ಬೆಂಗಳೂರು (ಅ. 18): ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಜಮಾ ಆಗಿರಲಿಲ್ಲ. ಎರಡು ತಿಂಗಳ ಹಣ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರವು ಈ ಮೂರು ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ.
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳ 2000 ರೂ. ವರ್ಗಾವಣೆ ಆಗಿದ್ದು, ಸದ್ಯ ಬಾಕಿ ಇರುವ ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ.
ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿ ನಂತರ ಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು
ಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿ ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕುವುದು ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಗೆ ಬಂದು ಇರುವ ಓಟಿಪಿಯನ್ನು ಹಾಕುವುದು. ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿ ನಂತರ ಮುಖಪುಟದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಎಲ್ಲಾ ವಿವರಗಳನ್ನು ನೀವು ತುಂಬಾ ಸುಲಭವಾಗಿ ತಿಳಿದುಕೊಳ್ಳಬಹುದು ಎಂದು ಪ್ರಕಟಿಸಲಾಗಿದೆ.
ಗೂಗಲ್ ಪ್ಲೇ ಸ್ಟೋರ್ ಮೂಲಕ ಡಿಬಿಟಿ ಕರ್ನಾಟಕ ಆಪ್ ಡೌನ್ಲೋಡ್ ಮಾಡಿ, ಆಧಾರ್ ಕಾರ್ಡ್ ಬಳಸಿ ಲಾಗಿನ್ ಆಗುವ ಮೂಲಕ ಡಿಬಿಟಿ ಸ್ಟೇಟಸ್ ಪರಿಶೀಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.