ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನ ಮಾಡಬೇಕಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಕಾನ್ಸ್ಟೆಬಲ್ ಆಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.
ಇದನ್ನೂ ಓದಿ : ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ದಿಶಾ ಮೋಹನ್.! ಏಷ್ಯನ್ ಪವರ್‌ಲಿಫ್ಟಿಂಗ್‌ನಲ್ಲಿ.!!
ಸಿಎಂ ಸಿದ್ದರಾಮಯ್ಯ ಅವರು ಕಾನ್‌ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಹೆಚ್ಚಳ ಮಾಡುವ ಕುರಿತು ಈ ಒಂದು ಬಾರಿ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ.
ಆದರೆ ಈ ಬಗ್ಗೆ ಗೃಹ ಸಚಿವರಿಂದ ಅಂತಿಮ ನಿರ್ಧಾರ ಹೊರ ಬೀಳಬೇಕಿದೆ. ಅವಾಗಿನವರೆಗೆ ಮೊದಲಿನಿಂತೆ ನಿಯಮ ಇರಲಿದೆ. ಒಂದು ವೇಳೆ ರಾಜ್ಯ ಸರ್ಕಾರ ವಯೋಮಿತಿಯನ್ನು ಹೆಚ್ಚಳ ಮಾಡಿದರೆ ಕಾನ್ಸ್ಟೆಬಲ್ ಹುದ್ದೆಗಳಿಗೆ ಭಾರೀ ಸಂಖ್ಯೆಯಲ್ಲಿ ಅರ್ಜಿಗಳು ಹರಿದು ಬರಲಿವೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸವು ತುಂಬಲಿದೆ.
ಇದನ್ನೂ ಓದಿ : ಚಿಕ್ಕೋಡಿ ಉಪವಿಭಾಗಕ್ಕೆ ಒಬ್ಬರು ಜಿಲ್ಲಾಧಿಕಾರಿಯವರನ್ನು ನೇಮಿಸಬೇಕೆಂದು ಸರಕಾರಕ್ಕೆ ಮನವಿ.!
ಕಾನ್‌ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಹೆಚ್ಚಳ ಮಾಡುವಂತೆ ಬೇಡಿಕೆ ಈಗಾಗಲೇ ಬಂದಿದೆ. ಒಂದು ಬಾರಿ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಲಾಗಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟು ಶೀಘ್ರದಲ್ಲೇ ನಡೆಸಬೇಕು ಎಂದು ಕೆಪಿಎಸ್ಸಿ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.