spot_img
spot_img

ಸಿರಿಯಾದಲ್ಲಿ ಅಸ್ಸಾದ್ ಆಡಳಿತ ಪತನ : ಯೋಧರನ್ನು ನಿಯೋಜಿಸಿದ ಇಸ್ರೇಲ್

spot_img
spot_img

Share post:

ಇಸ್ರೇಲ್: ಸಿರಿಯಾದಲ್ಲಿ ಅಸ್ಸಾದ್ ಆಡಳಿತ ಪತನವಾಗಿದ್ದು ಮುಂಜಾಗ್ರತಾ ಕ್ರಮವಾಗಿ ಇಸ್ರೇಲ್ ಗೋಲನ್ ಹೈಟ್ಸ್​ನಲ್ಲಿ ಭದ್ರತೆಯನ್ನು ಹೆಚ್ಚಿಸಿದೆ.

ಸಿರಿಯಾದಲ್ಲಿ ಅಸ್ಸಾದ್ ಆಡಳಿತ ಪತನದ ಹಿನ್ನೆಲೆಯಲ್ಲಿ ಇಸ್ರೇಲ್-ಸಿರಿಯಾ ಗಡಿಯ ಗೋಲನ್ ಹೈಟ್ಸ್‌ನ ಬಫರ್ ವಲಯದ ಕೆಲ ಹೊಸ ಪ್ರದೇಶಗಳಲ್ಲಿ ಇಸ್ರೇಲ್ ತನ್ನ ಪಡೆಗಳನ್ನು ನಿಯೋಜಿಸಿದೆ.
ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಈ ಕ್ರಮವನ್ನು ದೃಢಪಡಿಸಿದ್ದು, 1974ರ ಸೇನಾ ಹಿಂತೆಗೆತ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದು ಇಂಥ ಮೊದಲ ನಿಯೋಜನೆಯಾಗಿದೆ.

“ಸಿರಿಯಾದಲ್ಲಿ ನಡೆಯುತ್ತಿರುವ ಘಟನೆಗಳಲ್ಲಿ ಐಡಿಎಫ್ ಮಧ್ಯಪ್ರವೇಶಿಸುವುದಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತಿದ್ದೇವೆ” ಎಂದು ಐಡಿಎಫ್ ಹೇಳಿಕೊಂಡಿದೆ.

ಸಿರಿಯಾದ ಬಂಡುಕೋರ ಪಡೆಗಳು ವಾರಾಂತ್ಯದಲ್ಲಿ ದೇಶದಾದ್ಯಂತ ಮಿಂಚಿನ ವೇಗದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದು, ಇಸ್ರೇಲ್ ಗಡಿಯ ಸಮೀಪವಿರುವ ಕ್ಯುನೆಟ್ರಾ ಮತ್ತು ದಾರಾ ಪ್ರದೇಶಗಳನ್ನು ವಶಪಡಿಸಿಕೊಂಡಿರುವುದಾಗಿ ಶನಿವಾರ ತಿಳಿಸಿವೆ.

ಈ ಬಂಡುಕೋರರು ಇಸ್ರೇಲ್ ಗಡಿಯೊಳಗೆ ನುಗ್ಗಲು ಯತ್ನಿಸಿದರೆ ಬಲವಾದ ಪ್ರತಿಕ್ರಿಯೆ ನೀಡುವುದಾಗಿ ಐಡಿಎಫ್ ಎಚ್ಚರಿಕೆ ನೀಡಿದೆ. “ಬಫರ್ ವಲಯಕ್ಕೆ ಸಶಸ್ತ್ರ ಹೋರಾಟಗಾರರ ಪ್ರವೇಶ ಸಾಧ್ಯತೆ ಸೇರಿದಂತೆ ಸಿರಿಯಾದಲ್ಲಿ ಇತ್ತೀಚಿನ ಘಟನೆಗಳ ನಂತರ ಎದುರಾಗಿರುವ ಸನ್ನಿವೇಶದ ಮೌಲ್ಯಮಾಪನಕ್ಕೆ ಅನುಗುಣವಾಗಿ ಗೋಲನ್ ಹೈಟ್ಸ್‌ನಲ್ಲಿನ ನಿವಾಸಿಗಳು ಮತ್ತು ಇಸ್ರೇಲ್ ನಾಗರಿಕರ ಸುರಕ್ಷತೆಯನ್ನು ಕಾಪಾಡಲು ಐಡಿಎಫ್ ಬಫರ್ ವಲಯದಲ್ಲಿ ಮತ್ತು ತನ್ನ ರಕ್ಷಣೆಗೆ ಅಗತ್ಯವಾದ ಹಲವಾರು ಸ್ಥಳಗಳಲ್ಲಿ ಪಡೆಗಳನ್ನು ನಿಯೋಜಿಸಿದೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಐಡಿಎಫ್ ಪೋಸ್ಟ್ ಮಾಡಿದೆ.

ಇಸ್ರೇಲಿ ಗಡಿಗೆ ಸಮೀಪವಿರುವ ಹ್ಯಾಡರ್ ಪಟ್ಟಣದ ಬಳಿ ಬಂದೂಕುಧಾರಿಗಳ ದಾಳಿಯನ್ನು ಹಿಮ್ಮೆಟ್ಟಿಸಲು ಗೋಲನ್ ಹೈಟ್ಸ್​ನ ಸಿರಿಯನ್ ಬದಿಯಲ್ಲಿರುವ ವಿಶ್ವಸಂಸ್ಥೆಯ ಪಡೆಗಳಿಗೆ ಸಹಾಯ ಮಾಡುತ್ತಿರುವುದಾಗಿ ಇಸ್ರೇಲ್ ಮಿಲಿಟರಿ ಶನಿವಾರ ಸಂಜೆ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಬಂಡುಕೋರ ಪಡೆಗಳ ಪ್ರಾಬಲ್ಯ ಅತ್ಯಂತ ವೇಗವಾಹಿ ಹೆಚ್ಚುತ್ತಿರುವ ಮಧ್ಯೆ, ಸಿರಿಯಾದ ಅಧ್ಯಕ್ಷ ಬಷರ್ ಅಲ್-ಅಸ್ಸಾದ್ ಅವರ ಸರ್ಕಾರದ ಪತನದ ನಂತರ ಎದುರಾಗಬಹುದಾದ ಪರಿಸ್ಥಿತಿಗಳನ್ನು ಎದುರಿಸಲು ಇಸ್ರೇಲ್ ಎಲ್ಲ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಕಳೆದ ವಾರಾಂತ್ಯದಲ್ಲಿ, ಸಿರಿಯಾ ಬಂಡುಕೋರರು ದೇಶದ ಎರಡನೇ ಅತಿದೊಡ್ಡ ನಗರವಾದ ಅಲೆಪ್ಪೊವನ್ನು ವಶಪಡಿಸಿಕೊಂಡಿದ್ದಾರೆ. ನಂತರ ಕೆಲವೇ ದಿನಗಳಲ್ಲಿ, ದೇಶದ ಮಧ್ಯಭಾಗದಲ್ಲಿರುವ ಹಮಾ ನಗರವನ್ನು ಸಹ ಅವರು ವಶಪಡಿಸಿಕೊಂಡಿದ್ದಾರೆ. ಶನಿವಾರ ಅವರು ಪ್ರಮುಖ ನಗರವಾದ ಹೋಮ್ಸ್ ಅನ್ನು ಪ್ರವೇಶಿಸಿದ್ದು, ರಾಜಧಾನಿ ಡಮಾಸ್ಕಸ್ ಅನ್ನು ಸುತ್ತುವರಿಯಲು ಪ್ರಾರಂಭಿಸುತ್ತಿದ್ದಾರೆ ಎಂದು ವರದಿಯಾಗಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...