spot_img
spot_img

ಕೊನೆಗೂ ಮದ್ಯ ಮಾರಾಟಗಾರರ ಬಂದ್ ವಾಪಸ್.. ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ರಾಜ್ಯಾದ್ಯಂತ (ನವೆಂಬರ್ 20) ನಾಳೆ ಬಂದ್‌ಗೆ ಕರೆ ಕೊಟ್ಟಿದ್ದ ಮದ್ಯ ಮಾರಾಟಗಾರರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಫೆಡರೇಷನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಷನ್ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು.

ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ಮಾತುಕತೆ ನಡೆಸಿದರು.

ಸಿಎಂ ಜೊತೆಗಿನ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.

ಮದ್ಯ ಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ ಜಾರಿ ಮಾಡಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದಿದ್ದಾರೆ.

ಇಷ್ಟೇ ಅಲ್ಲದೇ ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ.

ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೊರಲಿನಿಂದ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಕ್ರೋಮ್​ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಬದಲಾವಣೆ : ಗೂಗಲ್​

ಟೆಕ್​ ದೈತ್ಯೆ ಗೂಗಲ್​ ಪ್ರಮುಖ ಬದಲಾವಣೆಯೊಂದನ್ನು ಮಾಡುತ್ತಿದೆ. ಕ್ರೋಮ್​ ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಪರಿವರ್ತಿಸಲು ಕಾರ್ಯ ನಿರ್ವಹಿಸುತ್ತಿದೆ. ವಿಶ್ವದ ಅತಿದೊಡ್ಡ ಟೆಕ್​ ಕಂಪನಿಗಳಲ್ಲಿ ಒಂದಾದ...

ಟೆಕ್ ಸಮ್ಮಿಟ್ 2024 : ‘ಕರ್ನಾಟಕದ ಐಟಿ ರತ್ನ’ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್​​ವೇರ್​​ ಪಾರ್ಕ್​ಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ನೀಡಲಾಯಿತು. ಅತ್ಯುತ್ತಮ ಸಾಧನೆ ಮಾಡಿರುವ...

ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ – ಐಸಿಯುಗಳತ್ತ ಚಿತ್ತ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ - ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ...

ರೋಗಿಗಳಿಗೆ ಸರ್ಕಾರದಿಂದಲೇ ತಜ್ಞ ವೈದ್ಯರಿಂದ ‘ಉಚಿತ ಸೆಕೆಂಡ್ ಒಪಿನಿಯನ್’

ಬೆಂಗಳೂರು: ರಾಜ್ಯದಲ್ಲಿ ಸರ್ಜರಿಗಳ ಕುರಿತು ಆತಂಕದಲ್ಲಿರುವವರಿಗೆ ನೆರವಾಗಲು 'ಸೆಕೆಂಡ್ ಒಪಿನಿಯನ್' ಯೋಜನೆ ಜಾರಿಗೆ ತರಲಾಗಿದೆ. ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ನೂತನ...