spot_img
spot_img

ಗೃಹಲಕ್ಷ್ಮೀ ಸಂಘಗಳ ಸ್ಥಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕಾಂಗ್ರೆಸ್ ಸರ್ಕಾರ ಕೂಡಾ ಮಹಿಳಾ ಅಭಿವೃದ್ಧಿ ಪರವಾಗಿದ್ದು, ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ರೂರಲ್ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಮಹಿಳಾ‌ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಈ ಹಿಂದೆ ಎಸ್. ಎಂ.ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿಯನ್ನು ತುಂಬಿದರು‌. ಇದೀಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.

ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮೀ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.
ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಅನುಕೂಲಕರ ಮಾಡುವ ಸಲುವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು.

ಇದರ ಫಲವಾಗಿ ಇಂದು 1.24 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿಯ ಫಲವಾಗಿ ಇಂದು ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣ ಮಾಡಲಾಗುತ್ತಿದೆ. ಕನಕಪುರ ತಾಲೂಕಿನಲ್ಲಿ 70 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿದೆ ಎಂದರು.

ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಕೇವಲ ಕರ್ನಾಟಕದ ನಾಯಕ ಅಲ್ಲ, ಅವರು ರಾಷ್ಟ ಮಟ್ಟದ ನಾಯಕ. ಅಭಿವೃದ್ಧಿಗೆ ಮತ್ತೊಂದು ಹೆಸರೇ ಡಿ.ಕೆ.ಶಿವಕುಮಾರ್. ಬೆಂಗಳೂರು ಮಾದರಿಯಲ್ಲಿ ಕನಕಪುರ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕೋವಿಡ್ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು, ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, 136 ಜನ ಶಾಸಕರು ಆಯ್ಕೆಯಾಗಲು ತುಂಬಾ ಶ್ರಮ ಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಲು ಡಿ.ಕೆ.ಶಿವಕುಮಾರ್ ಅವರ ಪಾತ್ರ ದೊಡ್ಡದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಭಿವೃದ್ಧಿಗೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ ಅವರು. ತಮ್ಮ ಸಹೋದರ, ಮಾಜಿ ಸಂಸದರೂ ಆದ ಡಿ.ಕೆ‌.ಸುರೇಶ್ ಜೊತೆಗೂಡಿ ಕನಕಪುರವನ್ನು ಬೆಂಗಳೂರು ನಗರ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿದ್ದಾರೆ ಎಂದು ಶ್ಲಾಘಿಸಿದರು.

ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕನಕಾಂಬರಿ ಒಕ್ಕೂಟದ ಅಧ್ಯಕ್ಷರಾದ ಶ್ರೀಕಂಠು ಅವರು ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಶ್ರೀಕಂಠು ಅವರು ಸಮಾಜಕ್ಕೆ ತಮ್ಮನ್ನು ತಾವೇ ತೊಡಗಿಸಿಕೊಂಡಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...