WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ನವದೆಹಲಿ: ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲು ‘ಇ- ಶ್ರಮ ಒನ್ ಸ್ಟಾಪ್ ಸಲ್ಯೂಷನ್’ಗೆ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯಾ
ಸೋಮವಾರದಂದು ಚಾಲನೆ ನೀಡಲಿದ್ದಾರೆ.
ಬಜೆಟ್ ನಲ್ಲಿ ಸರ್ಕಾರ ಈ ಯೋಜನೆ ಪ್ರಕಟಿಸಿತ್ತು.ಅಸಂಘಟಿತ ಕಾರ್ಮಿಕರಿಗೆ ಒಂದೇ ಸೂರಿನಡಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ದೊರೆಯಲಿದೆ ಎಂದು ಇದನ್ನು ರೂಪಿಸಲಾಗಿದೆ.
ಈಗಾಗಲೇ ಇ- ಶ್ರಮ ಪೋರ್ಟಲ್ ನಲ್ಲಿ ಕೇಂದ್ರ ಸಚಿವಾಲಯ ಇಲಾಖೆಗಳ 12 ಯೋಜನೆಗಳನ್ನು ಸಂಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಕುರಿತಾಗಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಅಸಂಘಟಿತ ವಲಯದ 30 ಕೋಟಿಗೂ ಹೆಚ್ಚು ಕಾರ್ಮಿಕರು ಇದರಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.