spot_img
spot_img

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮುಂಬೈ: ಡಿಸೆಂಬರ್ 5 ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೆಸರು ಹೇಳಲು ಇಚ್ಛಿಸದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ಡಿಸೆಂಬರ್ 5 ರಂದು ರಚನೆಯಾಗಲಿದ್ದು, ದೇವೇಂದ್ರ ಫಡ್ನವಿಸ್ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಶನಿವಾರ ಹೇಳಿದ್ದಾರೆ.

ಬಿಜೆಪಿ 132 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳೊಂದಿಗೆ ನಂತರದ ಸ್ಥಾನದಲ್ಲಿವೆ.

ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ(ಬಿಜೆಪಿ), ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ಯ ಮಹಾಯುತಿ ಮೈತ್ರಿಕೂಟ 288 ವಿಧಾನಸಭಾ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗಳಿಸುವ ಮೂಲಕ ಮತ್ತೆ ಅಧಿಕಾರಕ್ಕೇರುತ್ತಿದೆ.

ಶಿಂಧೆ, ಫಡ್ನವೀಸ್ ಮತ್ತು ಪವಾರ್ ಗುರುವಾರ ತಡರಾತ್ರಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮುಂದಿನ ಸರ್ಕಾರ ರಚನೆ, ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಮಹಾಯುತಿ ಮೈತ್ರಿಕೂಟದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲು ಸಾಧ್ಯವಾಗದ ಕಾರಣ ಹೊಸ ಸರ್ಕಾರ ರಚನೆ ವಿಳಂಬವಾಗುತ್ತಿದೆ.

ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಹೇಳಿದ್ದಾರೆ.
ಕಳೆದ ಸರ್ಕಾರದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್ 2 ರಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

EDUCATION SOCIETY : 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ

New Delhi News: 2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ...

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

Srinagar News: ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ...

C T RAVI CASE – ಕೆಲವು ಬಾರಿ ಸರ್ಕಾರಕ್ಕೆ ಮುಜುಗರ

Bangalore News: "ಕೆಲವು ಬಾರಿ ಸರ್ಕಾರಕ್ಕೆ ‌ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

Bangalore News: ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್...