spot_img
spot_img

ಕಾಂಗ್ರೇಸ್ನಲ್ಲಿ ಏನಾಗ್ತಿದೆ ಗೊತ್ತಾ? ಸಂಚಲನ ಮೂಡಿಸಿದ ಜಾರಕಿಹೊಳಿ ಹೈಕಮಾಂಡ್ ಗುಪ್ತ ಭೇಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ  ಪ್ರಕರಣದಲ್ಲಿ ತಗ್ಲಾಕೊಂಡಿದ್ದಾರೆ. ಕಾನೂನು ಹೋರಾಟ ಫೇಸ್‌ ಮಾಡುತ್ತಿರುವ ಸಿದ್ದರಾಮಯ್ಯರ ಸಿಎಂ ಖುರ್ಚಿಯ ಮೇಲೆ ಕಾಂಗ್ರೆಸ್ ನಾಯಕರ ಕಣ್ಣುಹಾಕಿದಂತಿದೆ. ಸಿದ್ದರಾಮಯ್ಯ ಅವರನ್ನ ಚೆಂಜ್‌ ಮಾಡಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಲಿದೆ.

ಮೊನ್ನೆಯಷ್ಟೇ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ನಾನು ಸಚಿವ ಆಗಿ ದಣಿದು ಬೆಂಡಾಗಿದ್ದೇನೆ. ಮುಂದೆ ಸಿಎಂ ಆಗಬೇಕು ಎನ್ನುವ ಆಸೆ ಬಂದಿದೆ. ಜೀವನದಲ್ಲಿಎಲ್ಲರಿಗೂ ಮಹತ್ವಾಕಾಂಕ್ಷೆಗಳು ಇದ್ದೇ ಇರುತ್ತವೆ. ನಾನು ಮುಖ್ಯಮಂತ್ರಿ ಆಗಬೇಕು ಎಂದು ಆಸೆ ಆಗಿದೆ ಎಂದಿದ್ದರು. ಅವರ ಹೇಳಿಕೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಚರ್ಚೆ ಮುಂದೆ ಬಂದಿದೆ. ಇದರ ಜೊತೆಗೆ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ‌ ಅವಾಜಿಲ್ಲದೇ ದೆಹಲಿಗೆ ಹೋಗಿ ಬಂದಿರೋದು ಕೂಡ ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ ಸೃಷ್ಠಿಸಿದೆ.

ಬಲ್ಲ ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆ ಸತೀಶ್ ದೆಹಲಿಗೆ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ರಾಹುಲ್ ಗಾಂಧಿಯನ್ನೂ ಭೇಟಿಯಾಗಿ ಬಂದಿದ್ದಾರೆ. ಬೆನ್ನಲ್ಲೇ ದೆಹಲಿ ವರಿಷ್ಠರ ಭೇಟಿ ನೀಡಿರುವ ವಿಚಾರ ಭಾರೀ ಸಂಚಲನ ಮೂಡಿಸಿದೆ. ಮತ್ತೊಂದು ಕಡೆ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಭೇಟಿ ಮಾಡಿದ್ದಾರೆ.

ಇನ್ನು ದೆಹಲಿ ಭೇಟಿ ಬಳಿಕ ಮಂತ್ರಿ ಸತೀಶ್ ಜಾರಕಿಹೊಳಿ ಫುಲ್ ಸೈಲೆಂಟ್ ಆಗಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ಕೊಡದೆ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ಜಿ ಪರಮೇಶ್ವರ್ ಜೊತೆ ರಹಸ್ಯ ಸಭೆ ನಡೆಸಿದ್ದರು. ಊಟದ ನೆಪದಲ್ಲಿ ತಮ್ಮ ಸರ್ಕಾರಿ ಮನೆಯಲ್ಲಿ ರಹಸ್ಯ ಸಮಾಲೋಚನೆ ನಡೆಸಿದ್ದರು. ಇದರ‌ ಬೆನ್ನಲ್ಲೆ ಸಡನ್‌ ಆಗಿ ದೆಹಲಿಗೆ ತೆರಳಿದ್ದರು.

ಸತೀಶ್ ಜಾರಕಿಹೊಳಿ-ಪರಮೇಶ್ವರ್​ರಿಂದ ದೆಹಲಿ ವರಿಷ್ಠರ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್.. ಮುಖ್ಯಮಂತ್ರಿ ರೇಸ್​ ಏನೂ ಇಲ್ಲ. ನಾನೇ‌ನಕ್ಕೋ ಭೇಟಿ ಮಾಡ್ತೇ‌ನೆ, ಅವರೇನಕ್ಕೋ ಭೇಟಿ ಮಾಡ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿ ಮಾಡೋದು ಪದ್ದತಿ. ಹಾಗಾಗಿ ಅವರು ಹೋಗಿ ಭೇಟಿ ಮಾಡಿರ್ತಾರೆ. ಎಲ್ಲದಕ್ಕೂ ರಾಜಕೀಯ ಬಣ್ಣ ಹಾಕೋದು ಬೇಡ ಎಂದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...