spot_img
spot_img

ತುಂಗಭದ್ರಾ ಜಲಾಶಯದ ಬಗ್ಗೆ ಡಿಕೆ.ಶಿವಕುಮಾರ್ ಹೇಳಿದ್ದೆನು.!

spot_img
spot_img

Share post:

ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಬಳಿ ಚರ್ಚೆ ನಡೆಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು. ಇದರ ಮೂಲಕ ನಮ್ಮ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು.

ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ವಿಶೇಷ ಗಿಫ್ಟ್ ಕೊಟ್ಟಿದ್ದೇನೆ ?

ಮುನಿರಾಬಾದ್ (ಕೊಪ್ಪಳ): ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಆದಷ್ಟು ಬೇಗ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಬಳಿ ಚರ್ಚೆ ನಡೆಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು. ಇದರ ಮೂಲಕ ನಮ್ಮ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಕ್ರೆಸ್ಟ್ ಗೇಟ್ ಹಾಳಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ, ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ನಿರಂತರವಾಗಿ ಸಂವಹನ ನಡೆಸುತ್ತಿದ್ದೇನೆ. ದೇವರ ದಯೆ ಮತ್ತು ತಜ್ಞರ ತಂಡದಿಂದ ಗೇಟ್‌ನಲ್ಲಿ ತಾತ್ಕಾಲಿಕ ಸ್ಟಾಪ್ ಲಾಗ್‌ಗಳನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ.

ತುಂಗಭದ್ರಾ ಜಲಾಶಯ ಕರ್ನಾಟಕದ 9,26,438 ಎಕರೆ, ಆಂಧ್ರಪ್ರದೇಶದಲ್ಲಿ 6,25,097 ಎಕರೆ ಮತ್ತು ತೆಲಂಗಾಣದಲ್ಲಿ 87,000 ಎಕರೆ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರಮುಖ ನೀರಿನ ಮೂಲವಾಗಿದೆ. ಕ್ರೆಸ್ಟ್ ಗೇಟ್ ಮುರಿದ ನಂತರ ಮೂರು ರಾಜ್ಯಗಳ ರೈತರು ಆತಂಕಕ್ಕೊಳಗಾಗಿದ್ದರು. ಆ ವೇಳೆ ಜಲಾಶಯ ತುಂಬಲಿದ್ದು, ಬಾಗಿನ ಅರ್ಪಿಸಲು ಬರುತ್ತೇನೆಂದು ಹೇಳಿದ್ದೆ. ಅದೇ ರೀತಿ ಇಂದು ಬಾಗಿನ ಅರ್ಪಿಸಿದ್ದೇನೆಂದು ತಿಳಿಸಿದರು.

ಇದನ್ನೂ ಓದಿ : ಶ್ರೀಕೃಷ್ಣ ಜನ್ಮ ಭೂಮಿಯಲ್ಲಿ ಮತಾಂತರ 5 ಮಂದಿ ಅಂದರ್.!

“ಕ್ರೆಸ್ಟ್ ಗೇಟ್ ಮುರಿದ ನಂತರ, ಬಿಜೆಪಿ ಮತ್ತು ಇತರ ನಾಯಕರು ಘಟನೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸಿದರ್ದರು. ಆದರೆ ಇದು ತಾಂತ್ರಿಕ ದೋಷವೆಂದು ತಿಳಿದುಬಂದಿದೆ. ತುಂಗಭದ್ರಾ ಅಣೆಕಟ್ಟು ರಾಜ್ಯದ ಅತ್ಯಂತ ಹಳೆಯದಾಗಿದ್ದು, ಇದನ್ನು 1953 ರಲ್ಲಿ ನಿರ್ಮಿಸಲಾಗಿತ್ತು. ಪ್ರತಿ 50 ವರ್ಷಗಳಿಗೊಮ್ಮೆ ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಬೇಕು. ಪ್ರಸ್ತುತ ಎದುರಾಗದ್ದ ಪರಿಸ್ಥಿತಿ ಎಲ್ಲರಿಗೂ ಪಾಠವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಆಗಸ್ಟ್ 10ರಂದು 19ನೇ ಗೇಟ್ ಕಿತ್ತು ಹೋದಾಗ ಜಿಲ್ಲಾ ಮಂತ್ರಿಗಳು, ಎಂಡಿಯವರು ಕರೆ ಮಾಡಿ ಡ್ಯಾಮ್ ಅಪಾಯದಲ್ಲಿದೆ ಎಂದು ಪರಿಸ್ಥಿತಿಯ ಬಗ್ಗೆ ತಿಳಿಸಿದರು. ಆತಂಕ ಪಡಬೇಡಿ ಎಂದು ಹೇಳಿ ಮೂರನೇ ದಿನವೇ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳು ಹಾಗೂ ತಾಂತ್ರಿಕ ಪರಿಣಿತರ ಹತ್ತಿರ ಮಾತನಾಡಿ ಎಲ್ಲಾ ಗೇಟ್ ಗಳಿಂದ ನೀರನ್ನು ಹರಿಸಿ ಎಂದು ಹೇಳಿದರು ತಕ್ಷಣ ಗೇಟ್ ತಯಾರು ಮಾಡುವ ಸಂಸ್ಥೆಗಳ ಜೊತೆ ಚರ್ಚೆ ನಡೆಸಿ ಗೇಟ್ ತಯಾರಿಗೆ ಆದೇಶ ನೀಡಿದರು.

ಇದನ್ನೂ ಓದಿ : ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ದಿಶಾ ಮೋಹನ್‌.! ಏಷ್ಯನ್ ಪವರ್‌ಲಿಫ್ಟಿಂಗ್‌ನಲ್ಲಿ.!!

ಡ್ಯಾಮಿನ ಗೇಟ್ ಕಿತ್ತು ಹೋದಂತಹ ಕಷ್ಟಕಾಲದಲ್ಲಿ ನಾವು ಎದೆಗುಂದದೆ ರೈತರ ಜಮೀನಿಗೆ ಮತ್ತೆ ನೀರನ್ನು ಕೊಡುವಂತಹ ಅವಕಾಶ ನನಗೆ (ಡಿಕೆ.ಶಿವಕುಮಾರ್) ಹಾಗೂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ನಮ್ಮ ಭಾಗ್ಯ ಎಂದರು. ಈ ವರ್ಷದೊಳಗೆ ಜಲಾಶಯದಲ್ಲಿ 33 ಹೊಸ ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು  ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೇಳಿದರು.

 

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...