spot_img
spot_img

ಅವಾಚ್ಯ ಶಬ್ದ ಬಳಸಿದ ರಜತ್ ಗೆ ಕಿಚ್ಚನ ಪಂಚಾಯ್ತಿಯಲ್ಲಿ ಫುಲ್ ಕ್ಲಾಸ್

spot_img
spot_img

Share post:

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11, 54ನೇ ದಿನಕ್ಕೆ ಕಾಲಿಟ್ಟಿದೆ. ಈ ಐವತ್ತು ದಿನಗಳಲ್ಲಿ ಬಿಗ್​ಬಾಸ್​ ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಅದರಲ್ಲೂ ಬಿಗ್​ಬಾಸ್​ ಮನೆಗೆ 50ನೇ ದಿನಕ್ಕೆ ಎಂಟ್ರಿ ಕೊಟ್ಟಿದ್ದ ಸ್ಪರ್ಧಿಗಳು ಸುದ್ದಿಯಲ್ಲಿದ್ದಾರೆ.

ಹೌದು, ಬಿಗ್​ಬಾಸ್​ ಮನೆಗೆ ಹನುಮಂತನ ಬಳಿಕ ಶೋಭಾ ಶೆಟ್ಟಿ ಹಾಗೂ ರಜತ್​​ ಕಿಶನ್​ ಎಂಟ್ರಿ ಕೊಟ್ಟಿದ್ದರು. ಬಿಗ್​ಬಾಸ್​ ಮನೆಗೆ ಬಂದ ದಿನದಲ್ಲೇ ವಿಶೇಷ ಅಧಿಕಾರವನ್ನು ಪಡೆದುಕೊಂಡಿದ್ದರು.

ಇದಾದ ಬಳಿಕ ಶೋಭಾ ಶೆಟ್ಟಿ ಅದ್ಭುತವಾಗಿ ಟಾಸ್ಕ್​ ಆಡುವ ಮೂಲಕ ಕಮಾಲ್​ ಮಾಡಿದ್ದರು. ಆದರೆ ರಜತ್​ ಟಾಸ್ಕ್​ವೊಂದನ್ನು ಆಡುವಾಗ ಗೋಲ್ಡ್​ ಸುರೇಶ್​ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು.

ಆದರೆ ಇಂದಿನ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್​ ಅವರು ನೇರ ನೇರವಾಗಿ ಅವಾಚ್ಯ ಶಬ್ದಗಳನ್ನು ಬಳಸಿದ ರಜತ್​ಗೆ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ.

ಸದ್ಯ ರಿಲೀಸ್​ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಅವರು, ರಜತ್​ ಕನ್ನಡದಲ್ಲಿ ತುಂಬಾ ಪದಗಳು ಇವೆ ಮಾತನಾಡೋಕೆ, ಆದರೆ ಕೆಲವೊಂದಕ್ಕೆ ಅದರದ್ದೇ ಆದ ತೂಕಗಳಿವೆ.

ಆ ಪದವನ್ನೇ ನನ್ನ ಮುಂದೆ ಹೇಳಿ ಅಂತ ಕೇಳಿದ್ದಾರೆ. ಆಗ ರಜತ್​ ಫುಲ್ ಸೈಲೆಂಟ್ ಆಗಿದ್ದಾರೆ. ಮತ್ತೆ ಕಿಚ್ಚ ಸುದೀಪ್​ ಅವರು ನೆಕ್ಸ್ಟ್ ಟೈಮ್ ಬಾಗಿಲು ಇದೆ ಹೊರಗಡೆ ಹೋಗೋದಕ್ಕೆ ಅಂತ ವಾರ್ನಿಂಗ್ ಕೊಟ್ಟಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...