ಬೆಳಗಾವಿ: ಕುಕಡೊಳ್ಳಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣ (Gruha lakshmi scheme) ಕೂಡಿಟ್ಟು, ಮಿರ್ಚಿ ಮಿಕ್ಸರ್ ಮಷಿನ್ (ಖಾರದ ಗಿರಣಿ) ಖರೀದಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾನುವಾರ ಮಷಿನ್ ಉದ್ಘಾಟಿಸಿದರು.
ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಗೃಹಲಕ್ಷ್ಮಿ ಸುಧಾರಣೆಗೊಳಿಸಿದ್ದು, ಸಾಕಷ್ಟು ಬಡ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಯ ಮೂಲಕ ಬದುಕು ಕಟ್ಟಿಕೊಂಡಿವೆ. ಯೋಜನೆಯ ಸಾರ್ಥಕತೆಗೆ ಇದಕ್ಕಿಂತ ಬೇರೆ ಉದಾಹರಣೆ ಇಲ್ಲ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಿಂದ ಹೆಣ್ಣು ಮಕ್ಕಳಿಗಂತೂ ಇದರಿಂದ ತುಂಬಾ ಪ್ರಯೋಜನ ಸಿಕ್ಕಿದೆ. ಈಗಾಗಲೇ ಗೃಹಲಕ್ಷ್ಮಿ ಹಣದಿಂದ ಸೊಸೆಗೆ ಬಳೆ ಮಳಿಗೆ, ಮಗನಿಗೆ ಬೈಕ್, ಊರಿಗೊಂದು ಲೈಬರಿ, ಮನೆಗೊಂದು ಎತ್ತು, ಹೋಳಿಗೆ ಊಟ, ಟಿವಿ ಹೀಗೆ ಅನೇಕ ವಸ್ತುಗಳನ್ನು ಖರೀದಿಸಿ ತಮಗಾದ ಅನುಕೂಲತೆ ಬಗ್ಗೆ ಹೇಳಿದ್ದಾರೆ. ಅದರಂತೆಯೇ ಇದೀಗ ಗೃಹಲಕ್ಷ್ಮಿ ಹಣದಿಂದ ಮಹಿಳೆಯೊಬ್ಬರು ಖಾರ ಪುಡಿ ಮಾಡೋ ಯಂತ್ರ ಖರೀದಿಸಿರುವ ಸಂಗತಿ ಬೆಳಕಿಗೆ ಬಂದಿದೆ.
ಗೃಹಲಕ್ಷ್ಮಿ ಹಣದಲ್ಲಿ ಅನೇಕ ಮಹಿಳೆಯರಿಗೆ ಉಪಯೋಗವಾಗಿದೆ. ಇದರಿಂದಾಗಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಸಚಿವೆ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಚನ್ನಬಸಯ್ಯ ಹಿರೇಮಠ್, ಬಸಯ್ಯ ಚಿಕ್ಕಮಠ್, ವೀರನಗೌಡ ಪಾಟೀಲ, ತಾಯಪ್ಪ ಮರಕಟ್ಟಿ, ಪುಂಡಲೀಕ ಬೈರೋಜಿ, ಕಲ್ಲಪ್ಪ ವಡ್ಡಿನ, ಪರಶುರಾಮ ಕುರುಬರ, ಅನ್ನಪೂರ್ಣ ಪಾಟೀಲ, ಗದಿಗೆಪ್ಪ ವಡ್ಡಿನ, ದೊಡ್ಡಪ್ಪ ದೇಶನೂರ್, ರಾಮಪ್ಪ ಕರವಿನಕೊಪ್ಪ, ಹೊಳೆಪ್ಪ ಹಟ್ಟಿ ಹಾಗೂ ಗ್ರಾಮದ ಅನೇಕ ಮಹಿಳೆಯರು ಉಪಸ್ಥಿತರಿದ್ದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now