spot_img
spot_img

ಬೆಂಗಳೂರಲ್ಲಿ ಡಬಲ್‌ ಡೆಕ್ಕರ್‌ ಮೆಟ್ರೋ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ನಮ್ಮ ಮೆಟ್ರೋದ ಡಬಲ್ ಡೆಕ್ಕರ್ ಯೋಜನೆಗಾಗಿ ಜಿಯೋಟೆಕ್ನಿಕಲ್ ಸರ್ವೇ ಕಾರ್ಯ ನಡೆಯುತ್ತಿದ್ದು, ಬಿಎಂಆರ್​ಸಿಎಲ್ ಟೆಂಡರ್ ಕರೆದಿದೆ.

ಜನದಟ್ಟಣೆ ಕಡಿಮೆ ಮಾಡಲು ಸಿಲಿಕಾನ್ ಸಿಟಿಯಲ್ಲಿ ನಮ್ಮ ಮೆಟ್ರೋ ಯೋಜನೆ ವಿಸ್ತರಣೆಯಾಗುತ್ತಲೇ ಇದ್ದು, ಇದೀಗ ಡಬಲ್ ಡೆಕ್ಕರ್ ಯೋಜನೆಗೆ ಸಿದ್ಧತೆ ನಡೆಯುತ್ತಿದೆ.

ನಮ್ಮ ಮೆಟ್ರೋ 3ನೇ ಹಂತದ ಭಾಗವಾಗಿ ಡಬಲ್ ಡೆಕ್ಕರ್ ಯೋಜನೆಗೆ ಕೈಗೊಳ್ಳಲಾಗಿದೆ. ಈಗಾಗಲೇ ಜಿಯೋಟೆಕ್ನಿಕಲ್‌ ಸರ್ವೇ ನಡೆಸುತ್ತಿರುವ ನಮ್ಮ ಮೆಟ್ರೋ ಈಗ ಎತ್ತರಿಸಿದ ಮಾರ್ಗ, ನಿಲ್ದಾಣಗಳ ವಿನ್ಯಾಸವನ್ನು ಅಂತಿಮಗೊಳಿಸಲು ಮುಂದಾಗಿದೆ.

ಮೂರನೇ ಹಂತದ ಮೆಟ್ರೋ ಯೋಜನೆ ಜೆ.ಪಿ.ನಗರದ 4ನೇ ಹಂತದಿಂದ ಕೆಂಪಾಪುರದವರೆಗೆ ಹಾಗೂ ಹೊಸಹಳ್ಳಿಯಿಂದ ಕಡಬಗೆರೆವರೆಗೆ ಸೇರಿ ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ.

ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರ 15,611 ಕೋಟಿ ರೂ ಮೊತ್ತದ ಯೋಜನೆಗೆ ಅನುಮತಿ ಕೊಟ್ಟ ಬಳಿಕ ಯೋಜನೆ ಅನುಷ್ಠಾನದ ಪ್ರಕ್ರಿಯೆ ಚುರುಕುಗೊಂಡಿದೆ. ಇದೀಗ ಮೂರು ಹಂತದಲ್ಲಿ ಡಬಲ್‌ ಡೆಕ್ಕರ್‌ ಯೋಜನೆಯ ವಿನ್ಯಾಸಕ್ಕಾಗಿ ಬಿಎಂಆರ್‌ಸಿಎಲ್‌ ಮೂರು ಹಂತಗಳಲ್ಲಿ ಟೆಂಡರ್‌ ಕರೆದಿದೆ.

ಸುಮನಹಳ್ಳಿ ಕ್ರಾಸ್‌ ಸ್ಟೇಷನ್‌ನಿಂದ ಕಡಬಗೆರೆ, ಕೆಂಪಾಪುರದವರೆಗೆ ಹಾಗೂ ಜೆ.ಪಿ.ನಗರ ಸ್ಟೇಷನ್‌ನಿಂದ ಬಿಡಿಎ ಕಾಂಪ್ಲೆಕ್ಸ್‌, ನಾಗರಬಾವಿ ಸ್ಟೇಷನ್‌ವರೆಗೆ ಡಬಲ್‌ ಡೆಕ್ಕರ್‌ ಮಾರ್ಗ, ನಿಲ್ದಾಣಗಳು, ರ್ಯಾಂಪ್‌ಗಳ ನಿರ್ಮಾಣಕ್ಕಾಗಿ ವಿನ್ಯಾಸ ಅಂತಿಮ ರೂಪ ಪಡೆಯಲಿದೆ. ಇದರ ಜೊತೆಗೆ ಪೀಣ್ಯ ಹಾಗೂ ಸುಮನಹಳ್ಳಿ ಬಳಿ ಡಿಪೋ, ಸ್ಕೈವಾಕ್‌, ಬಹುಮಾದರಿಯ ಸಾರಿಗೆ ವ್ಯವಸ್ಥೆ ನಿರ್ಮಾಣವನ್ನು ಯಾವ ರೀತಿ ನಿರ್ಮಿಸಬೇಕು ಎಂಬುದರ ಬಗ್ಗೆ ನಿಗಮ ಸಲಹಾ ವರದಿ ಪಡೆಯಲಿದೆ.

ಮೆಟ್ರೋ ಮೂರನೇ ಹಂತದ 44.65 ಕಿ.ಮೀ ಮಾರ್ಗಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಮೊದಲ ಪ್ಯಾಕೇಜ್‌ನಲ್ಲಿ ಹೊರ ವರ್ತುಲ ರಸ್ತೆ ಮಾರ್ಗದಲ್ಲಿ 299 ಆಸ್ತಿಗಳನ್ನು ಗುರುತಿಸಲಾಗಿದೆ.

ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಗೆ ಸಲ್ಲಿಸಲಾಗಿದೆ. ಎರಡನೇ ಪ್ಯಾಕೇಜ್‌ನಲ್ಲಿ ಭೂಸ್ವಾಧೀನಕ್ಕಾಗಿ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಮೂರನೇ ಹಂತದ ಮೆಟ್ರೋ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಿದ ಬಳಿಕ ಈ ಮಾರ್ಗದಲ್ಲಿ ಡಬಲ್ ಡೆಕ್ಕರ್‌ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಹೀಗಾಗಿ ಕೇಂದ್ರದಿಂದ ಸದ್ಯದ ಯೋಜನಾ ವೆಚ್ಚ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಮಾತ್ರ ಸೀಮಿತವಾಗಿದೆ.

ಡಬಲ್‌ ಡೆಕ್ಕರ್‌ ಯೋಜನೆಗೆ ಬೇಕಾಗುವ ಹಣವನ್ನು ಹೇಗೆ ಹೊಂದಿಸಬೇಕೆನ್ನುವುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಹೊನ್ನಾವರ ಪಾವಿನಕುರ್ವೆಯಲ್ಲಿ ಸರ್ವ ಋತು ಬಂದರು

ಉತ್ತರ ಕನ್ನಡ: ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವೆಯಲ್ಲಿ ಖಾಸಗಿ ಸಹಭಾಗಿತ್ವದಡಿಯಲ್ಲಿ 14 MTPA ಸಾಮರ್ಥ್ಯದ ಸರ್ವಋತು...

ಸ್ಟೀಲ್ ನಟ್​ಗಳಲ್ಲಿ ಅರಳಿದ ಆದಿಯೋಗಿಯ ವಿಗ್ರಹ : ಉಡುಪಿ ಕಲಾವಿದನ ಕೈಚಳಕ

ಉಡುಪಿ: ಉಡುಪಿಯ ಮಟ್ಟು ಗ್ರಾಮದ ಡಿಪ್ಲೋಮಾ ಪದವೀಧರರೊಬ್ಬರು ಮೈಲ್ಡ್ ಸ್ಟೀಲ್ ನಟ್ಸ್​ಗಳಿಂದ 58 ಕೆ.ಜಿ. ತೂಕದ ಆದಿಯೋಗಿಯ ವಿಗ್ರಹ ತಯಾರಿಸಿ ಇಂಡಿಯನ್ ಬುಕ್ ಆಫ್...

ಭರತನಾಟ್ಯದ 52 ಮುದ್ರೆ 3 ವರ್ಷದ ಮಗು ಪ್ರದರ್ಶನ : ಗಿನ್ನಿಸ್ ದಾಖಲೆ ನಿರ್ಮಾಣ

ಕೇರಳ: ಭರತನಾಟ್ಯದ ಎಲ್ಲ 52 ಮುದ್ರೆಗಳನ್ನು ಪ್ರದರ್ಶಿಸುವ ಮೂಲಕ ಕೇರಳದ 3 ವರ್ಷದ ಪುಟ್ಟ ಮಗುವೊಂದು ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದೆ. "ನನ್ನ...

ಅಂಚೆ ಚೀಟಿ ಸಂಗ್ರಹ : ಗಿನ್ನೆಸ್​ ಬುಕ್​ ಆಫ್​ ರೆಕಾರ್ಡ್ ನಿಮಿಸಿದ ನಿವೃತ್ತ ನೌಕರ

ಉಡುಪಿ: ಕೆಲವೊಮ್ಮೆ ವ್ಯಕ್ತಿಗಳ ಹವ್ಯಾಸವೇ ಅವರನ್ನು ದೊಡ್ಡ ಸಾಧನೆಯತ್ತ ಕೊಂಡೊಯ್ಯುತ್ತದೆ. ಅದರಂತೆ ಕಾಲೇಜೊಂದರ ನಿವೃತ್ತ ಕಚೇರಿ ಸಹಾಯಕ ಡೇನಿಯಲ್​ ಮೊಂತೇರೊ ಅವರು ಅಂಚೆ ಚೀಟಿ...