spot_img
spot_img

ಗೃಹಲಕ್ಷೀ ಮಹಿಳೆಯರಿಗೆ ಗೂಡ್ ನ್ಯೂಸ್!

spot_img
spot_img

Share post:

ಮಂಡ್ಯ: ಕೆಲವು ತಾಂತ್ರಿಕ ದೋಷಗಳಿಂದ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮೆ ಆಗಿರಲಿಲ್ಲ. ಇಂದಿನಿಂದ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಂಡ್ಯದಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.

ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಷಣ ಮಾಡುವಾಗ ಮಹಿಳೆಯರು ಗೃಹಲಕ್ಮಿ ಹಣ ಬಂದಿಲ್ಲ ಎಂದು ಹೇಳಿದ್ದರು. ಹೌದು, ತಾಂತ್ರಿಕ ಕಾರಣದಿಂದ ಹಣ ಬಂದಿರಲಿಲ್ಲ. ಆದರೆ, ಇಂದಿನಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಜಮೆಯಾಗಲಿದೆ. ಕಾಂಗ್ರೆಸ್​ ಪಕ್ಷ ನುಡಿದಂತೆ ನಡೆಯುವ ಪಕ್ಷ. ನಮಗೆ ಸಿಕ್ಕ ಅಧಿಕಾರದಲ್ಲಿ ಜನರಿಗೆ ಒಳ್ಳೆಯದು ಮಾಡುತ್ತೇವೆ. ಬರಗಾಲದಲ್ಲಿ ಪರಿಹಾರ ಕೊಡಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ಆದರೆ, ಬಿಜೆಪಿ ಭ್ರಷ್ಟ ಸರ್ಕಾರ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಟೀಕಿಸಿದರು.

ಮುಡಾ ಅವ್ಯವಹಾರದ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮಾಡುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಪ್ರತಿಕ್ರಿಯಿಸಿದ ಸಚಿವೆ, ಭ್ರಷ್ಟಾಚಾರದ ಭ್ರಹ್ಮಾಂಡವನ್ನೇ ತನ್ನ ಗರ್ಭದಲ್ಲಿಟ್ಟುಕೊಂಡಿರುವ ಇವರೆಡು ಪಕ್ಷಗಳು ಪಾದಯಾತ್ರೆ ಮಾಡುವ ನೈತಿಕತೆಯನ್ನು ಕಳೆದುಕೊಂಡಿವೆ. ಅಧಿಕಾರ ದಾಹದಿಂದ ಮುಡಾದಂತಹ ಪಿತೂರಿಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಜನ ಬಿಜೆಪಿ ಆಡಳಿತವನ್ನು ಈ ಹಿಂದೆ ಕಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿದ ಬಿಜೆಪಿ ಜೊತೆ ಕುಮಾರಣ್ಣ ಇದೀಗ ಅನ್ಯೋನ್ಯವಾಗಿದ್ದಾರೆ. ಜನರು ಮುರ್ಖರಲ್ಲ. ಎಲ್ಲವನ್ನೂ ನೋಡುತ್ತಿದ್ದಾರೆ ಎಂದು ಹರಿಹಾಯ್ದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಸಚಿವೆ, ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಶೂನ್ಯ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ಅನ್ಯಾಯವಾಗಿದೆ. ಇದೀಗ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಬಿಜೆಪಿ-ಜೆಡಿಎಸ್ ಎರಡು ಪಕ್ಷಗಳು ಗಿಮಿಕ್ ಮಾಡುತ್ತಿವೆ. ಕ್ಲೀನ್ ಇಮೇಜ್ ಹಾಳು ಮಾಡಲು ಮುಡಾ ಹಗರಣವನ್ನು ಸಿದ್ದರಾಮಯ್ಯ ತಲೆಗೆ ಕಟ್ಟಲು ಯತ್ನಿಸುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಾದ ಹಗರಣಗಳನ್ನು ಕರ್ನಾಟಕದ ಜನ ಮರೆತಿಲ್ಲ ಎಂದರು.

ಕೇಂದ್ರದ ಬಿಜೆಪಿ ಇಡಿ ಅಧಿಕಾರಿಗಳನ್ನು ಸೀಳುನಾಯಿಗಳ ತರ ಕಾಂಗ್ರೆಸ್ ಮೇಲೆ ಛೂ ಬಿಟ್ಟಿದ್ದಾರೆ. ಜೆಡಿಎಸ್-ಬಿಜೆಪಿ ಎರಡೂ ಪಕ್ಷಗಳು ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತೆಗೆಯಲು ವಾಮಮಾರ್ಗದಿಂದ ಪಿತೂರಿ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿ ಕುಳಿತು ಈ ಬಗ್ಗೆ ಸ್ಕೆಚ್ ಹಾಕುತ್ತಿದ್ದಾರೆ. ಬಡವರ ಪರವಾಗಿ ಕೆಲಸ ಮಾಡುತ್ತಿರುವ ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ಬೀಳಿಸಲು ಪಿತೂರಿ ನಡೆಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದರು

ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎನ್.ಚಲುವರಾಯಸ್ವಾಮಿ, ಸಂತೋಷ್ ಲಾಡ್, ಮುನಿಯಪ್ಪ ಸೇರಿದಂತೆ ಹಲವು ಕೈ ಮುಖಂಡರು ಬಿಜೆಪಿ ಹಾಗೂ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಿರುದ್ದ ಅಬ್ಬರಿಸಿದರು.

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...