spot_img
spot_img

BWSSBಯಿಂದ ಮನೆ ಮನೆಗೂ ಕಾವೇರಿ ನೀರು : ಅಭಿಯಾನ ಆರಂಭ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ. ಈ ಕುರಿತು ಜಲಮಂಡಳಿ ಅಧ್ಯಕ್ಷ ರಾಮ್​ ಪ್ರಸಾತ್​ ಮನೋಹರ್​​ ಮಾಹಿತಿ ನೀಡಿದ್ದಾರೆ.

ಕಾವೇರಿ 5ನೇ ಹಂತದ ಕುಡಿಯುವ ನೀರಿನ ಸಂಪರ್ಕ ನೀಡುವ ನಿಟ್ಟಿನಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ತಡೆಗಟ್ಟಿ, ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ದೇಶನ ನೀಡಿದ್ದಾರೆ.

ಬೃಹತ್​ ಬೆಂಗಳೂರಿನ 110 ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವ ಯೋಜನೆಯಾದ ಕಾವೇರಿ 5 ಹಂತವನ್ನು ಅಕ್ಟೋಬರ್​ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಲೋಕಾರ್ಪಣೆಗೊಳಿಸಿದ್ದರು. ಈ ಯೋಜನೆಯ ಅನುಷ್ಠಾನದಿಂದ ನಗರಕ್ಕೆ 775 ಎಂ.ಎಲ್‌.ಡಿಯಷ್ಟು ಹೆಚ್ಚುವರಿ ನೀರು ಲಭ್ಯವಾಗುತ್ತಿದೆ.

ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಕಾವೇರಿ ಕುಡಿಯುವ ನೀರಿನ ಹೊಸ ಸಂಪರ್ಕಗಳನ್ನು ಪಡೆಯಲು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಆದರೆ ಕೆಲವು ಕಡೆಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿವೆ.

ಅಲ್ಲದೇ, ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಬಗ್ಗೆ ಹಲವು ಗೊಂದಲಗಳ ಬಗ್ಗೆ ಗ್ರಾಹಕರು ಗಮನ ಸೆಳೆದಿದ್ದರು. ಅಭಿಯಾನದಿಂದ ಹೊಸದಾಗಿ ಕಾವೇರಿ ನೀರಿನ ಸಂಪರ್ಕ ಪಡೆಯುವುದು ಬಹಳ ಸುಲಭವಾಗಿದೆ.

ನಿಮ್ಮ ವ್ಯಾಪ್ತಿಯಲ್ಲಿ ನಡೆಯಲಿರುವ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ಜನರು ಸಂಪರ್ಕ ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಸಂಪರ್ಕ ಅಭಿಯಾನಗಳಲ್ಲಿ ಆಫ್‌ಲೈನ್‌ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಈಗಾಗಲೇ 8 ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಗ್ರಾಮಗಳಿಗೂ ನೀರು ತಲುಪಿದ್ದು, ಸಂಪರ್ಕ ಪಡೆಯುವ ಗ್ರಾಹಕರಿಗೆ ಶೀಘ್ರವಾಗಿ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಹೊಸದಾಗಿ ಕುಡಿಯುವ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳೀಕರಣಗೊಳಿಸಿ, ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಪ್ಪಿಸುವ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ದೇಶನ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕಾವೇರಿ ಕುಡಿಯುವ ನೀರು ಸಂಪರ್ಕ ಅಭಿಯಾನದ ಶಿಬಿರಗಳಲ್ಲಿ ಗ್ರಾಹಕರು ಅರ್ಜಿಯನ್ನು ಸಲ್ಲಿಸಬೇಕು. ಆ ನಂತರ ಅರ್ಜಿಗಳನ್ನು ಪರಿಶೀಲಿಸಿ ನಿಗದಿತ ಶುಲ್ಕದ ಬಗ್ಗೆ ಅರ್ಜಿದಾರರಿಗೆ ಮಾಹಿತಿಯನ್ನು ನೀಡಲಾಗುತ್ತದೆ.

ಈ ಶುಲ್ಕವನ್ನು ಕೇವಲ ಆನ್‌ಲೈನ್‌ ಆರ್‌ಟಿಜಿಎಸ್‌, ಎನ್‌ಇಎಫ್‌ಟಿ ಅಥವಾ ಡಿಡಿ ಮೂಲಕವೇ ಬೆಂಗಳೂರು ಜಲಮಂಡಳಿಗೆ ಪಾವತಿಸಬೇಕು. ಯಾವುದೇ ಕಾರಣಕ್ಕೂ ಯಾರಿಗೂ ನಗದು ನೀಡುವ ಮೂಲಕ ಮೋಸ ಹೋಗಬಾರದು.

ಬೆಂಗಳೂರು ಜಲಮಂಡಳಿಯಿಂದ ನಿಗದಿಪಡಿಸಲಾದ ಶುಲ್ಕವನ್ನು ಮಂಡಳಿಯ ಅಧಿಕೃತ ಖಾತೆಗೆ ಪಾವತಿಸಬೇಕು. ಸಾರ್ವಜನಿಕರು ಈ ಸಂಪರ್ಕ ಅಭಿಯಾನವನ್ನು ಸದುಯೋಗಪಡಿಸಿಕೊಳ್ಳಬೇಕು ಎಂದು ಡಾ.ರಾಮ್‌ ಪ್ರಸಾತ್‌ ಮನೋಹರ್‌ ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...