತ ಕೇಂದ್ರಿತ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಒದಗಿಸುವ ಉದ್ದೇಶ ಹೊಂದಿರುತ್ತದೆ.
ರೈತರಿಗೆ ಆಧಾರ್ ಕಾರ್ಡ್ನಂತೆಯೇ ರೈತ ಗುರುತಿನ ಚೀಟಿ ಪರಿಚಯಿಸುವುದು ಪ್ರಮುಖ ವೈಶಿಷ್ಟ್ಯವಾಗಿದೆ.
2024-25ರ ಹಣಕಾಸು ವರ್ಷದಲ್ಲಿ 6 ಕೋಟಿ, 2025-26ರ ಹಣಕಾಸು ವರ್ಷದಲ್ಲಿ 3 ಕೋಟಿ ಮತ್ತು 2026-27ನೇ ಸಾಲಿನಲ್ಲಿ 2 ಕೋಟಿ ಡಿಜಿಟಲ್ ಐಡಿಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸರ್ಕಾರ ಹೇಳಿದೆ.
ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳಿಂದ ರಚಿಸಲ್ಪಟ್ಟ ಮತ್ತು ನಿರ್ವಹಿಸಲ್ಪಡುವ ಈ ಗುರುತಿನ ಚೀಟಿಗಳಲ್ಲಿ ಭೂ ದಾಖಲೆಗಳು, ಜಾನುವಾರುಗಳ ಮಾಲೀಕತ್ವ, ಬಿತ್ತಿದ ಬೆಳೆಗಳು ಮತ್ತು ಪಡೆದ ಪ್ರಯೋಜನಗಳು ಸೇರಿದಂತೆ ವಿವಿಧ ರೈತ-ಸಂಬಂಧಿತ ಡೇಟಾವನ್ನು ಲಿಂಕ್ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
2024-25 ರಲ್ಲಿ 400 ಜಿಲ್ಲೆಗಳು ಮತ್ತು 2025-26 ರಲ್ಲಿ ಎಲ್ಲಾ ಜಿಲ್ಲೆಗಳನ್ನು ಒಳಗೊಳ್ಳುವ ಡಿಜಿಟಲ್ ಬೆಳೆ ಸಮೀಕ್ಷೆಯನ್ನು ಎರಡು ವರ್ಷಗಳಲ್ಲಿ ರಾಷ್ಟ್ರವ್ಯಾಪಿ ಪ್ರಾರಂಭಿಸಲು ಸರ್ಕಾರ ಯೋಜಿಸಿದೆ.
ಕೃಷಿ ಸಚಿವಾಲಯದ ಪ್ರಕಾರ, ಡಿಜಿಟಲ್ ಕ್ರಾಂತಿಯು ಸುರಕ್ಷಿತ ಪಾವತಿಗಳು ಮತ್ತು ವಹಿವಾಟುಗಳನ್ನು ರಚಿಸುವ ಮೂಲಕ ಇತ್ತೀಚಿನ ವರ್ಷಗಳಲ್ಲಿ ಆಡಳಿತ ಮತ್ತು ಸೇವಾ ವಿತರಣೆಯನ್ನು ಗಣನೀಯವಾಗಿ ಪರಿವರ್ತಿಸಿದೆ. ಇದು ಹಣಕಾಸು, ಆರೋಗ್ಯ, ಶಿಕ್ಷಣ, ಮತ್ತು ಚಿಲ್ಲರೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಡಿಜಿಟಲ್ ಪೂರಕ ಪರಿಸರಕ್ಕೆ ಹಾದಿ ಸುಗಮಗೊಳಿಸಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now