spot_img
spot_img

ಸರ್ಕಾರಿ ಆಸ್ಪತ್ರೆಗಳಲ್ಲಿ 14 ಸಾವಿರ ಹುದ್ದೆಗಳ ಭರ್ತಿ : ಹೈಕೋರ್ಟ್ ಗೆ ಸರ್ಕಾರ ಸೂಚನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿಖಾಲಿ ಇರುವ 14,523 ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ವಾಗಿ ದಾಖಲಿಸಿ­ಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಕಾಯ್ದಿರಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿಮಂಜೂರಾದ ವಿವಿಧ ಒಟ್ಟು 34,967 ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಇದ್ದು, ಅವು­ಗಳನ್ನು ಹಂತ-ಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗು­ತ್ತಿದೆ ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸರಕಾರದ ಹೇಳಿಕೆ­ಯಂತೆ ಒಟ್ಟು ಮಂಜೂರಾದ 34,967 ಹುದ್ದೆಗಳ ಪೈಕಿ 14,523 ಹುದ್ದೆ ಖಾಲಿ ಇವೆ. ಗ್ರಾಮೀಣ ಕಡ್ಡಾಯ ಸೇವೆ ನೆರವಿನಿಂದ ಪರಿಸ್ಥಿತಿ ನಿಭಾಯಿಸ­ಲಾಗುತ್ತಿದೆ ಎಂದು ಸರಕಾರ ಹೇಳಿದೆ. ಇದು ಸರಕಾರದ ನೀತಿ ವಿಚಾರ ಆಗಿರಬಹುದು. ಆದರೆ, ಗ್ರಾಮೀಣ ಕಡ್ಡಾಯ ಸೇವೆ ಇಲ್ಲಎಂದಾದ ಮೇಲೆ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಬಗ್ಗೆ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು,’’ ಎಂದು ಮನವಿ ಮಾಡಿದರು.

ವೈದ್ಯಾಕಾರಿ, ತಜ್ಞರು, ದಂತ ವೈದ್ಯರು, ಲ್ಯಾಬ್‌ ಟೆಕ್ನೀಷಿಯ ನ್‌, ಫಾರ್ಮಸಿ/ ನರ್ಸಿಂಗ್‌ ಅಕಾರಿಗಳು ಹಾಗೂ ಡಿ ಗ್ರೂಪ್‌ ನೌಕರರು ಸೇರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿಒಟ್ಟು ಮಂಜೂರಾದ ಹುದ್ದೆಗಳ ಸಂಖ್ಯೆ 34,967 ಇದ್ದು, ಇದರಲ್ಲಿ20,444 ಹುದ್ದೆಗಳು ಭರ್ತಿಯಾಗಿವೆ.
14,523 ಹುದ್ದೆಗಳು ಖಾಲಿ ಇದ್ದು, ಹೊರಗುತ್ತಿಗೆ, ಸರಕಾರಿ ಗುತ್ತಿಗೆ, ರಾಷ್ಟ್ರೀಯ ಆರೋಗ್ಯ ಮಿಷನ್‌ ಯೋಜನೆ ಯಡಿ 16,501 ಹುದ್ದೆಗಳು ಕಾರ್ಯನಿರ್ವ ಹಿಸುತ್ತಿವೆ,’’ ಎಂದರು.

204 ಜೂನಿಯರ್‌ ಲ್ಯಾಬ್‌ ಟೆಕ್ನೀಷಿಯನ್‌ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆದಿದೆ. 413 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. 498 ಫಾರ್ಮಸಿ ಅಕಾರಿಗಳ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 705 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ, ಖಾಲಿ ಇರುವ 10,253 ಡಿ ಗ್ರೂಪ್‌ ಹುದ್ದೆಗಳಲ್ಲಿಶೇ.75ರಷ್ಟು ಹುದ್ದೆಗಳ ಭರ್ತಿಗೆ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ,’’ ಎಂದು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ

ಧಾರವಾಡ: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಮಂದಿ ಆರೋಪಿಗಳಿಗೆ ಧಾರವಾಡ ಹೈಕೋರ್ಟ್ ಪೀಠ...

ಬಂಗಾರ ಬಣ್ಣದ ನಾಗರಹಾವು ನೋಡಿದ್ದೀರಾ?

ಅಮರಾವತಿ (ಆಂಧ್ರಪ್ರದೇಶ): ಹಾವುಗಳು ಸಹಜವಾಗಿ ಕಪ್ಪು, ಕಂದು ಬಣ್ಣದಲ್ಲಿ ಬರುತ್ತವೆ. ಮಾನವನ ಆವಾಸ್ಥ ಸ್ಥಾನದಿಂದ ದೂರದಲ್ಲಿ ಬದುಕುವ ಅವು ಆಗಾಗ್ಗೆ ಜನರ ಮಧ್ಯೆ ಗೋಚರಿಸುವುದುಂಟು....

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ

ಮೈಸೂರು: ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆಗಿಲ್ಲ. ಭ್ರಷ್ಟಾಚಾರ ಆಗಿದ್ದರೆ ನಾನು ರಾಜಕೀಯ ಬಿಡುತ್ತೇನೆ. ಪ್ರಧಾನಿ ಮೋದಿ ಸುಳ್ಳು ಆರೋಪ ಮಾಡಿದ್ದಾರೆ....

ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕು

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು ಮುಖ್ಯವಾಗಿ ದಕ್ಷಿಣ ಒಳನಾಡಿನಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ (ನ.14)ಕ್ಕೆ ಅನ್ವಯವಾಗುವಂತೆ ಅಲ್ಲಿನ...