spot_img
spot_img

ಗಂಡು ಮಕ್ಕಳಿಗೂ ಫ್ರೀ ಬಸ್ ಸಿಗುತ್ತಾ?

spot_img
spot_img

Share post:

ಬೆಂಗಳೂರು: ಶಕ್ತಿ ಯೋಜನೆಯಲ್ಲಿ ರಾಜ್ಯದ ಮಹಿಳೆಯರು, ಹೆಣ್ಣು ಮಕ್ಕಳು ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಫ್ರೀ ಬಸ್ ಸೇವೆಯಿಂದ ಸಾಕಷ್ಟು ಬಡವರಿಗೆ ಅನುಕೂಲವಾಗಿದೆ. ಇದರ ಜೊತೆಗೆ ಇದೀಗ ಗಂಡು ಮಕ್ಕಳಿಗೂ ಉಚಿತ ಪ್ರಯಾಣ ನೀಡುವ ಬೇಡಿಕೆ ಕೇಳಿ ಬಂದಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತೀವ್ರ ಸಂಚಲನ ಮೂಡಿಸಿದೆ.

ಡಿಕೆ ಶಿವಕುಮಾರ್ ಅವರ ಈ ಮಾತಿನಿಂದ ಶಕ್ತಿ ಯೋಜನೆ ವಿಸ್ತರಣೆ ಆಗುತ್ತಾ ಅನ್ನೋ ಚರ್ಚೆ ಶುರುವಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ. ಪುರುಷರಿಗೆ ಉಚಿತ ಪ್ರಯಾಣ ನೀಡುವ ಯೋಜನೆ ಸದ್ಯಕ್ಕಿಲ್ಲ.

ನಮ್ಮ ಬಳಿ ಅಂತಹ ಯಾವುದೇ ಪ್ರಸ್ತಾವನೆಯೂ ಇಲ್ಲ. ಡಿಕೆ ಶಿವಕುಮಾರ್ ಭೇಟಿ ಮಾಡಿದಾಗ ಇದರ ಬಗ್ಗೆ ವಿಚಾರಿಸುತ್ತೇನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಒಂದು ಪ್ರಶ್ನೆ ಕೇಳಿದ್ದಾನೆ. ಫ್ರೀ ಬಸ್ ಯೋಜನೆಯಲ್ಲಿ ನಮ್ಮ ತಾಯಿ ಸಂಚಾರ ಮಾಡುತ್ತಾರೆ. ನನ್ನ ತಾಯಿ ನನ್ನ ಬಿಟ್ಟು ನನ್ನ ಅಕ್ಕ-ತಂಗಿಯನ್ನು ಮಾತ್ರ ಕರೆದುಕೊಂಡು ಹೋಗುತ್ತಾರೆ. ಬಸ್ಸಲ್ಲಿ ಗಂಡು ಮಕ್ಕಳಿಗೂ ಫ್ರೀ ಪ್ರಯಾಣ ಸಿಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ಗಂಡು ಮಕ್ಕಳಿಗೂ ಉಚಿತ ಸಾರಿಗೆ ಬಸ್ ಸೇವೆ ನೀಡುವ ಬಗ್ಗೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರನ್ನು ನ್ಯೂಸ್ ಫಸ್ಟ್ ಮಾತನಾಡಿಸಿದ್ದು, ಹಲವು ಪ್ರಯಾಣಿಕರು ಉಚಿತ ಬಸ್ ಸೇವೆಗಿಂತ ಬೇರೆ ಸೌಲಭ್ಯಗಳನ್ನು ಸರ್ಕಾರ ನೀಡಬೇಕು.

ಆಸ್ಪತ್ರೆ, ಶಾಲೆ, ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಲವು ಪ್ರಯಾಣಿಕರು ಮಹಿಳೆಯರಂತೆ ನಮಗೂ ಉಚಿತ ಪ್ರಯಾಣ ನೀಡಬೇಕು ಎಂದಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...