spot_img
spot_img

ಆಂಧ್ರದಲ್ಲಿ ಓಡಾಡುವ ದೇಶದ ಎಲ್ಲ ಹಿರಿಯ ನಾಗರಿಕರಿಗೆ ಬಸ್​ ಪ್ರಯಾಣ ದರದಲ್ಲಿ ರಿಯಾಯಿತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಅಮರಾವತಿ, ಆಂಧ್ರಪ್ರದೇಶ: ದೇಶದ ಎಲ್ಲಾ ರಾಜ್ಯಗಳ ಹಿರಿಯ ನಾಗರಿಕರಿಗೆ, ಆಂಧ್ರದ ಬಸ್​ ಪ್ರಯಾಣ ದರದಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಅಲ್ಲಿನ ಸಾರಿಗೆ ನಿಗಮ ಹೇಳಿದೆ.

ದೇಶದ ಯಾವುದೇ ರಾಜ್ಯದ ಹಿರಿಯ ನಾಗರಿಕರಿಗೆ, ಆಂಧ್ರ ಬಸ್​ಗಳಲ್ಲಿ ಪ್ರಯಾಣಿಸಿದರೆ ಅವರಿಗೆ ಶೇ 25 ರಷ್ಟು ರಿಯಾಯಿತಿ ನೀಡುವುದಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ. 60 ವರ್ಷ ಪೂರೈಸಿದ ನಾಗರಿಕರು ಸರ್ಕಾರಿ ಸ್ವಾಮ್ಯದ ಸಾರಿಗೆಯ ಎಲ್ಲಾ ರೀತಿಯ ಬಸ್​ಗಳಲ್ಲಿ ಈ ರಿಯಾಯಿತಿ ಪಡೆಯಲಿದ್ದಾರೆ.

ಟಿಕೆಟ್ ನೀಡುವ ಸಮಯದಲ್ಲಿ ಅಥವಾ ಪ್ರಯಾಣದ ಸಮಯದಲ್ಲಿ ಹಿರಿಯ ನಾಗರಿಕರಿಂದ ಅವರ ವಯಸ್ಸಿನ ಪುರಾವೆಯಾಗಿ ಆಧಾರ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್ ಪೋರ್ಟ್ ಅಥವಾ ಪಡಿತರ ಚೀಟಿಯನ್ನು ಪರಿಶೀಲಿಸುವಂತೆ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ನಿರ್ದೇಶಿಸಲಾಗಿದೆ.

ಪ್ರಯಾಣಿಕರು ಈ ಯಾವುದೇ ದಾಖಲೆಗಳನ್ನು ಭೌತಿಕ ರೂಪದಲ್ಲಿ ಅಥವಾ ಡಿಜಿಟಲ್ ರೂಪದಲ್ಲಿ ಸಂಬಂಧಪಟ್ಟ ಸಿಬ್ಬಂದಿಗೆ ತೋರಿಸಿದರೆ ಸಾಕು.

“60 ವರ್ಷ ಪೂರೈಸಿದ ಹಿರಿಯ ನಾಗರಿಕರು ಯಾವುದೇ ರಾಜ್ಯ ಸರ್ಕಾರ ಅಥವಾ ಭಾರತ ಸರ್ಕಾರ ನೀಡಿದ, ಭೌತಿಕ ಅಥವಾ ಡಿಜಿಟಲ್ ರೂಪದಲ್ಲಿರುವ ವಯಸ್ಸಿನ ಯಾವುದೇ ಪುರಾವೆಗಳನ್ನು ಹಾಜರುಪಡಿಸಿ ಶೇಕಡಾ 25 ರಷ್ಟು ರಿಯಾಯಿತಿಯನ್ನು ಪಡೆಯಬಹುದು” ಎಂದು ಎಪಿಎಸ್ಆರ್​​ಟಿಸಿ ಆದೇಶದಲ್ಲಿ ತಿಳಿಸಿದೆ.

ಆದೇಶದ ಅನುಷ್ಠಾನ ಖಚಿತಪಡಿಸಿಕೊಳ್ಳಲು ಸಂಸ್ಥೆಯು ಎಲ್ಲಾ ಕ್ಷೇತ್ರ ಅಧಿಕಾರಿಗಳು ಮತ್ತು ಮೇಲ್ವಿಚಾರಕರಿಗೆ ನಿರ್ದೇಶನ ನೀಡಿದೆ.

ಈ ಮೊದಲು ಆಂಧ್ರಪ್ರದೇಶದ ಹಿರಿಯ ನಾಗರಿಕರಿಗೆ ಮಾತ್ರ ಬಸ್​ಗಳಲ್ಲಿ ಶೇಕಡಾ 25 ರಷ್ಟು ರಿಯಾಯಿತಿ ಲಭ್ಯವಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ರಿಯಾಯಿತಿಯನ್ನು 2020 ರಲ್ಲಿ ನಿಲ್ಲಿಸಲಾಗಿತ್ತು. ಸದ್ಯ ಈ ರಿಯಾಯಿತಿಯನ್ನು ಪುನರಾರಂಭಿಸಲಾಗಿದೆ.

ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಅದರ ಮಿತ್ರಪಕ್ಷಗಳು ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೂಡ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಎಪಿಎಸ್ಆರ್​ಟಿಸಿ ಇಷ್ಟರಲ್ಲೇ ಆರಂಭಿಸುವ ಸಾಧ್ಯತೆಯಿದೆ.

ಎಪಿಎಸ್ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವು ‘ಸೂಪರ್ ಸಿಕ್ಸ್’ ಭರವಸೆಗಳ ಅಡಿ ಟಿಡಿಪಿ ನೀಡಿದ ಭರವಸೆಗಳಲ್ಲಿ ಒಂದಾಗಿದೆ.

ಈ ಯೋಜನೆಗಳನ್ನು ಟಿಡಿಪಿ ಮತ್ತು ಅದರ ಮಿತ್ರ ಪಕ್ಷಗಳಾದ ಜನಸೇನಾ ಮತ್ತು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.

ರಾಜ್ಯ ಸರ್ಕಾರ ಶೀಘ್ರದಲ್ಲೇ ಈ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಇತ್ತೀಚೆಗೆ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ನ. ೨೬ ರ ಸಂವಿಧಾನ ದಿನಾಚರಣೆ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್- 260 ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರಗಳು ಒಂದಾಗಿ 1985ರ ನವೆಂಬರ್ 1ರಿಂದ ರಾಜ್ಯದಲ್ಲಿರುವ ಕನ್ನಡ ಬಾರದ...

ನ.25 ರಿಂದ ಚಳಿಗಾಲ ಸಂಸತ್​ ಅಧಿವೇಶನ : ವಕ್ಫ್​ ತಿದ್ದುಪಡಿ

ನವದೆಹಲಿ: ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಸಲ್ಮಾನ್​ ವಕ್ಫ್(ತಿದ್ದುಪಡಿ) ವಿಧೇಯಕ-2024 ಇದೇ ತಿಂಗಳ 25ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಗೆ ಬರಲಿದೆ ಎಂದು...

ಗೂಗಲ್​ ಮ್ಯಾಪ್ ಎಡವಟ್ಟು : ಮಿನಿ ಬಸ್​ ಅಪಘಾತ

ಕಣ್ಣೂರು: ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿಬಸ್​ವೊಂದು ಕಣ್ಣೂರಿನ ಸಮೀಪದ ಕೆಲಕಮ್​ ಬಳಿ ಅಪಘಾತಕ್ಕೆ ಒಳಗಾಗಿದ್ದಾರೆ. ಮಿನಿ ಬಸ್​ ಚಾಲಕ ಗೂಗಲ್ ಮ್ಯಾಪ್​ ಸಹಾಯದಿಂದ...