ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 54ನೇ ದಿನಕ್ಕೆ ಕಾಲಿಟ್ಟಿದೆ. ಈ ಐವತ್ತು ದಿನಗಳಲ್ಲಿ ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಅದರಲ್ಲೂ ಬಿಗ್ಬಾಸ್ ಮನೆಗೆ 50ನೇ ದಿನಕ್ಕೆ ಎಂಟ್ರಿ ಕೊಟ್ಟಿದ್ದ ಸ್ಪರ್ಧಿಗಳು ಸುದ್ದಿಯಲ್ಲಿದ್ದಾರೆ.
ಹೌದು, ಬಿಗ್ಬಾಸ್ ಮನೆಗೆ ಹನುಮಂತನ ಬಳಿಕ ಶೋಭಾ ಶೆಟ್ಟಿ ಹಾಗೂ ರಜತ್ ಕಿಶನ್ ಎಂಟ್ರಿ ಕೊಟ್ಟಿದ್ದರು. ಬಿಗ್ಬಾಸ್ ಮನೆಗೆ ಬಂದ ದಿನದಲ್ಲೇ ವಿಶೇಷ ಅಧಿಕಾರವನ್ನು ಪಡೆದುಕೊಂಡಿದ್ದರು.
ಇದಾದ ಬಳಿಕ ಶೋಭಾ ಶೆಟ್ಟಿ ಅದ್ಭುತವಾಗಿ ಟಾಸ್ಕ್ ಆಡುವ ಮೂಲಕ ಕಮಾಲ್ ಮಾಡಿದ್ದರು. ಆದರೆ ರಜತ್ ಟಾಸ್ಕ್ವೊಂದನ್ನು ಆಡುವಾಗ ಗೋಲ್ಡ್ ಸುರೇಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು.
ಆದರೆ ಇಂದಿನ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಅವರು ನೇರ ನೇರವಾಗಿ ಅವಾಚ್ಯ ಶಬ್ದಗಳನ್ನು ಬಳಸಿದ ರಜತ್ಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಸದ್ಯ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು, ರಜತ್ ಕನ್ನಡದಲ್ಲಿ ತುಂಬಾ ಪದಗಳು ಇವೆ ಮಾತನಾಡೋಕೆ, ಆದರೆ ಕೆಲವೊಂದಕ್ಕೆ ಅದರದ್ದೇ ಆದ ತೂಕಗಳಿವೆ.
ಆ ಪದವನ್ನೇ ನನ್ನ ಮುಂದೆ ಹೇಳಿ ಅಂತ ಕೇಳಿದ್ದಾರೆ. ಆಗ ರಜತ್ ಫುಲ್ ಸೈಲೆಂಟ್ ಆಗಿದ್ದಾರೆ. ಮತ್ತೆ ಕಿಚ್ಚ ಸುದೀಪ್ ಅವರು ನೆಕ್ಸ್ಟ್ ಟೈಮ್ ಬಾಗಿಲು ಇದೆ ಹೊರಗಡೆ ಹೋಗೋದಕ್ಕೆ ಅಂತ ವಾರ್ನಿಂಗ್ ಕೊಟ್ಟಿದ್ದಾರೆ.