New Delhi News:
ELECTORAL BOND CASE ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್ನ ಆದರ್ಶ್ ಆರ್.ಅಯ್ಯರ್ ಅವರು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ಮಾಡಿದ್ದು, ಅಸ್ಪಷ್ಟ ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಈ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ.
ಚುನಾವಣಾ ELECTORAL BOND CASE ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಈ ಮೂಲಕ ಕಟೀಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.ಅದಕ್ಕೆ ಪ್ರತಿಯಾಗಿ ವಕೀಲ ಪ್ರಶಾಂತ್ ಭೂಷಣ್, ಕ್ರಿಮಿನಲ್ ಪ್ರಕರಣವನ್ನು ಈ ರೀತಿಯಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಾದಿಸಿದರು. ಆದರೆ, ಭವಿಷ್ಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಎಫ್ಐಆರ್ ದಾಖಲಿಸಬಾರದು ಎಂದು ಪೀಠ ಆದೇಶಿಸಿತು. ಸೂಕ್ತ ಸಾಕ್ಷ್ಯಾಧಾರವಿಲ್ಲದೆ ನಾವು ತನಿಖೆಗೆ ಅವಕಾಶ ನೀಡಲು ಸಾಧ್ಯವಿಲ್ಲ.
ಹೈಕೋಟ್ ಆದೇಶದ ಮಧ್ಯೆ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿತು. ELECTORAL BOND CASE ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ನ ಆದರ್ಶ್ ಆರ್.ಅಯ್ಯರ್ ಅವರು ದೂರು ನೀಡಿದ್ದರು.ಈ ಪ್ರಕರಣ ರದ್ದುಪಡಿಸುವಂತೆ ಕೋರಿ ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸೆಪ್ಟೆಂಬರ್ 30 ರಂದು ಅರ್ಜಿ ವಿಚಾರಣೆ ಮಾಡಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹಾಗಾಗಿ, ನಳಿನ್ ಕುಮಾರ್ ಕಟೀಲ್ ಇನ್ನಿತರಿಗೆ ಬಿಗ್ ರಿಲೀಫ್ ನೀಡಲಾಗಿತ್ತು. ELECTORAL BOND CASEದಲ್ಲಿ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ELECTORAL BOND CASE ಮೂಲಕ ಕೋಟ್ಯಂತರ ರೂ ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ವಿರುದ್ಧ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದನ್ನು ಓದಿರಿ : US Begins Deportation Of Illegal Indian Migrants Amid Stricter Immigration Laws