spot_img
spot_img

ಹುಲಿ ಅರಣ್ಯಕ್ಕೆ ಮರಳಿರುವ ಹೆಜ್ಜೆ ಗುರುತು: ಕಾರ್ಯಾಚರಣೆ ಸ್ಥಗಿತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮಡಿಕೇರಿ: ಗ್ರಾಮದಲ್ಲಿ ಜಾನುವಾರುಗಳ ಮೇಲೆ ಕಳೆದ 3 ದಿನಗಳಿಂದ ದಾಳಿ ಮಾಡಿದ್ದ ಹುಲಿ ಸೆರೆಗೆ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಹುಲಿಯು ಅರಣ್ಯ ಪ್ರದೇಶಕ್ಕೆ ಮರಳಿರುವ ಹೆಜ್ಜೆ ಗುರುತುಗಳನ್ನು ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

ಬೀರುಗ ಗ್ರಾಮದ ಪಾಚಿಬೇಲ್ ಮೂಲಕ ಬ್ರಹ್ಮಗಿರಿ ಅಭಯಾರಣ್ಯಕ್ಕೆ ಹುಲಿ ತೆರಳಿರುವ ಸ್ಥಳದಲ್ಲಿ ಪತ್ತೆಯಾಗಿರುವ ಹುಲಿ ಹೆಜ್ಜೆ ಪರಸ್ಪರ ಹೊಂದಾಣಿಕೆಯಾಗುತ್ತಿದೆ. ಆದ್ದರಿಂದ ಇದನ್ನು ವೈಜ್ಞಾನಿಕವಾಗಿಯೂ ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ಈ ಹಿನ್ನೆಲೆ ಸ್ಥಳದಲ್ಲಿರುವ ಸಾಕಾನೆ, ಕ್ಷಿಪ್ರ ಕಾರ್ಯಪಡೆ, ಕಾಡಾನೆ ಟಾಸ್ಕ್ ಪೋರ್ಸ್‌ನ್ನು ಕಾರ್ಯಾಚರಣೆಯಿಂದ ಹಿಂದೆ ಪಡೆಯುವುದರಿಂದ ಶ್ರೀಮಂಗಲ ವನ್ಯಜೀವಿ ವಿಭಾಗದ ವಲಯರಣ್ಯಾಧಿಕಾರಿ ಅರವಿಂದ್ ಅವರ ನೇತೃತ್ವದಲ್ಲಿ ತಂಡವೊಂದು ಹುಲಿ ಚಲನವಲನದ ಮೇಲೆ ನಿಗಾ ಇಡುತ್ತದೆ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯ ಸಚಿವರು ಮತ್ತು ವನ್ಯಜೀವಿ ವಿಭಾಗದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಅರವಳಿಕೆ ನೀಡಿ ಹುಲಿ ಸೆರೆ ಹಿಡಿಯಲು ಅನುಮತಿ ದೊರಕಿಸಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

5.80 ಕೋಟಿಗೂ ಹೆಚ್ಚು Ration Card ರದ್ದು ಮಾಡಿದ ಮೋದಿ ಸರ್ಕಾರ!

ನವದೆಹಲಿ: ದೇಶಾದ್ಯಂತ 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರ ಪಡೆಯುತ್ತಿದ್ದಾರೆ. ದೇಶದಲ್ಲಿ ಕೇಂದ್ರ ಸರ್ಕಾರವು ಪ್ರಸ್ತುತ 20.4 ಕೋಟಿ ಪಡಿತರ ಚೀಟಿಗಳ ಮೂಲಕ...

Jio, Airtelಗೆ ಮತ್ತೊಂದು ಮಾಸ್ಟರ್​ ಸ್ಟ್ರೋಕ್​​ ಕೊಟ್ಟ ಬಿಎಸ್​ಎನ್​​ಎಲ್..!

ಸರ್ಕಾರಿ ಸ್ವಾಮ್ಯದ BSNL ಸಂಸ್ಥೆಗೆ ಸೆಪ್ಟೆಂಬರ್ ಒಂದೇ ತಿಂಗಳಲ್ಲಿ 8 ಲಕ್ಷ ಹೊಸ ಗ್ರಾಹಕರು ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ಟ್ರಾಯ್ ನೀಡಿದ್ದು, ಬಿಎಸ್ಎನ್ಎಲ್​ಗೆ ಹೆಚ್ಚಿನ...

ಕರ್ನಾಟಕಕ್ಕೆ ಹೆಚ್ಚಿನ ಸಾಲ ಕೇಳಿದ್ದ CM ಸಿದ್ದರಾಮಯ್ಯ.. ಕೊಡಲು ಆಗಲ್ಲ ಎಂದ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕರ್ನಾಟಕಕ್ಕೆ ನೀಡುವ ಸಾಲದ ಮಿತಿಯನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು...

ವಾಯ್ಸ್ ಮೆಸೇಜ್ ಟ್ರಾನ್ಸ್‌ಸ್ಕ್ರಿಪ್ಟ್: ಮತ್ತೊಂದು ಹೊಸ ಫೀಚರ್​ ಪರಿಚಯಿಸಿದ ವಾಟ್ಸ್‌ಆ್ಯಪ್​

Voice to Text Feature: ಮೆಟಾ ಒಡೆತನ ವಾಟ್ಸ್‌ಆ್ಯಪ್ ವಾಯ್ಸ್ ಮೆಸೇಜ್ ಟ್ರಾನ್ಸ್‌ಸ್ಕ್ರಿಪ್ಟ್ಸ್​ ಎಂಬ​ ಹೊಸ ಫೀಚರ್​ ಹೊರತಂದಿದೆ. ಇದರ​ ಸಹಾಯದಿಂದ ನೀವು ವಾಯ್ಸ್​...