spot_img
spot_img

ಕೂಲಿಕಾರನ ಮಗಳಿಗೆ ಚಿನ್ನದ ಪದಕ

spot_img
spot_img

Share post:

ಬೆಳಗಾವಿ: ಬಡತನದ ನಡುವೆ ವಿದ್ಯಾರ್ಥಿನಿಯೊಬ್ಬಳು ಎಂಎ ರಾಜಕೀಯ ಶಾಸ್ತ್ರದಲ್ಲಿ ಚಿನ್ನದ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಮೀನಾಕ್ಷಿ ಪುಂಡಲೀಕ ದಾವನೆ ಎಂಬ ವಿದ್ಯಾರ್ಥಿನಿ ಎಂಎ ರಾಜಕೀಯ ಶಾಸ್ತ್ರದಲ್ಲಿ ಚಿನ್ನದ ಪದಕ ಪಡೆದರು. ಈ ವೇಳೆ ಅವರ ತಂದೆ-ತಾಯಿ ಸಂತಸಕ್ಕೆ ಪಾರವೇ ಇರಲಿಲ್ಲ.
ಮೀನಾಕ್ಷಿ ಚಿಕ್ಕೋಡಿ ತಾಲೂಕಿನ ಕುಟಾಳಿ ಗ್ರಾಮದ ಅಪ್ಪಟ ಗ್ರಾಮೀಣ ಪ್ರತಿಭೆ. ತಂದೆ ಪುಂಡಲೀಕ, ತಾಯಿ ಅನಿತಾ ಇಬ್ಬರು ಬೇರೆಯವರ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಾರೆ. ಪುಂಡಲೀಕ ಮತ್ತು ಅನಿತಾ ದಂಪತಿಗೆ ಐವರು‌ ಮಕ್ಕಳು. ಮೊದಲ ಪುತ್ರಿ ಅಮೃತಾ, ಚಿಕ್ಕೋಡಿ ಸಿವಿಲ್ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರಿ ಮಾಡುತ್ತಿದ್ದರೆ, ಎರಡನೇ ಪುತ್ರ ಅಮರ ಸ್ವಗ್ರಾಮ ಕುಟಾಳಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಲ್ಕನೇ ಪುತ್ರಿ ಸುಮಿತ್ರಾ ಎಂಎ ಬಿಇಡಿ ಪದವಿ ಪಡೆದಿದ್ದು, ಸರ್ಕಾರಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಇನ್ನು ಕೊನೆಯ ಪುತ್ರ ಭೀಮರಾವ ಬಿಇ ಸಿವಿಲ್ ಮುಗಿಸಿದ್ದು ಬೆಂಗಳೂರಿನ ಎಟಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೂರನೇ ಪುತ್ರಿ ಮೀನಾಕ್ಷಿ ಎಂಎ ರಾಜಕೀಯ ಶಾಸ್ತ್ರದಲ್ಲಿ ಈಗ ಚಿನ್ನದ ಪದಕ‌ ಮುಡಿಗೇರಿಸಿಕೊಂಡಿದ್ದಾರೆ.‌ ಈ ಮೂಲಕ ಹುಟ್ಟಿದರೆ ಇಂಥ ಮಕ್ಕಳು ಹುಟ್ಟಬೇಕು ಎನ್ನುವಂತೆ ಸಾಧನೆಗೈಯುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಮೀನಾಕ್ಷಿ ತಂದೆ ಪುಂಡಲೀಕ ದಾವನೆ ಮಾತನಾಡಿ, ಬೇರೊಬ್ಬರ ಹೊಲದಲ್ಲಿ ನಾವು ಕೆಲಸ ಮಾಡುತ್ತೇವೆ. ಆದರೆ, ಮಕ್ಕಳ ಓದಿಗೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡೆವು. ನಮ್ಮ ಮಗಳಿಗೆ ಚಿನ್ನದ ಪದಕ‌ ಸಿಕ್ಕಿರುವುದು ಬಹಳಷ್ಟು ಖುಷಿ ತಂದಿದೆ. ನಮ್ಮಂತೆ ಮಕ್ಕಳು ಆಗಬಾರದು ಅಂತಾ ಕಷ್ಟಪಟ್ಟು ಐವರು ಮಕ್ಕಳನ್ನು ಓದಿಸಿದೆವು. ಈಗ ಮಕ್ಕಳ ಸಾಧನೆ ಕಂಡು ನಮಗೆ ಮಾತೇ ಬರುತ್ತಿಲ್ಲ. ಇಂಥ ಮಕ್ಕಳನ್ನು ಪಡೆದ ನಾವೇ ಧನ್ಯ ಎಂದು ಭಾವುಕರಾದರು.
ತುಂಬಾ ಖುಷಿ ಆಗುತ್ತಿದೆ. ನನ್ನ ಈ ಸಾಧನೆ ಹಿಂದೆ ನನ್ನ ತಂದೆ-ತಾಯಿ‌ ಪರಿಶ್ರಮ ಮತ್ತು ಸಹಕಾರವಿದೆ.‌ ವಿ.ವಿ. ಉಪನ್ಯಾಸಕರು ಒಳ್ಳೆಯ ರೀತಿ ಪ್ರೋತ್ಸಾಹಿಸಿದರು. ಹಾಸ್ಟೆಲ್​ನಲ್ಲಿ ಇದ್ದಿದ್ದರಿಂದ ಓದೋಕೆ ಸಾಕಷ್ಟು ಸಮಯಾವಕಾಶ ಸಿಕ್ಕಿತು.‌ ಮಗಳು ಏನಾದರೂ ಸಾಧನೆ ಮಾಡಿಯೇ ಊರಿಗೆ ಬರುತ್ತಾಳೆ ಎಂದು ಪಾಲಕರು ನಿರೀಕ್ಷೆ ಇಟ್ಟುಕೊಂಡಿದ್ದರು. ಅದು ಹುಸಿ ಆಗಲಿಲ್ಲ. ಮುಂದೆ ಪಿಯು ಇಲ್ಲವೇ ಡಿಗ್ರಿ ಕಾಲೇಜಿನ ಉಪನ್ಯಾಸಕಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಚಿನ್ನದ ಹುಡುಗಿ ಮೀನಾಕ್ಷಿ ಅವರು ಹರ್ಷ ವ್ಯಕ್ತಪಡಿಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...