spot_img
spot_img

ಗಯಾನಾದಲ್ಲಿ ಜನೌಷಧಿ ಕೇಂದ್ರಗಳ ಸ್ಥಾಪನೆ: ಪ್ರಧಾನಿ ಮೋದಿ ಸಹಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಜಾರ್ಜ್‍ಟೌನ್ : ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸಲಿದೆ ಮತ್ತುಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎರಡು ದಿನದ ಪ್ರವಾಸದ ಅಂಗವಾಗಿ ಬುಧವಾರ ಗಯಾನಾದ ಜಾರ್ಜ್‍ಟೌನ್ ತಲುಪಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಗಯಾನಾದ ಅಧ್ಯಕ್ಷ ಮುಹಮ್ಮದ್ ಇರ್ಫಾನ್ ಆಲಿ ಸ್ವಾಗತ ಕೋರಿದರು.

ಗಯಾನಾದ ಅಧ್ಯಕ್ಷ ಇರ್ಫಾನ್ ಆಲಿ ಜತೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಉಭಯ ದೇಶಗಳ ನಡುವೆ ರಕ್ಷಣೆ, ಆಹಾರ ಮತ್ತು ಇಂಧನ ಭದ್ರತೆ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವಿನ ಸಹಕಾರವನ್ನು ಉಲ್ಲೇಖಿಸಿದರು.

ಜಾಗತಿಕ ಸಂಸ್ಥೆಗಳ ಸುಧಾರಣೆಯ ಅಗತ್ಯವಿರುವುದಾಗಿ ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ಮೋದಿ ಹೇಳಿದರು.

ನಮ್ಮ ಸಂಬಂಧಗಳನ್ನು ಬಲಿಷ್ಠಗೊಳಿಸುವ ಹಲವು ಹೊಸ ಉಪಕ್ರಮಗಳನ್ನು ನಾವು ಗುರುತಿಸಿದ್ದೇವೆ. ಗಯಾನಾದಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ವೃದ್ಧಿಗೆ ಭಾರತ ಮಹತ್ವದ ಕೊಡುಗೆ ನೀಡಿದೆ. ಕಳೆದ ವರ್ಷ ರಾಗಿ ನೀಡುವ ಮೂಲಕ ಆಹಾರ ಭದ್ರತೆಗೆ ಕೊಡುಗೆ ನೀಡಿದ್ದೇವೆ.

ಇತರ ಬೆಳೆಗಳ ಕೃಷಿಯಲ್ಲೂ ನಾವು ನೆರವಾಗಿದ್ದೇವೆ. ಇವತ್ತು ಸಹಿ ಹಾಕಲಾಗಿರುವ ಕೃಷಿ ಒಪ್ಪಂದ ಪತ್ರವು ನಮ್ಮ ಪ್ರಯತ್ನಗಳನ್ನು ಬಲಪಡಿಸಲಿದೆ.

ಭಾರತದ ಇಂಧನ ಭದ್ರತೆಯಲ್ಲಿ ಗಯಾನಾ ಪ್ರಮುಖ ಪಾತ್ರ ವಹಿಸುತ್ತದೆ. ದೀರ್ಘಾವಧಿಯ ಪಾಲುದಾರಿಕೆಗೆ ನೀಲನಕ್ಷೆಯನ್ನು ಸಿದ್ಧಪಡಿಸಲಾಗುವುದು. ನಾವು ಜಗತ್ತಿನಲ್ಲಿ ಹಸಿರು ಮತ್ತು ಸುಸ್ಥಿರ ಭವಿಷ್ಯದತ್ತ ಸಾಗುತ್ತಿದ್ದೇವೆ. ರಕ್ಷಣೆಯ ಕ್ಷೇತ್ರದಲ್ಲಿ ನಿಕಟ ಸಹಕಾರವು ನಮ್ಮ ನಡುವಿನ ಪರಸ್ಪರ ವಿಶ್ವಾಸದ ಸಂಕೇತವಾಗಿದೆ.

ಭಾರತ ಕಳೆದ ವರ್ಷ ಗಯಾನಾಕ್ಕೆ ಎರಡು ಡಾರ್ನಿಯರ್ ವಿಮಾನಗಳನ್ನು ಪೂರೈಸಿದೆ. ಸ್ಕಾಲರ್ ಶಿಪ್ ಮತ್ತು ತರಬೇತಿಯ ಮೂಲಕ ಗಯಾನಾದ ಯೋಧರ ಸಾಮರ್ಥ್ಯ ವೃದ್ಧಿಯಲ್ಲಿ ಕೊಡುಗೆ ನೀಡುವುದನ್ನು ಮುಂದುವರಿಸಲಿದ್ದೇವೆ.

ಗಯಾನಾ ಅಧ್ಯಕ್ಷ ಇರ್ಫಾನ್ ಆಲಿ ಅವರು ಭಾರತೀಯ ಸಮುದಾಯದ ದೊಡ್ಡ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...