ಬೆಂಗಳೂರು : ಈಗಾಗಲೇ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಪುಸ್ತಕ ವಿತರಣೆ, ಬಿಸಿ ಊಟ, ವಾರಕ್ಕೆ ಆರು ದಿನ ಮೊಟ್ಟೆ ವಿತರಿಸುವ ಯೋಜನೆ ಜಾರಿಯಲ್ಲಿ ಇತ್ತು. ಇದೀಗ ಉಚಿತವಾಗಿ ಟ್ಯೂಷನ್ ಹೇಳಿ ಕೊಡುವ ಯೋಜನೆ ಜಾರಿ ಮಾಡುವ ಚಿಂತನೆ ನಡೆಸುತ್ತಿದ್ದು ಸರ್ಕಾರಿ ಮಕ್ಕಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದಂತಾಗಿದೆ.
ಪಠ್ಯಕ್ರಮ ವಿಚಾರದಲ್ಲಿ ಹಲವು ವಿಷಯಗಳು ಮಕ್ಕಳಿಗೆ ಕಬ್ಬಿಣದ ಕಡಲೆಯಂತಾಗಿವೆ. ಖಾಸಗಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವ ಪೋಷಕರೇನೋ ದುಡ್ಡು ಕೊಟ್ಟು ಪ್ರೈವೇಟ್ ಟ್ಯೂಷನ್ ತರಗತಿಗೆ ಕಳುಹಿಸುತ್ತಾರೆ.
ಆದರೆ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರ ಫ್ರೀ ಟ್ಯೂಷನ್ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.
ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್ಗೆ ಕಳುಹಿಸುತ್ತಿದ್ದಾರೆ. ಇತ್ತೀಚಿಗೆ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ.
1 ರಿಂದ 12 ನೇ ತರಗತಿಯಲ್ಲಿನ ಮಕ್ಕಳಿಗೆ ಇದು ಆರಂಭವಾಗುತ್ತಿದೆ. ಯಾವ ತರಗತಿಯಲ್ಲಿ ಹಿನ್ನಡೆ ಇದ್ದಾರೆ ಎಂದು ಶಾಲಾ ಶಿಕ್ಷಕರೇ ಗುರುತಿಸಿ ಆ ವಿಷಯದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನ ಈ ಸ್ಪೆಷಲ್ ಕ್ಲಾಸ್ಗೆ ಕಳುಹಿಸುತ್ತಾರೆ.
ಮುಂಜಾನೆ ಹಾಗೂ ಸಂಜೆ ಶಾಲೆಯ ಆರಂಭಕ್ಕೂ ಮೊದಲು ಒಂದು ಗಂಟೆ ಹಾಗೂ ಶಾಲೆ ಅವಧಿ ಮುಗದ ಬಳಿಕ ಒಂದು ಕ್ಲಾಸ್ ಶಿಕ್ಷಕರು ಮಕ್ಕಳಿಗೆ ವಿಶೇಷ ತರಗತಿ ತಗೆದುಕೊಳ್ಳುತ್ತಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now