ಬೆಂಗಳೂರು : ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರ ಬಂದ ನಂತರ ಬ್ರ್ಯಾಂಡ್ ಬೆಂಗಳೂರು ಎಂಬ ಹೆಸರು ಹುಟ್ಟು ಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾ ಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರುವ ರಸ್ತೆಯ ಎರಡೂ ಬದಿ ಕಸ ರಾಶಿಯಾಗಿ ಬಿದ್ದಿದೆ. ಅಂದರೆ ಉಪಮುಖ್ಯಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲಿ, ಇಲ್ಲಿ ಯಾರಿಗೂ ಬೆಲೆ ಇಲ್ಲ. ಒಂದು ವಾರದಿಂದ ಸರಿಯಾಗಿ ಕಸ ವಿಲೇವಾರಿ ಮಾಡಿಲ್ಲ. ವಿದ್ಯುತ್ ಕಂಬಗಳಿಂದ ಇನ್ನೆಷ್ಟು ಜನ ಸಾಯುತ್ತಾರೆಂದು ಗೊತ್ತಿಲ್ಲ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದರು.
ಪೌರ ಕಾರ್ಮಿಕರ ಮನೆಗಳಿಗೂ ನೀರು ನುಗ್ಗಿದೆ. ಜನರು ಮನೆಗಳಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ರಾಜಧಾನಿ ಬೆಂಗಳೂರನ್ನು ರಾಜ್ಯ ಸರ್ಕಾರ ಸಂಪೂರ್ಣ ಕಡೆಗಣಿಸಿದೆ. ಸರ್ಕಾರ ಗಾಢ ನಿದ್ದೆಯಲ್ಲಿದ್ದು, ಮೃತಪಟ್ಟವರ ಕುಟುಂಬದ ಶಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now