spot_img
spot_img

8 ದೇಶಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

spot_img
spot_img

Share post:

ಬೆಂಗಳೂರು: ಬೆಂಗಳೂರಿನ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಗ್ಲೋಬಲ್ ಯೂತ್ ಎಕನಾಮಿಕ್ ಎಂಪವರ್‌ಮೆಂಟ್ ಪ್ರೋಗ್ರಾಂ (GYEEP) ಮೂಲಕ ಎಂಟು ದೇಶಗಳ 1,500 ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ಬಗ್ಗೆ ಕಲಿಯಲು ನೆರವಾಗಿದ್ದಾರೆ.

ಪಿ. ವೇದಿಕಾ ರಚಿಸಿರುವ ಈ ಉಚಿತ ಆನ್‌ಲೈನ್ ವೆಬ್‌ನಾರ್ ಸರಣಿಯು ಯುವಜನರಿಗೆ ಬಜೆಟ್, ಉಳಿತಾಯ, ಹೂಡಿಕೆ ಮತ್ತು ಉದ್ಯಮಶೀಲತೆಯನ್ನು ಅರ್ಥಮಾಡಿಕೊಳ್ಳುವಂತಹ ಪ್ರಮುಖ ಆರ್ಥಿಕ ಕೌಶಲ್ಯ ಕಲಿಸುವುದು ಮತ್ತು ಕಡೆಗಣಿಸಲ್ಪಟ್ಟ ಅನೇಕ ಶಾಲೆಗಳ ನಡುವಿನ ಅಂತರವನ್ನು ಸರಿದೂರಿಗಿಸುವುದರತ್ತ ಗಮನ ಕೇಂದ್ರೀಕರಿಸಿದೆ.

ಯೂಟ್ಯೂಬ್‌ನಲ್ಲಿ ಲಭ್ಯವಿರುವ GYEEP ಆವೃತ್ತಿಗಳನ್ನು ಕೆನಡಿಯನ್ ಇಂಟರ್‌ನ್ಯಾಶನಲ್ ಸ್ಕೂಲ್‌ನ IB2 ವಿದ್ಯಾರ್ಥಿ ವೇದಿಕಾ ರಚಿಸಿದ್ದಾರೆ ಮತ್ತು ನಡೆಸುತ್ತಿದ್ದಾರೆ. ಈ ಕಾರ್ಯಕ್ರಮವು ಈಜಿಪ್ಟ್‌ನ ನೈಲ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಲೆಬನಾನ್‌ನ ಅರ್ಥಶಾಸ್ತ್ರಜ್ಞರು ಮತ್ತು ಭಾರತದ ಶಿಕ್ಷಣ ತಜ್ಞರನ್ನು ಒಳಗೊಂಡಂತೆ ಪ್ರಪಂಚದಾದ್ಯಂತದ ತಜ್ಞರನ್ನು ಒಟ್ಟುಗೂಡಿಸುತ್ತದೆ.

ಈ ತಜ್ಞರು ಉಪನ್ಯಾಸ ನೀಡುತ್ತಾರೆ. ಕಾರ್ಯಾಗಾರ ನಡೆಸುತ್ತಾರೆ. ನೇರ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ.

ದೇಶಾದ್ಯಂತ ವಿದ್ಯಾರ್ಥಿಗಳಿಗೆ ಹಣಕಾಸು ನಿರ್ವಹಣೆ ಮತ್ತು ಉದ್ಯಮಶೀಲತೆ ಶಿಕ್ಷಣದಲ್ಲಿನ ಅಂತರವನ್ನು ಗುರುತಿಸಿ ವೇದಿಕಾ 2021 ರಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

ಸುರಕ್ಷಿತ ಭವಿಷ್ಯವನ್ನು ನಿರ್ಮಿಸಲು ನಿರ್ಣಾಯಕವಾಗಿರುವ ಹಣಕಾಸು ನಿರ್ವಹಣೆ ಮತ್ತು ಉದ್ಯಮಶೀಲತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜ್ಞಾನ ಲಭ್ಯವಿದೆ ಎಂಬುದುನ್ನು ಖಾತ್ರಿಪಡಿಸಲು ಬಯಸುತ್ತೇನೆ. ಅದೇ ರೀತಿಯಲ್ಲಿ GYEEP ಪ್ರಾರಂಭವಾಯಿತು” ಎಂದು ಅವರು TNIE ಗೆ ತಿಳಿಸಿದರು.

ಮೂಲತಃ 7 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಂಡು, ಈ ಕಾರ್ಯಕ್ರಮ ತ್ವರಿತಗತಿಯಲ್ಲಿ ಜನಪ್ರಿಯತೆ ಪಡೆಯಿತು. ವಯಸ್ಕರು ಸೇರಿದಂತೆ ವಿವಿಧ ವಯೋಮಾನದವರಿಂದ ಭಾಗವಹಿಸುವಿಕೆ ಆಕರ್ಷಿಸಿತು.

ವೇದಿಕಾ ಅವರು ಗೂಗಲ್ ಫಾರ್ಮ್‌ಗಳ ಮೂಲಕ ಸಂಗ್ರಹಿಸಿದ ಡೇಟಾವನ್ನು ಬಳಸಿಕೊಂಡು ವಿವಿಧ ಸಮಯ, ವಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸೆಷನ್ ದೊರೆಯುವಂತೆ ಅವಕಾಶ ಮಾಡಿದರು. ಅವರು ವಿವಿಧ ದೇಶಗಳಲ್ಲಿ ರೋಟರಿ ಇಂಟರ್‌ನ್ಯಾಶನಲ್ ಅಡಿಯಲ್ಲಿ 16 ಕ್ಲಬ್‌ಗಳೊಂದಿಗೆ ಪಾಲುದಾರರಾಗಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...