ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಆದ್ಯತಾ ಪಡಿತರ ಚೀಟಿ ವಿತರಣೆ ಮಾಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ.
ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.
ಇ ಶ್ರಮ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಆಧಾರ ಕಾರ್ಡ್, passport ಸೈಜ್ ಕಾರ್ಡ್, ಮನೆಯ ಸದಸ್ಯರ ಬಗ್ಗೆ ಮಾಹಿತಿ, ಮತದಾರರ ಗುರುತಿನ ಚೀಟಿ, ಖಾಯಂ ನಿವಾಸದ ಪತ್ರ, ಮೊಬೈಲ್ ಸಂಖ್ಯೆ, driving licence, ಮುಂತಾದವುಗಳು ಪ್ರಮುಖ ದಾಖಲೆಗಳನ್ನು ಸಲ್ಲಿಸಬೇಕು.
ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಹಾಕಲು ಕಾಯುತ್ತಿದ್ದಾರೆ. ಈಗಾಗಲೇ ರೇಷನ್ ಕಾರ್ಡ್ ಥ್ಯಾಂಕ್ಸ್. ತಿದ್ದುಪಡಿಗೆ ಸುಧಿರ್ಘವಾದ ಅವಕಾಶವನ್ನು ಸರ್ಕಾರ ನೀಡಿತ್ತು. ಆದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಹಾಕಲು ಅವಕಾಶ ನೀಡಿರಲಿಲ್ಲ.
ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅರ್ಹ ಇ -ಶ್ರಮ ನೋಂದಾಯಿತ ಕಾರ್ಮಿಕರಿಗೆ ಆಧ್ಯಾತಾ ಪಡಿತರ ಚೀಟಿ ವಿತರಣೆ ಕಾರ್ಯ ಆರಂಭಗೊಂಡಿದೆ.
ಅರ್ಹ ಕಾರ್ಮಿಕರು ಆದ್ಯಾತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದು.