ಬೆಂಗಳೂರು: ಕರ್ನಾಟಕ ಚಲನಚಿತ್ರೋದ್ಯಮದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (Physical Abuse) ತಡೆಗಟ್ಟುವಿಕೆ ಸಮಿತಿ (posh committee) ಸಮಿತಿ ರಚಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ವಾಣಿಜ್ಯ ಮಂಡಳಿ, ಕೊನೆಗೂ ಸಮಿತಿ ರಚಿಸಿದೆ. ನಿರ್ದೇಶಕಿ ಕವಿತಾ ಲಂಕೇಶ್ (Kavitha Lankesh) ಅವರನ್ನು ಇದಕ್ಕೆ ಅಧ್ಯಕ್ಷರನ್ನಾಗಿಸಲಾಗಿದೆ ಎಂದು ವಿವರಿಸಿದ್ದಾರೆ.
ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.
ಪೋಶ್ ಕಮಿಟಿ ರಚನೆ ವಿಚಾರವಾಗಿ ಮಹಿಳಾ ಆಯೋಗಕ್ಕೆ ಪತ್ರ ಬರೆದು ವಾಣಿಜ್ಯ ಮಂಡಳಿ ಮಾಹಿತಿ ನೀಡಿದೆ. ಸಮಿತಿಯ ಪಟ್ಟಿ ಸಿದ್ಧವಾಗಿದ್ದರೂ, ಡಿ.14ಕ್ಕೆ ಫಿಲ್ಮ್ ಚೇಂಬರ್ ಚುನಾವಣೆ ನಡೆಯಲಿದ್ದು, ಆ ಬಳಿಕ ಪಾಶ್ ಕಮಿಟಿಯನ್ನು ಅಧಿಕೃತವಾಗಿ ಪ್ರಕಟ ಮಾಡಲಿದೆ ಎಂದು ತಿಳಿದುಬಂದಿದೆ.
ಕಾಯಂ ಸದಸ್ಯರಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಮ್ ಸುರೇಶ್, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now