ನೌಕರರ ಡಿಎ ಏರಿಕೆ ಹಾಗೂ ಪಿಂಚಣಿದಾರರ ಡಿಆರ್ ಹೆಚ್ಚಳಕ್ಕೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ತುಟ್ಟಿ ಭತ್ಯೆ ಏರಿಕೆ ಮೂಲಕ ಕೇಂದ್ರ ಸರ್ಕಾರ ದೀಪಾವಳಿಗೂ ಮೊದಲೇ ತನ್ನ ನೌಕರರಿಗೆ ಉಡುಗೊರೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ.
1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಜನವರಿಯಲ್ಲಿ ಹಾಗೂ ಜುಲೈನಿಂದ ಪೂರ್ವಾನ್ವಯವಾಗುವಂತೆ ನಂತರದ ತಿಂಗಳುಗಳಲ್ಲಿ ಡಿಎ ಪರಿಷ್ಕರಣೆ ನಡೆಸುವುದು ರೂಢಿ. ಈ ಮೂಲಕ ಹಾಲಿ ಕೇಂದ್ರ ಸರ್ಕಾರಿ ನೌಕರರು ಡಿಎ ಪಡೆದರೆ ಪಿಂಚಣಿದಾರರು ಡಿಆರ್ (ಡಿಯರ್ನೆಸ್ ರಿಲೀಫ್) ಸ್ವೀಕರಿಸುತ್ತಾರೆ.
ಕಳೆದ ಮಾರ್ಚ್ನಲ್ಲಿ ಕೊನೆಯ ಬಾರಿ ಶೇ. 4ರಷ್ಟು ಡಿಎ ಹೆಚ್ಚಳ ಮಾಡಲಾಗಿತ್ತು. ಜನವರಿ 2024ರಿಂದ ಜಾರಿಗೆ ಬರುವಂತೆ ಈ ಏರಿಕೆ ನಡೆದಿತ್ತು.
ತುಟ್ಟಿ ಭತ್ಯೆ ಏರಿಕೆ ಅಂದಾಜು 1.15 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಹೆಚ್ಚುತ್ತಿರುವ ಹಣದುಬ್ಬರದ ನಡುವೆ ಒಂದಿಷ್ಟು ರಿಲೀಫ್ ನೀಡಲಿದೆ.
ಇದಾದ ಬಳಿಕ ಕೇಂದ್ರ ಸರ್ಕಾರಿ ನೌಕರರು ತಮ್ಮ ಮೂಲ ವೇತನದ ಶೇ. 50ರಷ್ಟು ಡಿಎ ಹಾಗೂ ಪಿಂಚಣಿದಾರರು ತಮ್ಮ ಮೂಲ ಪಿಂಚಣಿಯ ಶೇ. 50ರಷ್ಟು ಡಿಆರ್ ಅನ್ನು ಪಡೆಯಲು ಅರ್ಹರಾಗಿದ್ದರು.
ಡಿಎ ಹೆಚ್ಚಳವು ಸರ್ಕಾರಿ ನೌಕರರಿಗೆ ಅವರ ಖರೀದಿ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಕಾರ್ಮಿಕ ಸಚಿವಾಲಯ ಪ್ರತಿ ತಿಂಗಳು ಈ ಅಂಕಿ-ಅಂಶಗಳನ್ನು ಬಿಡುಗಡೆ ಮಾಡುತ್ತದೆ.
7ನೇ ವೇತನ ಆಯೋಗದ ಅಡಿಯಲ್ಲಿ ಡಿಎ ಲೆಕ್ಕ ಹಾಕಲು ಈ ಸೂತ್ರವನ್ನು ಬಳಸಲಾಗುತ್ತದೆ.